Muslim; ಮುಸ್ಲಿಮರ ಹಿತಕ್ಕೆ ವಕ್ಫ್ ತಿದ್ದುಪಡಿ ಕಾಯ್ದೆ: ಅನ್ವರ್ ಮಾಣಿಪ್ಪಾಡಿ
Team Udayavani, Oct 14, 2024, 6:40 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆಯ ಬಗ್ಗೆ ಜಂಟಿ ಸಂಸದೀಯ ಸಮಿತಿ ಎದುರು ಕರ್ನಾಟಕ ಅಲ್ಪಸಂಖ್ಯಾಕ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಸೋಮವಾರ ತಮ್ಮ ವಾದ ಮಂಡಿಸಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು “ಬೆಳಗ್ಗೆ 11 ಗಂಟೆಗೆ ಸಮಯ ನೀಡಲಾಗಿದೆ’ ಎಂದಿದ್ದಾರೆ. ಮುಸ್ಲಿಂ ಸಮುದಾಯದ ಹಿತಕ್ಕಾಗಿಯೇ ಈಗಿನ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಹೀಗಾಗಿ, ಸಮುದಾಯ ತಿದ್ದುಪಡಿ ಒಪ್ಪಬೇಕು ಎನ್ನುವುದು ನನ್ನ ವಾದ. ಅದನ್ನೇ ಸಮಿತಿ ಮುಂದೆ ಮಂಡಿಸಲಿದ್ದೇನೆ. ಜತೆಗೆ ನಾನು ಅಲ್ಪಸಂಖ್ಯಾಕರ ಅಯೋಗದ ಅಧ್ಯಕ್ಷನಾಗಿದ್ದಾಗ ವರದಿ ಕೊಟ್ಟು ಈಗ 12 ವರ್ಷ ಆಗಿದೆ. ನನ್ನ ವರದಿಯಲ್ಲಿ ಹೇಳಿರುವ ವಿಚಾರಗಳನ್ನು ಸಮಿತಿ ಮುಂದೆ ವಿವರಿಸುತ್ತೇನೆ’ ಎಂದರು.
2 ದಿನ ಅಹವಾಲು ಆಲಿಕೆ
ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ನೇತೃತ್ವದ ಸಮಿತಿಯು ಸೋಮವಾರ ಮತ್ತು ಮಂಗಳವಾರ 2 ದಿನಗಳ ಕಾಲ ವಿವಿಧ ಸಂಘಟನೆಗಳು, ವಕೀಲರಿಂದ ಕಾಯ್ದೆಗೆ ಸಂಬಂಧಿಸಿದಂತೆ ಅಭಿಪ್ರಾಯ ಆಲಿಸಲಿದೆ. ನಾಸಿಕ್ನ ಕಾಲಾರಾಮ್ ದೇವಾಲಯದ ಅರ್ಚಕ ಮಹಾಂತ ಸುಧೀರ್ದಾಸ್ ಮಹಾರಾಜ್ ಸೇರಿ ಪ್ರಮುಖರು ಅಭಿಪ್ರಾಯ ಸಲ್ಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.