Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ

Team Udayavani, Oct 12, 2024, 8:36 AM IST

1-tamilnadu

ಚೆನ್ನೈ: ಸಮೀಪದ ತಮಿಳುನಾಡಿನ ಕವರೈಪೆಟ್ಟೈ ರೈಲು ನಿಲ್ದಾಣದಲ್ಲಿ ಅ.11ರ ಶುಕ್ರವಾರ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸುಮಾರು 19 ಜನರು ಗಾಯಗೊಂಡಿದ್ದಾರೆ. ಘಟನೆಯ ಪರಿಣಾಮ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 13 ಬೋಗಿಗಳು ಹಳಿ ತಪ್ಪಿವೆ ಎಂದು ವರದಿಯಾಗಿದೆ.

12578 ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್‌ನಲ್ಲಿದ್ದ ಪ್ರಯಾಣಿಕರನ್ನು ಅ.12ರ ಶನಿವಾರ ಬೆಳಿಗ್ಗೆ ಮತ್ತೊಂದು ವಿಶೇಷ ರೈಲಿಗೆ ವರ್ಗಾಯಿಸಲಾಯಿತು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅವಘಡ ಅ.11ರ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಸಂಭವಿಸಿದ್ದು, ರೈಲ್ವೇ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಕವರೈಪೆಟ್ಟೈ ನಿಲ್ದಾಣಕ್ಕೆ ಪ್ರವೇಶಿಸುವಾಗ ರೈಲು ಹಳಿ ಬದಲಾವಣೆಯಾದ ಕಾರಣ ಎಕ್ಸ್‌ಪ್ರೆಸ್ ರೈಲು ಲೂಪ್ ಲೈನ್‌ಗೆ ಸ್ಥಳಾಂತರಗೊಂಡಿದೆ. ಇದರ ಪರಿಣಾಮ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ರೈಲಿನ ಪಾರ್ಸೆಲ್ ವ್ಯಾನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, 12-13 ಬೋಗಿಗಳು ಹಳಿತಪ್ಪಿವೆ. ಆ ಭಾಗದಲ್ಲಿ ರೈಲು ಸಂಚಾರವನ್ನು ಮುಚ್ಚಲಾಗಿದ್ದು, ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.

ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ನಿಗಾ ವಹಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಚೆನ್ನೈನ ಸರ್ಕಾರಿ ಸ್ಟಾನ್ಲಿ ವೈದ್ಯಕೀಯ ಕಾಲೇಜಿನಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಭೇಟಿ ಮಾಡಿದರು. ಸಚಿವ ಅವದಿ ನೇಸರ್ ಹಾಗೂ ಉನ್ನತ ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್‌ನಲ್ಲಿದ್ದ ಪ್ರಯಾಣಿಕರು ತಮ್ಮ ಪ್ರಯಾಣ ಮುಂದುವರಿಸಲು ಮತ್ತೊಂದು ವಿಶೇಷ ರೈಲು ಅ.12ರ ಶನಿವಾರ ಮುಂಜಾನೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಬೆಳಗ್ಗೆ 04.45ರ ಸುಮಾರಿಗೆ ಹೊರಟಿತು. ಪ್ರಯಾಣಿಕರಿಗೆ ಆಹಾರ ಮತ್ತು ನೀರನ್ನು ಒದಗಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು ರಕ್ಷಣ ಕಾರ್ಯ ಭರದಿಂದ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.