Internal Reservation: ಬಸವರಾಜ್‌ ಬೊಮ್ಮಾಯಿ ಅವಧಿಯ ಒಳಮೀಸಲಿಗೆ ಬಿಜೆಪಿ ಒತ್ತಡ

ರಾಜ್ಯ ಸರಕಾರದ ಮೇಲೆ ಒತ್ತಡ ಹೇರಲು ತಂತ್ರಗಾರಿಕೆ ಬಿಜೆಪಿ ನಿಯೋಗದಿಂದ ಶೀಘ್ರವೇ ಮುಖ್ಯಮಂತ್ರಿ ಭೇಟಿ

Team Udayavani, Oct 9, 2024, 7:30 AM IST

BJP-Camp

ಬೆಂಗಳೂರು: ಜಾತಿಗಣತಿ ವರದಿ ಮಂಡನೆಗೆ ಬಿಜೆಪಿ ವಿರೋಧವಿಲ್ಲ ಎಂಬ ಸಂದೇಶ ರವಾನಿಸುವುದರ ಜತೆಗೆ, ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಂತೆ ಸರಕಾರದ ಮೇಲೆ ಒತ್ತಡ ಹೇರಲೂ ವಿಪಕ್ಷ ಬಿಜೆಪಿ ತಂತ್ರ ರೂಪಿಸಿದೆ. ಶೀಘ್ರದಲ್ಲೇ ಬಿಜೆಪಿಯ ನಿಯೋಗವು ಸಿದ್ದರಾಮಯ್ಯರನ್ನು ಭೇಟಿ ಮಾಡಿ ಆಗ್ರಹಿಸಲು ನಿರ್ಧರಿಸಿದೆ.

ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸ್ಪಷ್ಟ ನಿರ್ಣಯಕ್ಕೆ ಬರಲಾಗಿದ್ದು, ಬಿಜೆಪಿ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಶಿಫಾರಸು ಮಾಡಿದ್ದ ಮೀಸಲಾತಿ ವರ್ಗೀಕರಣವನ್ನೇ ಅನುಷ್ಠಾನಕ್ಕೆ ತರುವಂತೆ ಸಿಎಂಗೆ ಆಗ್ರಹಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಮಾಜಿ ಕಾನೂನು ಸಚಿವ ಮಾಧುಸ್ವಾಮಿ ನೇತೃತ್ವದ ಸಚಿವ ಸಂಪುಟದ ಉಪಸಮಿತಿಯ ಶಿಫಾರಸುಗಳು, ಬಸವರಾಜ ಬೊಮ್ಮಾಯಿ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು, ಅದರಿಂದ ಪರಿಶಿಷ್ಟ ಜಾತಿಗೆ ಆಗಿದ್ದ ಲಾಭ ಹಾಗೂ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌ ಯಾವ ರೀತಿ ದಾರಿ ತಪ್ಪಿಸಿತ್ತು? ಎಂಬಿತ್ಯಾದಿ ಅಂಶಗಳನ್ನು ಮುಂದಿಟ್ಟುಕೊಂಡು ಸಭೆಯಲ್ಲಿ ಚರ್ಚಿಸಲಾಯಿತು. ಸಾಕಷ್ಟು ಚರ್ಚೆ ನಡೆಸಿದ ಅನಂತರ 2 ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದ್ದು, ಯಾವ ಹಂತದಲ್ಲಿಯೂ 2 ನಿರ್ಣಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ವಿಫ‌ಲರಾಗಬಾರದು ಎನ್ನುವ ಎಚ್ಚರಿಕೆಯ ಹೆಜ್ಜೆ ಇಡಲೂ ಚಿಂತನ-ಮಂಥನ ನಡೆದಿದೆ.

ಜಾತಿಗಣತಿ ವರದಿ ಮಂಡನೆಗೆ ವಿರೋಧವಿಲ್ಲ
ಪ್ರಮುಖವಾಗಿ ಕಾಂತರಾಜು ಹಾಗೂ ಜಯಪ್ರಕಾಶ್‌ ಹೆಗ್ಡೆ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಕೊಟ್ಟಿರುವ ವರದಿಯನ್ನು ಸಚಿವ ಸಂಪುಟ ಸಭೆಯ ಮುಂದೆ ಮಂಡಿಸಲು ಬಿಜೆಪಿ ವಿರೋಧವಿಲ್ಲ ಎಂಬುದನ್ನು ಜನರಿಗೆ ಸ್ಪಷ್ಟಪಡಿಸಲು ನಿರ್ಣಯ ಕೈಗೊಂಡಿದೆ. ವರದಿ ಮಂಡನೆಗೆ ಬಿಜೆಪಿ ವಿರೋಧವಿದೆ ಎನ್ನುವುದರ ಮೂಲಕ ಮೀಸಲಾತಿ ವಿರೋಧಿ ಎನ್ನುವ ಹಣೆಪಟ್ಟಿ ಕಟ್ಟಲು ಆಡಳಿತಾರೂಢ ಕಾಂಗ್ರೆಸ್‌ ಮುಂದಾಗಿದೆ ಎಂಬುದೂ ಸಭೆಯಲ್ಲಿ ಚರ್ಚೆಯಾಗಿದೆ.

