Nisha Ravikrishnan: ಮಹಿಳಾ ಪ್ರಧಾನ ʼಅಂಶುʼ: ಕುತೂಹಲ ಮೂಡಿಸಿದ ಟ್ರೇಲರ್
Team Udayavani, Oct 12, 2024, 1:01 PM IST
ಚಿತ್ರರಂಗಕ್ಕೆ ಬರುವ ಹೊಸಬರ ಕನಸು ಹೊಸದೇನನ್ನೋ ಮಾಡಬೇಕೆಂಬುದು. ಅಂತಹ ಪ್ರಯತ್ನದ ಫಲವಾಗಿಯೇ ಒಂದಷ್ಟು ಹೊಸ ಬಗೆಯ ಸಿನಿಮಾಗಳು ಮೂಡಿಬರುತ್ತಿವೆ. ಈ ಸಾಲಿಗೆ ಹೊಸ ಸೇರ್ಪಡೆ “ಅಂಶು’. ಹೀಗೊಂದು ಸಿನಿಮಾ ಸದ್ದಿಲ್ಲದೇ ತಯಾರಾಗಿ, ಬಿಡುಗಡೆಯ ಹಂತಕ್ಕೆ ಬಂದಿದೆ. ಮಹಿಳಾ ಪ್ರಧಾನ ಕಥಾನಕ ಹೊಂದಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಕಿರುತೆರೆಯಲ್ಲಿ ಮಿಂಚಿರುವ ನಿಶಾ ಕೃಷ್ಣನ್ ಈ ಚಿತ್ರದ ನಾಯಕಿ. ಎಂ.ಸಿ ಚನ್ನಕೇಶವ ನಿರ್ದೇಶನದ ಚೊಚ್ಚಲ ಚಿತ್ರ ಅಂಶು. “ನಾವು ನಂಬೋದೆಲ್ಲ ನಿಜ ಅಲ್ಲ, ಸಹಿಸೋಕೆ ಆಗೆª ಇರೋದೆಲ್ಲ ಸುಳ್ಳಲ್ಲ’ ಅಂತ ಶುರುವಾಗುವ ಈ ಟ್ರೇಲರ್ ಒಂದಷ್ಟು ಕುತೂಹಲ ಮೂಡಿಸುವಲ್ಲಿ ಯಶಸ್ವಿಯಾಗಿದೆ. ಇದೊಂದು ಸೈಕ್ಯಾಡೆಲಿಕ್ ಥ್ರಿಲ್ಲರ್ ಜಾನರ್‌ನ ಚಿತ್ರ. ಈ ಸಮಾಜದಲ್ಲಿ ಇಂದಿನ ದಿನಮಾನದಲ್ಲಿ ಘಟಿಸುತ್ತಿರುವ ವಿಚಾರಗಳನ್ನು ಇಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಹೇಳಲು ತಂಡ ಪ್ರಯತ್ನಿಸಿದೆ.
ಗ್ರಹಣ ಎಲ್‌ಎಲ್‌ಪಿ ಬ್ಯಾನರಿನಡಿಯಲ್ಲಿ ಈ ಸಿನಿಮಾ ನಿರ್ಮಾಣಗೊಂಡಿದೆ. ರತನ್ ಗಂಗಾಧರ್ ,ಸಂಪತ್ ಶಿವಶಂಕರ್, ಕೃತಿ ನಾಣಯ್ಯ ನಿರ್ಮಾಣಲ್ಲಿ ತೊಡಗಿದ್ದಾರೆ. ಭಜರಂಗಿ-2, ವೇದ ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ ಚಲುವರಾಜ್ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಜೈಚಂದ್ರ, ಪ್ರಮೋದ್ ಡಾ.ಮಧುರಾಜ್ ಮತ್ತು ವೀರನ್ ಗೌಡ ಕೂಡಾ ಅಂಶು ನಿರ್ಮಾಣದಲ್ಲಿ ಸಹಭಾಗಿಗಳಾಗಿದ್ದಾರೆ. ಸುನೀಲ್ ನರಸಿಂಹಮೂರ್ತಿ ಛಾಯಾಗ್ರಹಣ, ಕೆ.ಸಿ ಬಾಲಸಾರಂಗನ್ ಸಂಗೀತ, ವಿಘ್ನೇಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಮಹೇಂದ್ರ ಗೌಡ ಸಂಭಾಷಣೆ ಮತ್ತು ಸಾಹಿತ್ಯದ ಜವಾಬ್ದಾರಿ ನಿಭಾಯಿಸಿದ್ದಾರೆ. ಇವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.