![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Oct 15, 2024, 6:29 AM IST
ಉಡುಪಿ: ಬಾಂಗ್ಲಾ ಅಕ್ರಮ ವಲಸಿಗರ ಜಾಲದ ಕುರಿತು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ.
ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲೆàಯರನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್‌ಐಎ ಮೂಲಕ ತನಿಖೆ ನಡೆಸಬೇಕು. ಕರಾವಳಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವ ಬಗ್ಗೆ ಪೊಲೀಸ್ ಇಲಾಖೆಯ ಪ್ರಾಥಮಿಕ ತನಿಖೆಯಲ್ಲಿ ಕಂಡು ಬರುತ್ತಿದ್ದು, ಸ್ಥಳೀಯರು ಇದರಿಂದ ತಲ್ಲಣಗೊಂಡಿದ್ದಾರೆ.
ಬಂಧಿತರು ಈಗಾಗಲೇ ನಕಲಿ ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಹೊಂದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಅಕ್ರಮ ವಲಸಿಗರಿಗೆ ಸಹಕಾರ ನೀಡುವ ಜಾಲವೂ ಕರಾವಳಿಯಲ್ಲಿ ಕಾರ್ಯಾಚರಿಸುತ್ತಿರುವ ಗುಮಾನಿ ಇದ್ದು, ಉನ್ನತ ಮಟ್ಟದ ತನಿಖೆ ಮಾಡಿ ದೇಶ ವಿರೋಧಿ ಮಾನಸಿಕತೆಯ ಜಾಲವನ್ನು ಪತ್ತೆಹಚ್ಚುವ ಅನಿವಾರ್ಯತೆ ಇದೆ. ರಾಷ್ಟೀಯ ಭದ್ರತೆಗೆ ಧಕ್ಕೆತರುವ ದೇಶ ವಿರೋಧಿ ಚಟುವಟಿಕೆಗಳಿಗೆ ಸಹಕಾರ ನೀಡುವ ಶಕ್ತಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.