Congress: ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಉಸ್ತುವಾರಿಗಳ ನೇಮಕ
Team Udayavani, Oct 13, 2024, 7:26 PM IST
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರ್ಯನಿರ್ವಹಿಸಲು, ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ನೋಡಿಕೊಳ್ಳಲು ಮತ್ತು ಕೆಪಿಸಿಸಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಭಯ ಜಿಲ್ಲೆಗಳಿಗೆ ಚುನಾವಣೆ ಉಸ್ತುವಾರಿಗಳನ್ನು ನಿಯೋಜಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮಗ್ರ ಉಸ್ತುವಾರಿಗಳಾಗಿದ್ದಾರೆ.
ದ.ಕ.ಜಿಲ್ಲೆಗೆ ಉಸ್ತುವಾರಿಗಳಾಗಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಜೆ.ಆರ್.ಲೋಬೊ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಜಿ.ಕೃಷ್ಣಪ್ಪ, ಉಸ್ತುವಾರಿ ಪದಾಧಿಕಾರಿಗಳಾಗಿ ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಹೆಗ್ಗಡೆ, ಜಿ.ಎ.ಬಾವ, ನಿವೇದಿತ್ ಆಳ್ವ, ಲಲಿತ್ ರಾಘವ್, ಜುಲ್ಫಿಕರ್ ಅಹಮದ್ ಖಾನ್, ಮಟಿಲ್ಡಾ ಡಿ’ಸೋಜಾ, ಪ್ರವೀಣ್ ಪೀಟರ್, ಜಿಲ್ಲಾ ಸಂಚಾಲಕರಾಗಿ ಪದ್ಮರಾಜ್ ಆರ್., ಕೆಪಿಸಿಸಿ ಕಾರ್ಯಾಧ್ಯಕ್ಷರ ಸಂಯೋಜಕರಾಗಿ ಬಿ.ಬಾಲರಾಜ್ ಅವರನ್ನು ನಿಯೋಜಿಸಲಾಗಿದೆ.
ಉಡುಪಿ ಜಿಲ್ಲೆಗೆ ಉಸ್ತುವಾರಿಗಳಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಪರಿಷತ್ ಸದಸ್ಯ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿ’ಸೋಜಾ, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಸುಕುಮಾರ ಶೆಟ್ಟಿ, ಎಂ.ದಿನೇಶ್ ಹೆಗ್ಡೆ, ಪ್ರಸಾದ್‌ರಾಜ್ ಕಾಂಚನ್, ಉದಯ ಶೆಟ್ಟಿ ಮುನಿಯಾಲು, ಉಸ್ತುವಾರಿ ಪದಾಧಿಕಾರಿಗಳಾಗಿ ಐವನ್ ಡಿ’ಸೋಜಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಗೌಡ, ಇನಾಯತ್ ಅಲಿ, ಮಿಥುನ್ ರೈ, ರಕ್ಷಿತ್ ಶಿವರಾಂ, ಲಾವಣ್ಯ ಬಲ್ಲಾಳ್, ಜಿಲ್ಲಾ ಸಂಚಾಲಕರಾಗಿ ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಕಾರ್ಯಾಧ್ಯಕ್ಷರ ಸಂಯೋಜಕರಾಗಿ ಎಂ.ಎಸ್.ಮಹಮ್ಮದ್ ಅವರನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.