Arrested: ಪಾರಿವಾಳ ಹಾರಿಸಿ ಕಳ್ಳತನ ಮಾಡುತ್ತಿದ್ದವ ಸೆರೆ!
Team Udayavani, Oct 8, 2024, 10:20 AM IST
ಬೆಂಗಳೂರು: ಬೀಗ ಹಾಕಿದ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಬೀಗ ಒಡೆದು ಕಳವು ಮಾಡುತ್ತಿದ್ದ ಆರೋಪಿಯನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಿಗಳರಪೇಟೆ ನಿವಾಸಿ ಮಂಜುನಾಥ್ ಅಲಿಯಾಸ್ ಪಾರಿವಾಳ ಮಂಜ(39) ಬಂಧಿತ. ಆರೋಪಿಯಿಂದ 30 ಲಕ್ಷ ರೂ. ಮೌಲ್ಯದ 475 ಗ್ರಾಂ ಚಿನ್ನಾಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನಗಳ ಜಪ್ತಿ ಮಾಡಲಾಗಿದೆ.
ಆರೋಪಿಯು ಆರಂಭದಲ್ಲಿ ಕಟ್ಟಡಗಳ ಮೇಲೆ ನಿಂತು ಪಾರಿವಾಳ ಹಾರಿಸುತ್ತಿದ್ದ. ಬಳಿಕ ಪರಿವಾಳ ಹಿಡಿ ದುಕೊಳ್ಳುವ ನೆಪದಲ್ಲಿ ಬೀಗ ಹಾಕಿದ ಮನೆಗಳ ಬೀಗ ಮುರಿದು ಕಳವು ಮಾಡಿ ಪರಾರಿಯಾಗುತ್ತಿದ್ದ. ಹೀಗಾಗ ಈತನನ್ನು ಪಾರಿವಾಳ ಮಂಜ ಎಂದೂ ಕರೆಯ ಲಾಗುತ್ತದೆ. ಇತ್ತೀಚೆಗೆ ಹಗಲಿನಲ್ಲಿ ನಗರದ ವಿವಿಧೆಡೆ ಸುತ್ತಾಡಿ ಬೀಗ ಹಾಕಿದ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ. ಕದ್ದ ಮಾಲುಗಳನ್ನು ವಿವಿಧ ಜ್ಯುವೆಲ್ಲರಿ ಅಂಗಡಿಗಳಲ್ಲಿ ವಿಲೇವಾರಿ ಮಾಡಿ ಮೋಜು-ಮಸ್ತಿ ಮಾಡುತ್ತಿದ್ದ.
ಚಿಕ್ಕಪೇಟೆ ನಿವಾಸಿ ಉಪೇಶ್ ಭಂಡಾರಿ ಎಂಬುವರು ಮನೆಯ ಬೀಗ ಹಾಕಿಕೊಂಡು ಕಾರ್ಯನಿಮಿತ್ತ ಊರಿಗೆ ಹೋಗಿದ್ದರು. ಕಳೆದ ಏ. 5ರಂದು ವಾಪಸ್ ಬಂದಾಗ ಮನೆಯ ಬೀಗ ಮುರಿದು ಕಳವು ಮಾಡಿರುವುದು ಗೊತ್ತಾಗಿದೆ. ಈ ಸಂಬಂಧ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ವಿರುದ್ಧ 30 ಮನೆಗಳ್ಳತನ ಕೇಸ್:
ಆರೋಪಿ ಮಂಜುನಾಥ ವೃತ್ತಿಪರ ಕಳ್ಳನಾಗಿದ್ದು, ಹಲವು ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದಾನೆ. ಈತನ ವಿರುದ್ಧ ಈ ಹಿಂದೆ ಚಿಕ್ಕಪೇಟೆ, ಹಲಸೂರು ಗೇಟ್, ಎಸ್.ಜೆ.ಪಾರ್ಕ್, ಬನಶಂಕರಿ, ಶಂಕರಪುರ, ವಿದ್ಯಾರಣ್ಯಪುರ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 30ಕ್ಕೂ ಅಧಿಕ ಮನೆ ಕಳವು ಪ್ರಕರಣಗಳು ದಾಖಲಾಗಿವೆ. ಹಲವು ಬಾರಿ ಜೈಲಿಗೆ ಹೋಗಿ, ಜಾಮೀನು ಪಡೆದು ಹೊರಗೆ ಬಂದರೂ, ಮತ್ತೆ ತನ್ನ ಕಳವು ಚಾಳಿ ಮುಂದುವರಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. 5 ತಿಂಗಳ ಹಿಂದೆಯಷ್ಟೇ ಜಾಮೀನು ಪಡೆದು ಬಿಡುಗಡೆಯಾಗಿದ್ದ ಆರೋಪಿ, ನಗರದ ವಿವಿಧೆಡೆ ಮತ್ತೆ ಮನೆಗಳವು ಮಾಡಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.