Vijayanagara: ಒಂದೇ ಹಗ್ಗದಲ್ಲಿ ನೇಣಿಗೆ ಶರಣಾದ ಯುವಕ-ಯವತಿ
Team Udayavani, Oct 11, 2024, 1:05 PM IST
ವಿಜಯನಗರ(ಹೊಸಪೇಟೆ): ಯುವಕ ಹಾಗೂ ಯುವತಿ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಅ.11ರ ಶುಕ್ರವಾರ ನಡೆದಿದೆ.
ಮೈಲಾರ ಗ್ರಾಮದ ನದಿ ತೀರದ ಮರವೊಂದಕ್ಕೆ ಒಂದೇ ಹಗ್ಗದಲ್ಲಿ ಕೊರಳಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಅವರಿಬ್ಬರೂ ಅ.10ರ ಗುರುವಾರ ಮೈಲಾರ ಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿಟಿ ನೀಡಿ ದೇವರ ದರ್ಶನ ಪಡೆದಿದ್ದರು.
ಯುವಕನ ಶರ್ಟ್ ಜೇಬಿನಲ್ಲಿ ದೇವರ ದರ್ಶನದ ಸಾಮಾನ್ಯ ಚೀಟಿ ಸಿಕ್ಕಿದೆ. ಬೆಳಿಗ್ಗೆಯಿಂದ ಸಂಜೆವರೆಗೆ ಗ್ರಾಮ ಹಾಗೂ ನದಿ ತೀರದಲ್ಲಿ ಓಡಾಡಿದ್ದಾರೆ ಎನ್ನಲಾಗಿದೆ. ಇವರಿಬ್ಬರು ಯಾವ ಊರಿನವರು ಎಂಬುದು ತಿಳಿದು ಬಂದಿಲ್ಲ.
ಇಬ್ಬರು ಕಪ್ಪು ಪ್ಯಾಂಟ್ ಧರಿಸಿದ್ದು, ಯುವಕ ಕಪ್ಪು ಶರ್ಟ್ ಧರಿಸಿದರೆ, ಯುವತಿ ಕಪ್ಪು ನೀಲಿ ಟಿ ಶರ್ಟ್ ಧರಿಸಿದ್ದಾಳೆ. ಸದ್ಯ ಯುವಕನ ಮೊಬೈಲ್ ಪತ್ತೆಯಾಗಿದ್ದು, ಸ್ವಿಚ್ ಆಫ್ ಆಗಿದೆ.
ಹೊಳಲು ಉಪ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.