Kaikamba: ಹಠಾತ್ ಕುಸಿದು ಬಿದ್ದು ವ್ಯಕ್ತಿ ಸಾವು
Team Udayavani, Oct 13, 2024, 8:00 PM IST
ಕೈಕಂಬ: ಕುಪ್ಪೆಪದವಿನ ಫಾಸ್ಟ್ಫುಡ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ಅಶೋಕ್ (33) ಎಂಬವರು ಹೃದಯಾಘಾತದಿಂದಾಗಿ ಹಠಾತ್ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.
ಪುತ್ತೂರು ತಾಲೂಕಿನ ಕರಾಯ ಮರಿಪಾಡಿ ನಿವಾಸಿ ಅಶೋಕ್ ಅವರು ಸಹೋದರ ಸಂಬಂಧಿ ಗಿರೀಶ್ ಎಂಬವರು ಕುಪ್ಪೆಪದವಿನಲ್ಲಿ ನಡೆಸುತ್ತಿರುವ ಫಾಸ್ಟ್ಫುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಬೆಳಗ್ಗೆ ಎಂದಿನಂತೆ ಕೆಲಸ ಮಾಡುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದರೂ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ.
ಮಧ್ಯಾಹ್ನ ವೇಳೆ ಹೊಟೇಲ್ನಲ್ಲಿ ಕುಸಿದು ಬಿದ್ದರು. ತತ್ಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿನ ವೈದ್ಯರ ಸಲಹೆಯಂತೆ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದರು. ಮೃತರು ಪತ್ನಿ ಮತ್ತು ಒಂದು ವರ್ಷದ ಮಗುವನ್ನು ಅಗಲಿದ್ದಾರೆ.
ಬಜಪೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.