Udupi: ಭದ್ರತೆ ದೃಷ್ಟಿಯಿಂದ ಪ್ರಕರಣ ಉನ್ನತ ಮಟ್ಟದ ತನಿಖೆ ವಹಿಸಿ: ಶಾಸಕ ಯಶ್‌ಪಾಲ್ ಸುವರ್ಣ
ಉಡುಪಿಯಲ್ಲಿ ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವುದು ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿಸಿದೆ
Team Udayavani, Oct 13, 2024, 1:33 AM IST
ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಗೃಹ ಇಲಾಖೆಗೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಏಷ್ಯಾದ ಅತಿ ದೊಡ್ಡ ಮೀನುಗಾರಿಕೆ ಬಂದರಾಗಿ ಗುರುತಿಸಿಕೊಂಡಿರುವ ಮಲ್ಪೆಯಲ್ಲಿ ಕೆಲಸಕ್ಕಾಗಿ ಬಂದು ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಅಕ್ರಮ ವಲಸಿಗರಿಗೆ ಸಹಕರಿಸಿದವರನ್ನು ಪೊಲೀಸರು ತತ್‌ಕ್ಷಣ ಬಂಧಿಸಿ ವಿಚಾರಣೆ ನಡೆಸಬೇಕಿದೆ. ಶಿಕ್ಷಣ, ಮೀನುಗಾರಿಕೆ, ಆರೋಗ್ಯ, ಪ್ರವಾಸೋದ್ಯಮ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಉಡುಪಿಯಲ್ಲಿ ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವುದು ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿಸಿದ್ದು, ಈ ಜಾಲದ ಹಿಂದಿರುವ ಕಾಣದ ಕೈಗಳನ್ನು ತತ್‌ಕ್ಷಣ ಹೆಡೆಮುರಿ ಕಟ್ಟುವ ಕೆಲಸ ಪೊಲೀಸ್ ಇಲಾಖೆ ನಡೆಸಿ ಜನಸಾಮಾನ್ಯರಲ್ಲಿ ವಿಶ್ವಾಸ ಮೂಡಿಸಬೇಕಾಗಿದೆ.
ನಕಲಿ ಆಧಾರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ಮಾಡಿ ಅಕ್ರಮವಾಗಿ ದೇಶದೊಳಗೆ ಕಳುಹಿಸುವ ಜಾಲವನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಈ ಬಗ್ಗೆ ರಾಷ್ಟ್ರೀಯ ತನಿಖಾ ದಳದ ಮೂಲಕವೂ ತನಿಖೆ ನಡೆಸುವ ಬಗ್ಗೆಯೂ ಕೇಂದ್ರ ಸರಕಾರಕ್ಕೆ ಮನವಿ ಮಾಡುವುದಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.