Dharwad: ನಾನು ಸಿಎಂ ಆಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್!
ರಡ್ಡಿ ಸಹಕಾರಿ ಬ್ಯಾಂಕ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ಹೇಳಿದ ಡಿಕೆಶಿ
Team Udayavani, Oct 13, 2024, 11:28 PM IST
ಧಾರವಾಡ: ಸಿಎಂ ಬದಲಾವಣೆ ಎಂಬ ಕೂಗಿನ ಬೆನ್ನಲ್ಲೇ “ನಾನು ಮುಖ್ಯಮಂತ್ರಿಯಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ ಮಾತು ಚರ್ಚೆಗೆ ಗ್ರಾಸವೊದಗಿಸಿತು.
ಇಲ್ಲಿಯ ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ರವಿವಾರ ನಡೆದ ರಡ್ಡಿ ಸಹಕಾರಿ ಬ್ಯಾಂಕ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿಯೇ ಮಾತಿನ ಭರದಲ್ಲಿ ಆಡಿದ ಮಾತು ಸಾಕಷ್ಟು ಕುತೂಹಲಕ್ಕೆ ಕಾರಣವಾಯಿತು. ಸಹಕಾರಿ ಕ್ಷೇತ್ರದ ನಂಟು, ಕೆ.ಎಚ್.ಪಾಟೀಲರ ಒಡನಾಟ ಸ್ಮರಿಸಿದ ಡಿಸಿಎಂ, ನಾನು ಮುಖ್ಯಮಂತ್ರಿಯಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದರು.
ಸಹಕಾರ ಕ್ಷೇತ್ರದ ನಾಯಕನಾಗಿ ಬಂದಿದ್ದು, ಈ ಕ್ಷೇತ್ರದಲ್ಲಿ ಶತಮಾನೋತ್ಸವ ಸಂಭ್ರಮದ ರಡ್ಡಿ ಬ್ಯಾಂಕ್ ಮತ್ತಷ್ಟು ಅಭಿವೃದ್ಧಿ ಕಾಣಲಿ ಎಂದು ಹಾರೈಸಿದರು. ಈ ವೇಳೆ ಸಿಎಂ ಆಗಿ ಬಂದಿದ್ದೇನೆ ಎಂಬ ಡಿಸಿಎಂ ಮಾತು ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರಷ್ಟೇ ಅಲ್ಲದೇ ಸಭಿಕರು ಒಂದು ಕ್ಷಣ ಗೊಂದಲಕ್ಕೆ ಒಳಗಾಗುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.