Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್
Team Udayavani, Oct 8, 2024, 5:41 PM IST
ಹುಬ್ಬಳ್ಳಿ: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನನಗೆ ಯಾವುದೇ ನಂಬಿಕೆ ಇಲ್ಲ. ಕರ್ನಾಟಕದಲ್ಲೂ ಅದು ಸುಳ್ಳಾಗಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮಂಗಳವಾರ (ಅ.08) ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರ್ಯಾಣ ಮತ್ತು ಜಮ್ಮು-ಕಾಶ್ಮೀರ ಚುನಾವಣೆ ಫಲಿತಾಂಶ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಹರ್ಯಾಣದಲ್ಲಿ ಯಾಕೆ ಹಿನ್ನಡೆಯಾಗಿದೆ ಎಂಬುದರ ಬಗ್ಗೆ ಪಕ್ಷದೊಳಗೆ ಚರ್ಚೆಯಾಗುತ್ತದೆ. ಹರ್ಯಾಣವು ದೆಹಲಿಗೆ ಹತ್ತಿರವಿರುವ ರಾಜ್ಯ. ರಾಜಕೀಯವಾಗಿ ಸಾಕಷ್ಟು ಮಹತ್ವವಿದೆ. ಅಲ್ಲಿ ಅಧಿಕಾರಕ್ಕೆ ಬರುವ ನಿರೀಕ್ಷೆ ಇತ್ತು. ಆದರೆ ಹುಸಿಯಾಗಿದೆ ಎಂದರು.
ಜಮ್ಮು-ಕಾಶ್ಮೀರಲ್ಲಿ ಇಂಡಿಯಾ ಒಕ್ಕೂಟಕ್ಕೆ ಗೆಲುವಾಗಿದೆ. ಬಹಳ ದಿನದ ನಂತರ ಚುನಾವಣೆ ನಡೆದಿತ್ತು. ನಮಗೆ ಗೆಲುವಾಗಿದೆ ಎಂದರು.
ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಯಾವುದೇ ಚರ್ಚೆ ಇಲ್ಲ. ಯಾವುದೇ ಲಾಭಿ ಮತ್ತು ಘೋಷಣೆಯೂ ಇಲ್ಲ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಕೆಳಗೆ ನಾವು ಕೆಲಸ ಮಾಡುತ್ತಿದ್ದೇವೆ ಎಂದರು.
ತಾವು ಮುಖ್ಯಮಂತ್ರಿ ಆಗುವ ಅವಕಾಶವಿದೆಯೇ ಎಂಬ ಪ್ರಶ್ನೆಗೆ, ಸಿದ್ದರಾಮಯ್ಯ ಇದ್ದಾರಲ್ಲರೀ ಎಂದರು.
ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಶೀಘ್ರದಲ್ಲೇ ಪಕ್ಷದಿಂದ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಂದ ಡಿಕೆ, ಡಿಕೆ, ಡಿ.ಕೆ. ಶಿವಕುಮಾರ್ ಎಂಬ ಘೋಷಣೆಗಳು ಕೇಳಿಬಂದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣಗೆ ಮರಣೋತ್ತರ “ಕರ್ನಾಟಕ ರತ್ನ’ ನೀಡಿ: ಅಶೋಕ್
Hunasur: ಗೊಮ್ಮಟಗಿರಿಯಲ್ಲಿ ಮೂರು ದಿನಗಳ ಕಾಲ ಬಾಹುಬಲಿ ಮಸ್ತಕಾಭಿಷೇಕ
ಬೆಳಗಾವಿ ಘಟನೆ: ಹೋರಾಟಗಾರರ ವಿರುದ್ದದ ಎಲ್ಲ ಪ್ರಕರಣ ರದ್ಧುಪಡಿಸಬೇಕು: ವಚನಾನಂದ ಸ್ವಾಮೀಜಿ
Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
Sagara: ಖಾಸಗಿ ಲಾಡ್ಜ್‌ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.