ಹೀಗಾಗಿ ಜಾತಿಗಣತಿ ವರದಿ ಮಂಡನೆಗೆ ಬಿಜೆಪಿ ವಿರೋಧವಿಲ್ಲ. ವರದಿ ಅವೈಜ್ಞಾನಿಕವಾಗಿದೆ ಎಂದು ಆಡಳಿತ ಪಕ್ಷದವರೇ ಹೇಳುತ್ತಿದ್ದಾರೆ. ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ. ಅದನ್ನು ಮೊದಲು ನಿವಾರಿಸಿ, ನಿಮ್ಮ ಪಕ್ಷದವರನ್ನು ಒಪ್ಪಿಸಿ, ಸಹಮತದೊಂದಿಗೆ ಬನ್ನಿ ಎಂದು ಸರಕಾರದೆಡೆಗೇ ಬೊಟ್ಟು ಮಾಡಲು ತುದಿಗಾಲಲ್ಲಿ ನಿಂತಿದೆ. ಸಂಪುಟದ ಮುಂದೆ ಒಮ್ಮೆ ವರದಿ ಮಂಡನೆಯಾದ ಬಳಿಕ ಪಕ್ಷದ ನಿಲುವು ತಿಳಿಸೋಣ ಎನ್ನುವ ತೀರ್ಮಾನಕ್ಕೆ ಸಭೆ ಬಂದಿದೆ.

ಗುರುವಾರ ಅಥವಾ ದಸರಾ ಬಳಿಕ ಸಿಎಂ ಭೇಟಿ
ಒಳಮೀಸಲಾತಿ ಜಾರಿಗಾಗಿ ಸಂವಿಧಾನದ ತಿದ್ದುಪಡಿ, ಕೇಂದ್ರ ಸರಕಾರದ ಮೊರೆ ಹೋಗುವ ಆವಶ್ಯಕತೆ ಇಲ್ಲ. ಆಯಾ ರಾಜ್ಯ ಸರಕಾರಗಳಿಗೇ ನಿರ್ಧರಿಸಬಹುದು ಎಂದು ಸುಪ್ರೀಂ ಕೋರ್ಟ್‌ ತೀರ್ಪು ಕೊಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸರಕಾರಕ್ಕೆ ಮನವಿ ಕೊಟ್ಟು ಮೀಸಲಾತಿ ವರ್ಗೀಕರಣಕ್ಕೆ ಒತ್ತಾಯಿಸುವ 2ನೇ ನಿರ್ಣಯವನ್ನು ಸಭೆಯಲ್ಲಿ ಕೈಗೊಂಡಿದೆ.

ಇದಕ್ಕಾಗಿ ವಿಪಕ್ಷ ನಾಯಕರಾದ ಆರ್‌. ಅಶೋಕ, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಗೋವಿಂದ ಕಾರಜೋಳ ನೇತೃತ್ವದಲ್ಲಿ ಇದಕ್ಕಾಗಿ ನಿಯೋಗ ರಚಿಸಿದ್ದು, ಅ.10ರ ಗುರುವಾರ ಅಥವಾ ದಸರಾ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಸದಾಶಿವ ಆಯೋಗದ ವರದಿಯನ್ನು ಬಿಜೆಪಿ ಸರಕಾರ ತಿರಸ್ಕರಿಸಿದ್ದು, ಆ ಪ್ರಶ್ನೆ ಈಗ ಉದ್ಭವಿಸುವುದಿಲ್ಲ. ಹೀಗಾಗಿ ಬಸವರಾಜ ಬೊಮ್ಮಾಯಿ ಸರಕಾರ ಕೈಗೊಂಡ ನಿರ್ಣಯ ಸೂಕ್ತವಾಗಿದ್ದು, ಅದನ್ನೇ ಜಾರಿಗೊಳಿಸುವಂತೆ ಒತ್ತಾಯಿಸಲು ನಿರ್ಣಯಿಸಿದೆ.

