MUDA CASE: ಶೀಘ್ರ ರಾಜಕಾರಣಿ, ಅಧಿಕಾರಿಗಳಿಗೆ ನೋಟಿಸ್?
ಅಕ್ರಮ ನಡೆದ ಅವಧಿಯಲ್ಲಿ ಕೆಲಸ ಮಾಡಿದವರಿಗೆ ಇ.ಡಿ. ಸಂಕಷ್ಟ
Team Udayavani, Oct 14, 2024, 6:55 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ಹಗರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಸಾಕ್ಷ್ಯ ಕಲೆ ಹಾಕುವಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ನಿರತರಾಗಿದ್ದು, ಈ ಸಂಬಂಧ ಶೀಘ್ರದಲ್ಲೇ ಕೆಲವು ಅಧಿಕಾರಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆಗಳಿವೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇ.ಡಿ.ಗೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತಿತರರ ವಿರುದ್ಧ ನೀಡಿರುವ ದೂರಿನ ಅನ್ವಯ ಇಸಿಐಆರ್ (ಪ್ರಕರಣ) ದಾಖಲಿಸಲಾಗಿದೆ. ತನಿಖೆ ಚುರುಕುಗೊಳಿಸಿರುವ ಇ.ಡಿ. ಸದ್ದಿಲ್ಲದೆ ಸಾಕ್ಷ್ಯ ಕಲೆ ಹಾಕುವಲ್ಲಿ ನಿರತ ವಾಗಿದೆ.
ಸಿಎಂಗೂ ಸಂಕಷ್ಟ?
ಮುಡಾ ಹಗರಣಕ್ಕೆ ಸಂಬಂಧಿಸಿ ಬ್ಯಾಂಕ್ ಮತ್ತಿತರ ದಾಖಲೆ ಗಳನ್ನು ಕಲೆ ಹಾಕಿ ಪರಿ ಶೀಲನೆ ನಡೆಸುವ ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಬಹುತೇಕ ಸಾಕ್ಷ್ಯಗಳನ್ನು ಕಲೆ ಹಾಕ ಬೇಕಿದ್ದು, ಬಳಿಕ ಒಬ್ಬೊಬ್ಬರೇ ಆರೋಪಿಗಳ ವಿಚಾರಣೆ ನಡೆಸಲಿದ್ದಾರೆ. ಈ ದಾಖಲೆ ಕಲೆ ಹಾಕಿ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ಪ್ರಾಥಮಿಕ ತನಿಖೆ ನಡೆಸಲು ತಿಂಗಳುಗಳೇ ಬೇಕಾಗುತ್ತವೆ. ಅಗತ್ಯ ಬಿದ್ದರೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಅವರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳುವ ಸಾಧ್ಯತೆಗಳಿವೆ.
ಅಧಿಕಾರಿಗಳಿಗೂ ಇ.ಡಿ. ಬಿಸಿ
ಮುಡಾದಲ್ಲಿ ಹಗರಣ ನಡೆದಿದೆ ಎನ್ನಲಾದ ಅವಧಿಯಲ್ಲಿ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಐಎಎಸ್, ಕೆಎಎಸ್ ದರ್ಜೆಯ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಗೂ ಇ.ಡಿ. ಬಿಸಿ ಮುಟ್ಟಿಸಲಿದೆ. ಈ ಅಧಿಕಾರಿಗಳಿಂದ ಅಕ್ರಮದ ಬಗ್ಗೆ ಮಾಹಿತಿ ಕಲೆ ಹಾಕಿದ ಬಳಿಕ ಇತರ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.