Toxic Movie: ಮುಂಬೈನತ್ತ ಯಶ್ ಟಾಕ್ಸಿಕ್ ಪಯಣ
Team Udayavani, Oct 9, 2024, 6:47 PM IST
ರಾಕಿಂಗ್ ಸ್ಟಾರ್ ಯಶ್ ಅವರ ಮುಂಬರುವ ಬಹು ನಿರೀಕ್ಷಿತ ಸಿನಿಮಾ ಟಾಕ್ಸಿಕ್. ಕೆಜಿಎಫ್ 2 ದೊಡ್ಡ ಬ್ರೇಕ್ ನೀಡಿದ ನಂತರ ಯಶ್ ಅಭಿನಯಿಸುತ್ತಿರುವ ಸಿನಿಮಾವಿದು.
ಸದ್ಯ ಎರಡನೇ ಹಂತದ ಚಿತ್ರೀಕರಣಕ್ಕಾಗಿ ಇಡೀ ಚಿತ್ರತಂಡ ಮುಂಬೈಗೆ ತೆರಳಿದೆ. ಕೆಲ ವಾರಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಚಿತ್ರದ ಮುಹೂರ್ತ ನೆರವೇರಿ, ಚಿತ್ರೀಕರಣವೂ ಆರಂಭವಾಗಿತ್ತು. ಬೆಂಗಳೂರಿನ ಸೆಟ್‌ನಲ್ಲಿ ನಡೆದ ಮೊದಲ ಹಂತದ ಚಿತ್ರೀಕರಣದಲ್ಲಿ ಖ್ಯಾತ ನಟಿ ನಯನತಾರಾ, ಬಾಲಿವುಡ್ ಹಾಗೂ ಹಾಲಿವುಡ್ ಕಲಾವಿದರು ಬಂದು ಭಾಗವಹಿಸಿದ್ದರು.
ಸದ್ಯ ಮುಂಬೈಗೆ ತೆರಳಿರುವ ಟಾಕ್ಸಿಕ್ ಚಿತ್ರತಂಡ ಅಲ್ಲಿ ವಿಎಫ್ಎಕ್ಸ್ ಭಾಗ ಹಾಗೂ ಇತರ ಸನ್ನಿವೇಶಗಳ ಚಿತ್ರೀಕರಣ ನಡೆಸಲಿದೆ. ಇದಕ್ಕಾಗಿ ಚಿತ್ರತಂಡ 45 ದಿನಗಳ ಕಾಲ ಮುಂಬೈನಲ್ಲಿ ಇರಲಿದೆ. ಇದೇ ಸಮಯದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.
ಮಲಯಾಳಿ ನಿರ್ದೇಶಕ ಗೀತು ಮೋಹನ್ ದಾಸ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಟಾಕ್ಸಿಕ್ ಸಿನಿಮಾಗೆ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ನಿರ್ಮಾಣವಿದೆ.
ಯಶ್, ನಯನತಾರಾ, ಕಿಯಾರಾ ಅಡ್ವಾಣಿ, ಅಕ್ಷಯ್ ಒಬೆರಾಯ್, ವಿದೇಶಿ ಕಲಾವಿದರಾದ ಬೆನಡಿಕ್ಟ್ ಗ್ಯಾರೆಟ್, ಕೈಲಿ ಪೌಲ್ ಮತ್ತಿತರರು ತಾರಾಗಣದಲ್ಲಿದ್ದಾರೆ. ಕೆಲವು ವಿದೇಶಿ ತಂತ್ರಜ್ಞರು ಚಿತ್ರದ ಭಾಗವಾಗಿರುವುದು ಮತ್ತೂಂದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.