ಒಳಮೀಸಲಿನ ಒಳಹೂರಣ
ಈ ಹಿಂದೆ ನ್ಯಾ| ಸದಾಶಿವ ಆಯೋಗ ನೀಡಿದ್ದ ವರದಿಯಲ್ಲಿನ ಅಂಶಗಳನ್ನು ಪರಿಶೀಲಿಸಲು ಗೋವಿಂದ ಕಾರಜೋಳ, ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿ ಕೆಲ ಶಿಫಾರಸುಗಳನ್ನು ಸಂಪುಟ ಸಭೆಯ ಮುಂದಿಟ್ಟಿತ್ತು. ಸದಾಶಿವ ಆಯೋಗದ ಮೂಲ ವರದಿಯಲ್ಲಿ ಶೇ. 3ರಷ್ಟು ಮೀಸಲಾತಿ ಪಡೆಯುತ್ತಿದ್ದ ಸ್ಪೃಶ್ಯರನ್ನು (ಲಂಬಾಣಿ, ಬೋವಿ, ಕೊರಚ, ಕೊರಮ ಇತ್ಯಾದಿ) ಮೀಸಲಾತಿಯಿಂದಲೇ ಹೊರಗಿಡುವ ಶಿಫಾರಸು ಇತ್ತು. ಆದರೆ ಈ ವರದಿಯಲ್ಲಿದ್ದ ಉಪವರ್ಗವಾರು ದತ್ತಾಂಶವನ್ನು ಆಧಾರವಾಗಿ ಇಟ್ಟುಕೊಂಡು ಸ್ಪೃಶ್ಯರಿಗಿದ್ದ ಶೇ. 3ರಷ್ಟು ಒಳಮೀಸಲನ್ನು ಶೇ. 4.5ಕ್ಕೆ ಏರಿಸಲು ಉಪಸಮಿತಿ ಶಿಫಾರಸು ಮಾಡಿತ್ತು.

ಅದೇ ರೀತಿ ಶೇ.5ರಷ್ಟಿದ್ದ ಬಲಗೈ ಸಮುದಾಯದ ಮೀಸಲನ್ನು ಶೇ. 5.5, ಎಡಗೈ ಸಮುದಾಯಕ್ಕೆ ಶೇ.6 ಹಾಗೂ ಇತರೆ (ಅಲೆಮಾರಿ, ಅರೆಅಲೆಮಾರಿ ಇತ್ಯಾದಿ) ಸಮುದಾಯಕ್ಕೆ ಶೇ.1ರಷ್ಟು ಸೇರಿ ಒಟ್ಟು ಶೇ. 15ರಿಂದ ಶೇ. 17ಕ್ಕೆ ಮೀಸಲಾತಿ ಹೆಚ್ಚಿಸಲು ಬಸವರಾಜ ಬೊಮ್ಮಾಯಿ ಸರಕಾರ ನಿರ್ಣಯ ಕೈಗೊಂಡಿತ್ತು. ಸ್ಪೃಶ್ಯರಿಗೆ ಮೀಸಲು ಹೆಚ್ಚಿಸಿದ್ದರಿಂದ ಕೆಲವರು ಅಸಮಾಧಾನಗೊಂಡರೆ, ಎಡಗೈ ಸಮುದಾಯಕ್ಕೆ ಹೆಚ್ಚಿಗೆ ಮೀಸಲಾತಿ ಕೊಟ್ಟಿದ್ದರಿಂದ ಬಲಗೈ ಸಮುದಾಯದ ಕಣ್ಣು ಕೆಂಪಾಗಿತ್ತು. ಇದರಿಂದ ಕೆಲ ದಲಿತ ಸಂಘಟನೆಗಳು ಈ ನಿರ್ಣಯದ ವಿರುದ್ಧ ತಿರುಗಿಬಿದ್ದರೆ, ಕೆಲ ಸಂಘಟನೆಗಳು ಪರ ನಿಂತವು. ಇನ್ನೂ ಹಲವು ಸಂಘಟನೆಗಳು ತಟಸ್ಥ ನೀತಿ ಅನುಸರಿಸಿದ್ದವು.


ಹಿಂದಿನ ಬೊಮ್ಮಾಯಿ ಸರಕಾರ ಕೇಂದ್ರಕ್ಕೆ ಮಾಡಿದ ಶಿಫಾರಸನ್ನು ರಾಜ್ಯದ ಕಾಂಗ್ರೆಸ್‌ ಸರಕಾರ ಯಥಾವತ್ತಾಗಿ ಜಾರಿಗೊಳಿಸಬೇಕು. ಶೀಘ್ರವೇ ಬಿಜೆಪಿ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಬಗ್ಗೆ ಒತ್ತಾಯಿಸಲಿದೆ.

– ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.