Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದು ಕಾಂಗ್ರೆಸ್ ಸರಕಾರದಿಂದ ಅಪರಾಧ: ಕಾಗೇರಿ
ಕಾಂಗ್ರೆಸ್ ರಾಜಕಾರಣ ದೇಶಕ್ಕೆ ಮಿತಿ ಮೀರಿ ಅಪಾಯವಾಗುವ ಸಾಧ್ಯವಿದೆ: ಸಂಸದ ವಿಶ್ವೇಶ್ವರ ಹೆಗಡೆ
Team Udayavani, Oct 13, 2024, 6:25 PM IST
ಶಿರಸಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ ವಿವಿಧ ಘಟನೆಗಳಲ್ಲಿನ ಆರೋಪಿಗಳ ಮೇಲಿನ ಪೊಲೀಸ್ ಪ್ರಕರಣ ವಾಪಸ್ ಪಡೆದು ರಾಜ್ಯ ಕಾಂಗ್ರೆಸ್ ಸರಕಾರ ಅಪರಾಧ ಮಾಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತ ಬ್ಯಾಂಕ್ ಉಳಿಸಿಕೊಳ್ಳಲು ಮುಖ್ಯವಾಹಿನಿಗೆ ಅಲ್ಪ ಸಂಖ್ಯಾತರು ಬಾರದಂತೆ ಮಾಡುವ ಜೊತೆಗೆ ಪ್ರತ್ಯೇಕತೆ ಭಾವನೆ ಬೆಳೆಸುತ್ತಿದೆ. ಕಾಂಗ್ರೆಸ್ ನ ಈ ಷಡ್ಯಂತ್ರಕ್ಕೆ ಅಲ್ಪ ಸಂಖ್ಯಾತರು ಬಲಿಯಾಗಬಾರದು. ಕಾಂಗ್ರೆಸ್ ರಾಜಕಾರಣ ದೇಶಕ್ಕೆ ಮಿತಿ ಮೀರಿ ಅಪಾಯವಾಗುವ ಸಾಧ್ಯವಿದೆ. ಹಿಂದುಗಳ ಬಗ್ಗೆ ಬೇರೆಯಾಗಿ, ಅಲ್ಪ ಸಂಖ್ಯಾತರ ಬಗ್ಗೆ ಮಾತನಾಡುವಾಗ ಇಡಿಯಾಗಿ ಮಾತನಾಡುತ್ತದೆ ಎಂದು ಆಕ್ಷೇಪಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರ 157 ಮಂದಿ ಮೇಲಿನ ದೊಂಬಿ, ಅಪರಾಧಿಗಳಿಗೆ ನಾವಿದ್ದೇವೆ ಎಂಬ ಸ್ಪಷ್ಟ ಸಂದೇಶ ನೀಡಿ ಪ್ರಕರಣ ವಾಪಸ್ ಪಡೆದಿದೆ. ರಾಷ್ಟ್ರ ದ್ರೋಹಿಗಳಿಗೆ ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ, ಪೊಲೀಸರ ಜೀವಕ್ಕೇ ಕಂಟಕ ತಂದವರಿಗೂ ನೇರ ಬಲ ಕೊಟ್ಟಂತಾಗಿದೆ. ಕಾಂಗ್ರೆಸ್ ಗೆ ನ್ಯಾಯಾಂಗ, ಕಾನೂನು ಯಾವ ಅಂಶಕ್ಕೂ ಗಂಭೀರತೆ ಇಲ್ಲ. ಸಂವಿಧಾನದ ಬಗ್ಗೆ ಗೌರವ ಇಲ್ಲ. ಕಾಂಗ್ರೆಸ್ ದೇಶ ದ್ರೋಹಿಗಳಿಗೆ ಬಲ ನೀಡುವ ಹೀನ ಸ್ಥಿತಿಗೆ ಇಳಿದಿದೆ.
ಸರಕಾರವಿದೆ, ಆಡಳಿತ ಇಲ್ಲ. ಭ್ರಷ್ಟಾಚಾರ ಮಿತಿ ಮೀರಿದೆ, ಸರಕಾರೀಕರಣಗೊಳಿಸಿದೆ ಎಂದು ಜರಿದರು.
ಮುಡಾ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಸ್ವಾರ್ಥಕ್ಕಾಗಿ ಅಧಿಕಾರ ಬಳಸಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಸರಿಯಾಗಿಲ್ಲ, ರಾಜ್ಯದ ಬೊಕ್ಕಸ ಬರಿದಾಗಿ ರಸ್ತೆಯ ಹೊಂಡ ತುಂಬಲೂ ಹಣವಿಲ್ಲದಂತೆ ಆಗಿದೆ. ಅತಿ ಮಳೆಗೆ ಎಲ್ಲೆಡೆ ಹಾನಿಯಾಗಿದ್ದರೂ ಒಂದು ರೂಪಾಯಿ ಪರಿಹಾರ ಇಲ್ಲ, ಅಭಿವೃದ್ಧಿ, ಮನೆ ಬಿದ್ದವರಿಗೂ ನೆರವಿಲ್ಲ ಎಂದು ಹೇಳಿದರು.
ಈ ವೇಳೆ ವಕ್ತಾರ ಸದಾನಂದ ಭಟ್ಟ, ನಗರಸಭೆ ಅಧ್ಯಕ್ಷೆ ಶರ್ಮಿಲಾ ಮಾದನಗೇರಿ, ನಾಗರಾಜ ನಾಯ್ಕ, ಶ್ರೀಕಾಂತ ನಾಯ್ಕ, ಆನಂದ ಸಾಲೇರ, ರಮಾಕಾಂತ ಭಟ್ಟ, ನಂದನ ಸಾಗರ, ರವಿ ಶೆಟ್ಟಿ, ಮಂಜುನಾಥ ಭಂಡಾರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Weightlifting: ಏಷ್ಯನ್ ವೇಟ್ ಲಿಫ್ಟಿಂಗ್; ಭಾರತಕ್ಕೆ ಎರಡು ಬೆಳ್ಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.