Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್ ಶಕ್ತಿಕಾಂತ್ ದಾಸ್
ಎಂಪಿಸಿಗೆ ಮೂವರನ್ನು ನೂತನ ಸದಸ್ಯರನ್ನಾಗಿ ಸೇರ್ಪಡೆಗೊಳಿಸಲಾಗಿದೆ
Team Udayavani, Oct 9, 2024, 11:30 AM IST
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(Reserve Bank Of India) ನ ಹಣಕಾಸು ನೀತಿ ಸಮಿತಿಯು ಸತತ 10ನೇ ಬಾರಿಯೂ ರೆಪೋ (Repo Rate) ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವ ನಿರ್ಧಾರ ಕೈಗೊಂಡಿರುವುದಾಗಿ ಬುಧವಾರ (ಅ.09) ತಿಳಿಸಿದೆ.
ರೆಪೋ ದರದಲ್ಲಿ ಈ ಹಿಂದಿನಂತೆ ಶೇ.6.5ರಲ್ಲೇ ಮುಂದುವರಿಸುವ ತೀರ್ಮಾನ ಮೂರು ದಿನಗಳ ಕಾಲ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಆರ್ ಬಿಐ (RBI) ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಹಣದುಬ್ಬರವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಈ ಬಾರಿಯೂ ರೆಪೋ ದರವನ್ನು ಶೇ.6.5ನ್ನು ಯಥಾಸ್ಥಿತಿ ಕಾಪಾಡಿಕೊಳ್ಳಲು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶಕ್ತಿಕಾಂತ್ ದಾಸ್ ಹೇಳಿದರು.
ಇದನ್ನೂ ಓದಿ:Ankola:ಸಂಭವನೀಯ ರೈಲು ಅಪಘಾತ ತಪ್ಪಿಸಿದ ಟ್ರ್ಯಾಕ್ ಮ್ಯಾನ್ ಗೆ ರೈಲು ಅಧಿಕಾರಿಗಳಿಂದ ಸನ್ಮಾನ
ಈ ಬಾರಿ ಹಣಕಾಸು ನೀತಿ ಸಮಿತಿ(MPC)ಗೆ ತೆರವುಗೊಂಡ ಸದಸ್ಯರ ಸ್ಥಾನವನ್ನು ಭರ್ತಿ ಮಾಡಲಾಗಿದ್ದು, ಎಂಪಿಸಿಗೆ ನೂತನ ಮೂವರು ಸದಸ್ಯರನ್ನು ನೇಮಕ ಮಾಡಲಾಗಿದೆ. ದೆಹಲಿ ಸ್ಕೂಲ್ ಆಫ್ ಎಕಾನಾಮಿಕ್ಸ್ ನ ನಿರ್ದೇಶಕ ಪ್ರೊ.ರಾಮ್ ಸಿಂಗ್, ಆರ್ಥಿಕತಜ್ಞ, ದೆಹಲಿ ಯೂನಿರ್ವಸಿಟಿಯ ಸುಗತಾ ಭಟ್ಟಾಚಾರ್ಯ, ಇನ್ಸಿಟಿಟ್ಯೂಟ್ ಫಾರ್ ಸ್ಟಡೀಸ್ ಇನ್ ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ನ ನಿರ್ದೇಶಕ ಡಾ.ನಾಗೇಶ್ ಕುಮಾರ್ ಅವರನ್ನು ಎಂಪಿಸಿಗೆ ನೂತನ ಸದಸ್ಯರನ್ನಾಗಿ ಸೇರ್ಪಡೆಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Mother: ಅಮ್ಮನ ಜೀವನವೇ ಆದರ್ಶ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.