![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 14, 2024, 10:20 PM IST
ಉಳ್ಳಾಲ: ಕೋಟೆಕಾರಿನ ಮಾಡೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು ಮರ ಹಾಗೂ ಚಿನ್ನದ ಕೆಲಸ ನಿರ್ವಹಿಸುತ್ತಿದ್ದ ಹರೀಶ್ (35) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅವಿವಾಹಿತರಾಗಿದ್ದ ಹರೀಶ್ ಒಂಟಿಯಾಗಿ ಮಾಡೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಖನ್ನತೆಯಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹರೀಶ್ ಸಂಬಂಧಿಕರು ಕೋಟೆಕಾರು ಪರಿಸರದಲ್ಲಿ ವಾಸಿಸುತ್ತಿದ್ದು, ಸ್ಥಳೀಯವಾಗಿ ಯಾರೊಂದಿಗೂ ಹೆಚ್ಚು ಬೆರೆಯುತ್ತಿರಲಿಲ್ಲ. ಆರ್ಥಿಕವಾಗಿ ಅಡಚಣೆಯಿಂದ ಆತ್ಮಹತ್ಯೆಗೈದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.
ಬಾವಿಗೆ ಬಿದ್ದು ಮಹಿಳೆ ಸಾವು
ಉಳ್ಳಾಲ: ಇಲ್ಲಿನ ಕುಜುಮಗದ್ದೆ ಸಮೀಪ ಮಹಿಳೆಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕುಜುಮಗದ್ದೆ ನಿವಾಸಿ ವಾರಿಜಾ (45) ಸಾವನ್ನಪ್ಪಿದವರು. ಓರ್ವ ಪುತ್ರನ ಜತೆಗೆ ನೆಲೆಸಿದ್ದ ಅವರು ಮನೆ ಸಮೀಪದ ಬಾವಿಗೆ ಕಾಲು ಜಾರಿ ಬಿದ್ದಿರುವ ಶಂಕೆಯಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.