Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !
ಲೆಕ್ಕಾಚಾರ ಯಶಸ್ವಿ... 74 ರ ಹರೆಯದಲ್ಲೂ ಉತ್ಸಾಹದ ರಾಜಕಾರಣ... ಪುತ್ರ ಬಿಜೆಪಿ ಸಂಸದ!
ವಿಷ್ಣುದಾಸ್ ಪಾಟೀಲ್, Oct 9, 2024, 11:25 AM IST
ಹರಿಯಾಣ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ರೆಬೆಲ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ 35.5 ಬಿಲಿಯನ್ ಡಾಲರ್ ಸಂಪತ್ತಿನೊಂದಿಗೆ ಫೋರ್ಬ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತದ ಶ್ರೀಮಂತ ಮಹಿಳೆಯರಲ್ಲಿ ಒಬ್ಬರಾದ ಸಾವಿತ್ರಿ ಜಿಂದಾಲ್(Savitri Jindal) ಗೆಲುವು ಸಾಧಿಸಿದ್ದಾರೆ.
ಪ್ರಮುಖವಾಗಿ ಬಿಜೆಪಿಯ ಕುರುಕ್ಷೇತ್ರ ಸಂಸದ ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಅವರ ತಾಯಿ,ಶ್ರೀಮಂತ ಮಹಿಳಾ ಉದ್ಯಮಿ ಸಾವಿತ್ರಿ ಜಿಂದಾಲ್ ಅವರು ಹಿಸಾರ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಗೆಲುವಿನ ಸಿಹಿ ಕಂಡಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಜಿದ್ದಾಜಿದ್ದಿನ ಹೋರಾಟದಲ್ಲಿ ಮೂವರು ಪಕ್ಷೇತರರು ಆಯ್ಕೆಯಾಗಿದ್ದಾರೆ. ಆ ಪೈಕಿ ಸಾವಿತ್ರಿ ಹೆಚ್ಚು ಸುದ್ದಿಯಾಗಿದ್ದಾರೆ. ಹಿಸಾರ್ ವಿಧಾನಸಭಾ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿತ್ತು.
74 ರ ಹರೆಯದ ಸಾವಿತ್ರಿ ಜಿಂದಾಲ್ ಉತ್ಸಾಹದ ರಾಜಕಾರಣ ಮುಂದುವರಿಸಲು ಬಯಸಿ ಹಿಸಾರ್‌ನಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಬಯಸಿದ್ದರು, ಆದರೆ ಬಿಜೆಪಿ ಟಿಕೆಟ್ ನಿರಾಕರಿಸಿ ಹಾಲಿ ಶಾಸಕ ಮತ್ತು ಸಚಿವ ಡಾ.ಕಮಲ್ ಗುಪ್ತಾ ಅವರಿಗೆ ಟಿಕೆಟ್ ನೀಡಿತ್ತು. ಸಾವಿತ್ರಿ ಅವರು ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ್ ವಿರುದ್ಧ 18941 ಮತಗಳ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಗುಪ್ತಾ 17385 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ.
