Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ

Team Udayavani, Oct 13, 2024, 8:39 AM IST

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ

ಮುಂಬೈ: ಮಹಾರಾಷ್ಟ್ರದ ರಾಜಕೀಯ ಧುರೀಣ, ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಘಟನೆಯಲ್ಲಿ ಕುಖ್ಯಾತ ಗ್ಯಾಂಗ್‌ ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ (Lawrence Bishnoi) ಕೈವಾಡದ ಬಗ್ಗೆ ಶಂಕೆ ವ್ಯಕ್ತವಾಗಿದೆ.

66 ವರ್ಷದ ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕಿ ಅವರಿಗೆ ಶನಿವಾರ (ಅ.12) ರಾತ್ರಿ ಮುಂಬೈನ ಬಾಂದ್ರಾ ಪೂರ್ವದಲ್ಲಿ ಅವರ ಮಗನ ಕಚೇರಿ ಬಳಿ ಗುಂಡಿಕ್ಕಲಾಗಿತ್ತು. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಅವರು ಬದುಕುಳಿಯಲಿಲ್ಲ.

ಇಬ್ಬರು ಬಂಧಿತ ಆರೋಪಿಗಳನ್ನು ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಅವರು ಪ್ರಸ್ತುತ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್‌ ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ ಎಂದು ಕ್ರೈಂ ಬ್ರಾಂಚ್ ಮೂಲಗಳು ತಿಳಿಸಿವೆ.

ಕೊಲೆಗೆ ಮೊದಲು ಸುಮಾರು 25ರಿಂದ 30 ದಿನಗಳ ಕಾಲ ಅವರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿದೆ.

ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಮೂಲಗಳ ಪ್ರಕಾರ ಮೂವರು ಆರೋಪಿಗಳು ಘಟನಾ ಸ್ಥಳಕ್ಕೆ ಆಟೋ ರಿಕ್ಷಾದಲ್ಲಿ ಆಗಮಿಸಿದ್ದರು. ಅಲ್ಲಿ ಕೆಲ ಸಮಯ ಕಾದು ಬಳಿಕ ಸಿದ್ದಿಕಿಗೆ ಗುಂಡು ಹಾರಿಸಿದ್ದರು. ಶೂಟರ್‌ ಗಳಿಗೆ ಮಾಹಿತಿ ರವಾನೆ ಮಾಡುತ್ತಿದ್ದ ಮತ್ತೊಬ್ಬ ಕೂಡಾ ಘಟನೆಯಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದ ಬಾಬಾ ಸಿದ್ದಿಕಿ ಅವರು ಬಾಂದ್ರಾ (ಪಶ್ಚಿಮ) ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕಾರಾಗಿ ಆಯ್ಕೆಯಾಗಿದ್ದರು. ಮುಂಬೈನ ಪ್ರಮುಖ ವ್ಯಕ್ತಿಯಾಗಿದ್ದ ಅವರು 2004ರಿಂದ 2008ರವರೆಗೆ ವಿಲಾಸ್‌ರಾವ್‌ ದೇಶ್‌ಮುಖ್‌ ಸರ್ಕಾರದಲ್ಲಿ ಸಚಿವರಾಗಿದ್ದರು. ಈ ವರ್ಷದ ಫೆಬ್ರವರಿಯಲ್ಲಿ ಅವರು ಕಾಂಗ್ರೆಸ್‌ ತೊರೆದು ಅಜಿತ್‌ ಪವಾರ್‌ ಅವರ ಎನ್‌ ಸಿಪಿಗೆ ಸೇರ್ಪಡೆಯಾಗಿದ್ದರು.

ಟಾಪ್ ನ್ಯೂಸ್

Kazakhstan: ವಿಮಾನ ದುರಂತದ ಸಂದರ್ಭದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan: ವಿಮಾನ ದುರಂತದ ಸಂದರ್ಭದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.