Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ
ಶಾರ್ಜಾಕ್ಕೆ ಹೊರಟಿದ್ದ ವಿಮಾನ ಆಕಾಶದಲ್ಲೇ ಸುತ್ತಾಟ.. ತೀವ್ರ ಆತಂಕ.. ವಿಮಾನ ನಿಲ್ದಾಣದಲ್ಲಿ ಸನ್ನದ್ಧ ಸ್ಥಿತಿ !!!
Team Udayavani, Oct 11, 2024, 9:32 PM IST
ತಿರುಚಿರಾಪಳ್ಳಿ : ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಟೇಕ್ ಆಫ್ ಆದ ಗಂಟೆಗಳ ನಂತರ ವಾಯು ಮಾರಾಗದಲ್ಲಿ ತಾಂತ್ರಿಕ ಅಡಚಣೆಗೆ ಸಿಲುಕಿ ತಮಿಳುನಾಡಿನ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಶುಕ್ರವಾರ ಸಂಜೆ(ಅ11) ನಡೆದಿದ್ದು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿ ಹೋಗಿದೆ.
ವಿಮಾನವು ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲು ತಿರುಚಿ ವಾಯುಪ್ರದೇಶದ ಮೇಲೆ ಕೆಲ ಕಾಲ ಹಾರಾಟ ನಡೆಸಿತು ಎಂದು ತಿಳಿದು ಬಂದಿದೆ.
ಪೈಲಟ್ ಸಮಯಪ್ರಜ್ಞೆ
ವಿಮಾನವು 140 ಪ್ರಯಾಣಿಕರನ್ನು ಹೊತ್ತಿತ್ತು, ಸಂಜೆ 5.43 ಕ್ಕೆ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಿಂದ ಶಾರ್ಜಾಕ್ಕೆ ಹೊರಟಿತ್ತು. ಆದರೆ ಕೂಡಲೇ ತಾಂತ್ರಿಕ ದೋಷವನ್ನು ಕಂಡಿತು. ವಿಮಾನ ನಿಲ್ದಾಣದ ನಿರ್ದೇಶಕರ ಪ್ರಕಾರ, ಪೈಲಟ್ ಹೈಡ್ರಾಲಿಕ್ ವೈಫಲ್ಯದ ಬಗ್ಗೆ ಏರ್ ಸ್ಟೇಷನ್‌ಗೆ ತತ್ ಕ್ಷಣ ಮಾಹಿತಿ ನೀಡಿದರು ಇದರಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ಅವಘಡ ತಪ್ಪಿ ಹೋಗಿದೆ. ವಿಮಾನವು ಏರ್‌ಸ್ಟ್ರಿಪ್‌ನಲ್ಲಿ ಇಳಿಯುತ್ತಿದ್ದಂತೆ ಜನರು ಹರ್ಷೋದ್ಗಾರ ಮಾಡುವ ವಿಮಾನ ನಿಲ್ದಾಣದ ವಿಡಿಯೋಗಳು ಹರಿದಾಡುತ್ತಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಆಂಬ್ಯುಲೆನ್ಸ್‌ಗಳು ಮತ್ತು ರಕ್ಷಣ ತಂಡಗಳನ್ನು ವಿಮಾನ ನಿಲ್ದಾಣದಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿತ್ತು.
ಲ್ಯಾಂಡಿಂಗ್ ಗೇರ್, ಬ್ರೇಕ್‌ಗಳು ಮತ್ತು ಫ್ಲಾಪ್‌ಗಳಂತಹ ಪ್ರಮುಖ ಭಾಗಗಳನ್ನು ನಿಯಂತ್ರಿಸಲು ಬಳಸುವ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದಾಗ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯ ಸಂಭವಿಸುತ್ತದೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಸುರಕ್ಷಿತವಾಗಿ ಇಳಿಸಿದ ಕ್ಯಾಪ್ಟನ್ ಮತ್ತು ಸಿಬಂದಿ ಗಳನ್ನು ಶ್ಲಾಘಿಸಿದ್ದಾರೆ.
Well done Pilot sir! ❤️🗿
Everyone are safe haash!Jai Maa Durga 🙏
Maa Durga saved all of them!! ❤️🙏#Trichy | #AirIndia | #AirIndiaExpress | #Sharjah | #trichyairport pic.twitter.com/nI5d4giQP8— Snehashish Ganguly (@Snehashish0001) October 11, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.