Haryana-JK Election: ಎರಡೂ ರಾಜ್ಯಗಳಲ್ಲಿ ಎಕ್ಸಿಟ್ ಪೋಲ್ ಫೇಲ್!
Team Udayavani, Oct 9, 2024, 6:39 AM IST
ಹೊಸದಿಲ್ಲಿ: ಹರ್ಯಾಣ ಹಾಗೂ ಜಮ್ಮು- ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸಮೀಕ್ಷೆಗಳು ಮತ್ತೂಮ್ಮೆ ವೈಫಲ್ಯ ಕಂಡಿವೆ. ಹರ್ಯಾಣದಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಜಯಭೇರಿ ಬಾರಿಸುವುದಾಗಿ ಮತಗಟ್ಟೆ ಸಮೀಕ್ಷೆಗಳು ಷರಾ ಬರೆದಿದ್ದರೂ ಮತದಾರ ವ್ಯತಿರಿಕ್ತ ಫಲಿತಾಂಶ ನೀಡಿದ್ದು, ಬಿಜೆಪಿ ಪೂರ್ಣ ಬಹುಮತದೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು 2 ಸಮೀಕ್ಷೆಗಳು ಹೇಳಿದ್ದರೂ, ಅಲ್ಲೀಗ ಕಾಂಗ್ರೆಸ್ ಮೈತ್ರಿಕೂಟ ಆಡಳಿತ ಚುಕ್ಕಾಣಿ ಹಿಡಿಯಲಿದೆ.
ಈ ಮೊದಲು ಲೋಕಸಭಾ ಚುನಾವಣೆ ವೇಳೆಯೂ ಮತಗಟ್ಟೆ ಸಮೀಕ್ಷೆಗಳು ಉಲ್ಟಾ ಆಗಿದ್ದವು. ಆಗ ಎನ್‌ಡಿಎ ಮೈತ್ರಿಕೂಟಕ್ಕೆ 543 ಸೀಟುಗಳಲ್ಲಿ 350 ಸೀಟುಗಳು ಒಲಿಯಲಿವೆ ಎಂದು ಸಮೀಕ್ಷೆಗಳು ಹೇಳಿದ್ದವು. ಆದರೆ, ಬಂದಿದ್ದು 240 ಸೀಟುಗಳು. ಇದೀಗ ಹರ್ಯಾಣ ಮತ್ತು ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ಪುನರಾವರ್ತನೆಯಾಗಿದೆ.
ಬಹುತೇಕ ಸಮೀಕ್ಷೆಗಳು ಹರ್ಯಾಣದಲ್ಲಿ ಕಾಂಗ್ರೆಸ್‌ಗೆ ಸುಮಾರು 54, ಬಿಜೆಪಿಗೆ 26 ಸೀಟುಗಳು ಬರಲಿವೆ ಎಂದು ವರದಿ ಮಾಡಿದ್ದವು. ಆದರೆ, ಈಗ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ. ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ ಜಯ ಸಾಧಿಸುವುದಾಗಿ 3 ಸಮೀಕ್ಷೆಗಳು ಹೇಳಿದ್ದು ನಿಜವಾಗಿದೆ. ಉಳಿದೆರಡು ಸಮೀಕ್ಷೆ ಸೋತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ
Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.