ಕಾಂಗ್ರೆಸ್ ಕೂಡ ಸಾವಿತ್ರಿ ಅವರನ್ನು ಸೆಳೆಯಲು ಯತ್ನ ನಡೆಸಿತ್ತು. ಆದರೆ ಅವರು ಪಕ್ಕಾ ರಾಜಕೀಯ ಲೆಕ್ಕಾಚಾರ ಮಾಡಿ ಪಕ್ಷೇತರರಾಗಿಯೇ ಕಣಕ್ಕಿಳಿದಿದ್ದರು. ಭೂಪಿಂದರ್ ಸಿಂಗ್ ಹೂಡಾ ನನ್ನ ಅಣ್ಣನಿದ್ದಂತೆ, ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇನೆ, ಅವರಿಂದಲೇ ನಾನು ರಾಜಕೀಯವನ್ನು ಕಲಿತಿದ್ದೇನೆ. ನಾನು ರಾಜಕೀಯಕ್ಕೆ ಬಂದಾಗ ನನಗೆ ಹೆಚ್ಚು ತಿಳಿದಿರಲಿಲ್ಲ. ಅವರಿಂದ ನಾನು ಸಾಕಷ್ಟು ಕಲಿತಿದ್ದೇನೆ. ನಾನು ಹಿಸಾರ್ ಜನರಿಗೆ ಮಾತ್ರ ಸೇವೆ ಸಲ್ಲಿಸಲು ಬಯಸುತ್ತೇನೆ. ಜನರಿಗೆ ಸೇವೆ ಸಲ್ಲಿಸಲು ರಾಜಕೀಯ ಒಂದು ವೇದಿಕೆಯಾಗಿದೆ. ಇದನ್ನೇ ನಾನು ಮಾಡಬೇಕೆಂದಿದ್ದೇನೆ” ಎಂದು ಸಾವಿತ್ರಿ ಜಿಂದಾಲ್ ನಾಪಪತ್ರ ಸಲ್ಲಿಸುವ ಮುನ್ನ ಹೇಳಿಕೆ ನೀಡಿದ್ದರು.
ಬಿಜೆಪಿ ನಾಯಕರಿಗೂ, ಪುತ್ರನಿಗೂ ಸಾವಿತ್ರಿ ಅವರನ್ನು ಮನವೊಲಿಸುವುದು ಸಾಧ್ಯವಾಗಿರಲಿಲ್ಲ. ಕಣಕ್ಕಿಳಿದು ಭರ್ಜರಿ ಪ್ರಚಾರ ನಡೆಸಿದ್ದ ಅವರು ತನ್ನ ಪ್ರಭಾವದ ಸಿರಿವಂತಿಕೆಯಿಂದ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಹರಿಯಾಣದಲ್ಲಿ ಹ್ಯಾಟ್ರಿಕ್ ಸಾಧಿಸಿ ಬಿಜೆಪಿ ಅಧಿಕಾರಕ್ಕೇರಿದ್ದು ಕ್ಷೇತ್ರದ ಜನರ ಹಿತದೃಷ್ಟಿಯಿಂದ, ಪುತ್ರನ ರಾಜಕೀಯ ಭವಿಷ್ಯದ ಕಾರಣಕ್ಕಾಗಿ ಸಾವಿತ್ರಿ ಅವರು ಸರಕಾರವನ್ನು ಬೆಂಬಲಿಸುವ ಎಲ್ಲ ಸಾಧ್ಯತೆಗಳಿವೆ.
ಓ.ಪಿ. ಜಿಂದಾಲ್ ಎಂದೇ ಪ್ರಸಿದ್ಧರಾಗಿದ್ದ ದಿವಂಗತ ಓಂ ಪ್ರಕಾಶ್ ಜಿಂದಾಲ್ ಅವರು ಹರಿಯಾಣದ ಹಿಸಾರ್‌ನವರು. ಅವರು ಜಿಂದಾಲ್ ಸಂಸ್ಥೆಯ ಅಡಿಯಲ್ಲಿ ಜಿಂದಾಲ್ ಸ್ಟೀಲ್ ಮತ್ತು ಪವರ್, JSW ಗ್ರೂಪ್ ಮತ್ತು ಜಿಂದಾಲ್ ಸ್ಟೇನ್‌ಲೆಸ್ ಲಿಮಿಟೆಡ್ ಸೇರಿದಂತೆ ದಿಗ್ಗಜ ವ್ಯಾಪಾರ ಉದ್ಯಮಗಳನ್ನು ಸ್ಥಾಪಿಸಿದ್ದರು. ಪುತ್ರ ನವೀನ್ ಜಿಂದಾಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಸಂಸದರಾಗಿ ಆಯ್ಕೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.