Nobel Peace Prize: ಜಪಾನ್‌ನ ಹಿಂಡಾಕ್ಯೋ ಸಂಸ್ಥೆಗೆ ಶಾಂತಿ ನೊಬೆಲ್
Team Udayavani, Oct 12, 2024, 10:09 PM IST
ಓಸ್ಲೋ: ಪರಮಾಣು ಶಸ್ತ್ರ ಮುಕ್ತ ವಿಶ್ವದ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಜಪಾನ್‌ನ “ನಿಹಾನ್ ಹಿಂಡಾಕ್ಯೋ’ ಸಂಸ್ಥೆಗೆ ಈ ಬಾರಿ ಶಾಂತಿ ನೊಬೆಲ್ ಗೌರವ ಲಭಿಸಿದೆ.
ಈ ಸಂಸ್ಥೆ ಪರಮಾಣು ಬಾಂಬ್ ದಾಳಿಯಲ್ಲಿ ಬದುಕುಳಿದವರನ್ನು ಪ್ರತಿನಿಧಿಸುತ್ತಿದ್ದು, ಜಗತ್ತು ಅಣುಬಾಂಬ್ ದಾಳಿಗೆ ತುತ್ತಾಗುವ ಭೀತಿಯ ನಡುವೆಯೇ ಪರಮಾಣು ಶಸ್ತ್ರದ ವಿರುದ್ಧ ಹೋರಾಡುತ್ತಿರುವ ಸಂಸ್ಥೆಗೆ ಪ್ರಶಸ್ತಿ ಲಭಿಸಿದೆ.
1956ರಲ್ಲಿ ಸ್ಥಾಪನೆಯಾದ ನಿಹಾನ್ ಹಿಂಡಾಕ್ಯೋ ಸಂಸ್ಥೆಯನ್ನು ಹಿಬಾಕುಶಾ (ಹಿರೋಶಿಮಾ ಮತ್ತು ನಾಗಸಾಕಿ ಪರಮಾಣು ಬಾಂಬ್ ದಾಳಿಯಿಂದ ಬದುಕುಳಿದವರನ್ನು ಪ್ರತಿನಿಧಿಸುವ ಜಪಾನ್ ಸಂಸ್ಥೆ) ಎಂದೂ ಕರೆಯಲಾಗುತ್ತದೆ. ಪರಮಾಣು ಮುಕ್ತ ಜಗತ್ತನ್ನು ನಿರ್ಮಾಣ ಮಾಡಲು ಈ ಸಂಸ್ಥೆ ದಣಿವರಿಯದ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ನೊಬೆಲ್ ಸಮಿತಿ ಹೇಳಿದೆ. ಪ್ರಶಸ್ತಿ ಸಿಕ್ಕಿರುವುದಕ್ಕೆ ಪ್ರತಿಕ್ರಿಯಿಸಿರುವ ಹಿಂಡಾಕ್ಯೋ ಸಹ ಮುಖ್ಯಸ್ಥ ತೋಶಿಯುಕಿ ಮಿಮಾಕಿ, ಪ್ರಶಸ್ತಿ ಸಿಗುತ್ತದೆ ಎಂದು ಯಾವತ್ತೂ ಕನಸೂ ಕಂಡಿರಲಿಲ್ಲ ಎಂದಿದ್ದಾರೆ.
ಹಿರೋಶಿಮಾ ಮತ್ತು ನಾಗಸಾಕಿ ನಗರಗಳ ಮೇಲೆ ನಡೆದ ಅಣ್ವಸ್ತ್ರ ದಾಳಿಯ ಸಂತ್ರಸ್ತರ ಬಗ್ಗೆ ಅನೇಕ ಸಾಕ್ಷ್ಯ ಚಿತ್ರಗಳನ್ನು ಈ ಸಂಸ್ಥೆ ನಿರ್ಮಾಣ ಮಾಡಿದೆ. ಈ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಯತ್ನ ಮಾಡಿರುವುದಲ್ಲದೇ, ಮುಂದಿನ ದಿನಗಳಲ್ಲಿ ಯಾವ ದೇಶವೂ ಪರಮಾಣು ದಾಳಿ ಮಾಡಬಾರದು ಎಂದು ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
Bangladesh: ಚಿನ್ಮಯ್ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.