Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು
ನ್ಯಾಯಾಂಗ ತನಿಖೆಗೆ ಆದೇಶಿಸಿದ ಭಾರತೀಯ ಸೇನೆ..
Team Udayavani, Oct 11, 2024, 8:41 PM IST
ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನ ಡಿಯೋಲಾಲಿಯಲ್ಲಿರುವ ಆರ್ಟಿಲರಿ ಶಾಲೆಯಲ್ಲಿ ಗುಂಡು ಹಾರಾಟದ ತಾಲೀಮಿನ ವೇಳೆ ಫಿರಂಗಿ ಶೆಲ್ ಸ್ಫೋಟಗೊಂಡು ಸಂಭವಿಸಿದ ಅವಘಡದಲ್ಲಿ ಇಬ್ಬರು ಭಾರತೀಯ ಸೇನಾ ಅಗ್ನಿವೀರ್‌ಗಳು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ(ಅ11) ತಿಳಿಸಿದ್ದಾರೆ.
ಅಗ್ನಿವೀರ್ಸ್ ಗಳಾದ ಗನ್ನರ್ ಗೋಹಿಲ್ ವಿಶ್ವರಾಜ್‌ಸಿಂಹ ಮತ್ತು ಗನ್ನರ್ ಸೈಕತ್ ಅವರು ಅವಘಡದಲ್ಲಿ ಸಾವನ್ನಪ್ಪಿದ್ದಾರೆ ಎಂದು ಸೇನೆಯ ದಕ್ಷಿಣ ಕಮಾಂಡ್ ಶುಕ್ರವಾರ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ. ತರಬೇತಿಗಾಗಿ ಅಗ್ನಿವೀರರು ಹೈದರಾಬಾದ್‌ನಿಂದ ಬಂದಿದ್ದರು.
ದುರಂತದ ಬಗ್ಗೆ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ಎಲ್ಲಾ ಶ್ರೇಣಿಯ ಅಧಿಕಾರಿಗಳೊಂದಿಗೆ ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದಾರೆ. ತೀವ್ರ ನಷ್ಟದ ಈ ಕ್ಷಣದಲ್ಲಿ ಅವರ ದುಃಖಿತ ಕುಟುಂಬಗಳಿಗೆ ನಾವು ನಮ್ಮ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇವೆ” ಎಂದು ಎಕ್ಸ್ ಪೋಸ್ಟ್ ಮಾಡಲಾಗಿದೆ.
ನಿಖರವಾದ ಕಾರಣವನ್ನು ಕಂಡುಹಿಡಿಯಲು ಸೇನೆಯು ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Lt Gen Dhiraj Seth, Army Commander, along with all ranks of #SouthernCommand, express deep sorrow over the tragic loss of Agniveers, Gunner Gohil Vishvarajsinh and Gunner Saikat from the Artillery Centre, #Hyderabad, during a field firing exercise at the #Devlali Field Firing… pic.twitter.com/b9oK1aitqH
— Southern Command INDIAN ARMY (@IaSouthern) October 11, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.