KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ
ಅ. 27ರಂದು ಮುಖ್ಯ ಪರೀಕ್ಷೆ
Team Udayavani, Oct 15, 2024, 12:40 AM IST
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ (ವಿಎಒ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ಸೆ. 29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.
ಅಭ್ಯರ್ಥಿಗಳು ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಕೆಇಎ ವೆಬ್‌ಸೈಟ್‌ನ ಲಿಂಕ್‌ನಲ್ಲಿ ನಮೂದಿಸಿ ಫಲಿತಾಂಶವನ್ನು ಪಡೆಯಬಹುದು. ಒಟ್ಟು 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್ 27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆಗೆ ಅರ್ಹರಾಗುತ್ತಾರೆ. ವಯೋಮಿತಿ ಸಡಿಲಿಕೆಯ ಅನುಕೂಲ ಪಡೆಯುವವರ ಸಲುವಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಅ. 26ರಂದು ಕನ್ನಡ ಕಡ್ಡಾಯ ಪರೀಕ್ಷೆ ಇರುತ್ತದೆ. ಅದರ ಅನಂತರ ಅವರು ಕೂಡ ಅ. 27ರಂದು ನಡೆಯುವ ಮುಖ್ಯ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.