Mangaluru: ಬಾಂಗ್ಲಾ ಪ್ರಜೆ; ಒಂದು ವಾರ ಕಸ್ಟಡಿಗೆ
Team Udayavani, Oct 13, 2024, 7:03 AM IST
ಮಂಗಳೂರು: ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈಗೆ ತೆರಳುವ ವೇಳೆ ಬಂಧಿತನಾಗಿರುವ ಬಾಂಗ್ಲಾ ಪ್ರಜೆ ಮಹಮ್ಮದ್ ಮಾಣಿಕ್‌ನನ್ನು ಪೊಲೀಸರು ಒಂದು ವಾರ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಈತನ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ಕಸ್ಟಡಿಗೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಶುಕ್ರವಾರ ಸಂಜೆ 5.45ರ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಶನ್ ವಿಭಾಗ ಕೌಂಟರ್ ನಂ.6 ರಲ್ಲಿ ಮಹಮ್ಮದ್ ಮಾಣಿಕ್ ಭಾರತೀಯ ಪಾಸ್ ಪೊರ್ಟ್ ಹಾಗೂ ಇತರೆ ದಾಖಲಾತಿಗಳನ್ನು ಹಾಜರುಪಡಿಸಿದ್ದಾನೆ. ಈ ವೇಳೆ ದಾಖಲೆಗಳ ಬಗ್ಗೆ ಅನುಮಾನಗೊಂಡು ಆತನನ್ನು ವಿಚಾರಣೆ ಮಾಡಿದಾಗ ಬಾಂಗ್ಲದೇಶದ ಪ್ರಜೆ ತಿಳಿದು ಬಂದಿದೆ.
ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆ ಮಾಣಿಕ್‌ಚೌಕ್‌ನ ನಿವಾಸಿಯಾಗಿದ್ದಾನೆ. ಬಾಂಗ್ಲದೇಶದ ರಾಷ್ಟ್ರೀಯ ಗುರುತು ಚೀಟಿ ಸಂಖ್ಯೆ 601 ಆಗಿದ್ದು ಈತನು 2017 ರಲ್ಲಿ ಇಂಡೋ -ಬಾಂಗ್ಲ ಅಂತರಾಷ್ಟ್ರೀಯ ಗಡೀರೇಖೆ ಪಶ್ಚಿಮ ಬಂಗಾಳದ ಮುರ್ಷಿದಬಾದ್ ಜಿಲ್ಲೆಯ ಲಾಲ್‌ಗೊಲ್ ಮುಖೇನ ಭಾರತಕ್ಕೆ ಬಂದಿದ್ದ. ಶೆಲ್ಡಾ-ಹೌರ-ಚೆನ್ನೈ ಮುಖಾಂತರ ಮಂಗಳೂರು ಮೂಡಬಿದರೆ ಮೂಲಕ ಉಡುಪಿಗೆ ಬಂದಿದ್ದ ಎಂದು ತಿಳಿದು ಬಂದಿದೆ.
ಉಡುಪಿಯಲ್ಲಿ ಪರ್ವೆಜ್ ಎಂಬಾತನ ಮುಖಾಂತರ ಪಾಸ್‌ಪೊರ್ಟ್ ಮಾಡಿಸಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.