B.Y.Vijayendra; ಏನು ಪುರೋಹಿತನಾ? ಜ್ಯೋತಿಷಿನಾ?…: ಸಿದ್ದರಾಮಯ್ಯ ಕಿಡಿ
ತೆರಿಗೆ ವಿಚಾರದಲ್ಲಿ ಕರ್ನಾಟಕದ ಜನರು ಧ್ವನಿ ಎತ್ತಬೇಕು... ಬಿಜೆಪಿ ಸಂಸದರು ಕೋಮುವಾದಿ ವಿಚಾರಕ್ಕೆ ಮಾತ್ರ
Team Udayavani, Oct 13, 2024, 6:22 PM IST
ಬೆಳಗಾವಿ: ”ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಹೊಸ ಸಿಎಂ ಸ್ವಾಗತಿಸುತ್ತೇವೆ” ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ರವಿವಾರ(ಅ13) ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ”ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ?” ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ”ದಸರಾ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದಿದ್ದರು. ದಸರಾ ಮುಗಿತಲ್ವಾ? ನಾನು ರಾಜೀನಾಮೆ ಕೊಟ್ನಾ” ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
”ವಿಜಯೇಂದ್ರಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಏನಿದೆ? ಪೋಕ್ಸೋ ಕೇಸ್ ನಲ್ಲಿ ಅವರ ತಂದೆ ಯಡಿಯೂರಪ್ಪ ಬೇಲ್ ಮೇಲೆ ಇದ್ದಾರೆ.ಮೊದಲು ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು” ಎಂದು ಸಿದ್ದರಾಮಯ್ಯ ಕಿಡಿ ಯಾದರು.
ತೆರಿಗೆ; ಕರ್ನಾಟಕ ಜನರು, ಧ್ವನಿ ಎತ್ತಬೇಕು
ಕೇಂದ್ರ ಸರಕಾರ ತೆರಿಗೆ ಹಂಚಿಕೆ ವೇಳೆ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ.ನಮ್ಮಬೇಡಿಕೆಗೆ ತಕ್ಕಷ್ಟು ತೆರಿಹೆ ಹಣ ನೀಡಿಲ್ಲ, ಬದಲಾಗಿ ಕಡಿಮೆ ನೀಡಿದೆ. ನ್ಯಾಯಯುಯವಾಗಿ ಬರಬೇಕಾದ ಹಣ ಕರ್ನಾಟಕ ರಾಜ್ಯಕ್ಕೆ ಬಂದಿಲ್ಲ. ಈ ಸಂಬಂಧ ಕರ್ನಾಟಕದ ಜನರು, ಧ್ವನಿ ಎತ್ತಬೇಕು. ಅನ್ಯಾಯಕ್ಕೆ ಒಳಹಾದ ರಾಜ್ಯಗಳು ಧ್ವನಿ ಎತ್ತಬೇಕು. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನ್ಯಾಯಯುತ ತೆರಿಗೆ ಪಾಲು ವಿತರಣೆ ಪಾಲಿಸುತ್ತಿಲ್ಲ.ಈ ಬಗ್ಗೆ ರಾಜ್ಯಕ್ಕೆ ಅನ್ಯಾಯ ಆದರೂ ಬಿಜೆಪಿ ಸಂಸದರು ಕೇಂದ್ರ ಸರ್ಕಾರವನ್ನು ಕೇಳುತ್ತಿಲ್ಲ.ಕೋಮುವಾದಿ ವಿಚಾರದಲ್ಲಿ ಮಾತ್ರ ಬಿಜೆಪಿ ಸಂಸದರು ಪ್ರತಿಭಟನೆ ನಡೆಸುತ್ತಾರೆ ಎಂದು ಸಿಎಂ ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.