Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ…
Team Udayavani, Oct 14, 2024, 9:33 AM IST
ನವದೆಹಲಿ: ಮುಂಬೈನಿಂದ ನ್ಯೂಯಾರ್ಕ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು.
ವಿಮಾನದಲ್ಲಿ 239 ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಣವಾಗಿದ್ದು ಕೂಡಲೇ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.
ಬಳಿಕ ಬಾಂಬ್ ನಿಷ್ಕ್ರಿಯ ದಳ ವಿಮಾನವನ್ನು ಶೋಧ ನಡೆಸಿದ್ದಾರೆ ಆದರೆ ವಿಮಾನದಲ್ಲಿ ಎಲ್ಲೂ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಶೋಧ ಕಾರ್ಯ ಮುಂದುವರೆದಿದೆಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 2 ಗಂಟೆಗೆ ಏರ್ ಇಂಡಿಯಾ ವಿಮಾನ ನ್ಯೂಯಾರ್ಕ್‌ಗೆ ಹೊರಟಿತು. ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಬಾಂಬ್ ಬೆದರಿಕೆ ಬಂದಿತ್ತು. ಈ ಬೆದರಿಕೆಯ ನಂತರ, ಭದ್ರತಾ ಕಾರಣಗಳಿಗಾಗಿ ವಿಮಾನವನ್ನು ದೆಹಲಿಯ ಕಡೆಗೆ ತಿರುಗಿಸಲಾಯಿತು. ವಿಮಾನವನ್ನು ಪ್ರಸ್ತುತ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ ಮತ್ತು ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಗುಣಮಟ್ಟದ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
– मुंबई से न्यूयॉर्क जा रहे @airindia के विमान को बम से उड़ाने की धमकी के बाद #DelhiAirport पर विमान की इमरजेंसी लैंडिंग
– विमान से सभी यात्री और क्रू मेंबर सुरक्षित उतारे गए, चेकिंग जारी
– दिल्ली एयरपोर्ट के आइसोलेशन रनवे पर विमान#AirIndia #Bombthreat @ZeeBusiness @MoCA_GoI pic.twitter.com/BmfkGMaCZc— Ambarish Pandey (@pandeyambarish) October 14, 2024
ಬಾಂಬ್ ಪತ್ತೆಯಾಗಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ:
ಏರ್ ಇಂಡಿಯಾ ವಿಮಾನ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ ಬಳಿಕ ಪ್ರಯಾಣಿಕರನ್ನು ಇಳಿಸಿ ಕಾರ್ಯಾಚರಣೆ ನಡೆಸಲಾಯಿತು ಆದರೆ ವಿಮಾನದಲ್ಲಿ ಬಾಂಬ್‌ನಂತಹ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಂಬ್ ಬೆದರಿಕೆ ವದಂತಿ ಹಬ್ಬಿಸಿದವರ ಹುಡುಕಾಟವೂ ಮುಂದುವರೆದಿದೆ. ಕಳೆದ ಹಲವು ತಿಂಗಳುಗಳಿಂದ ಬಾಂಬ್ ವದಂತಿಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಮೇಲ್‌ಗಳು ಅಥವಾ ಕರೆಗಳು ಬರುತ್ತಿದ್ದು ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.