Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Team Udayavani, Oct 15, 2024, 11:58 AM IST

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

ಚೆನ್ನೈ: ಬಿಗ್‌ ಬಾಸ್‌ ತಮಿಳು -8 (Bigg Boss Tamil-8) ಸಾಗುತ್ತಿದೆ. ಈ ಬಾರಿ ವಿಜಯ್‌ ಸೇತುಪತಿ (Vijay Sethupathi) ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಕಳೆದ 7 ಸೀಸನ್‌ ಬಿಗ್‌ ಬಾಸ್‌ ತಮಿಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದ ಕಮಲ್‌ ಹಾಸನ್‌ ಈ ಬಾರಿ ಬಿಗ್‌ ಬಾಸ್‌ನಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ.

ಇದೀಗ ಕಮಲ್‌ ಹಾಸನ್ (Kamal Haasan) ಮತ್ತೆ ಬಿಗ್‌ ಬಾಸ್‌ ವೇದಿಕೆ ಹತ್ತಲು ಸಿದ್ದರಾಗಿದ್ದಾರೆ ಎನ್ನುವ ವರದಿಯೊಂದು ಹೊರಬಿದ್ದಿದೆ.

ಇದನ್ನೂ ಓದಿ: BBK11: ಬಿಗ್‌ ಬಾಸ್‌ಗೆ ಸುದೀಪ್‌ ವಿದಾಯ; ಕಿಚ್ಚನ ನಿರ್ಧಾರಕ್ಕೆ ಅಸಲಿ ಕಾರಣ ಇದೇನಾ?

ಕಳೆದ 7 ಸೀಸನ್‌ ಬಿಗ್‌ ಬಾಸ್‌ ನಡೆಸಿಕೊಟ್ಟು, ಹತ್ತಾರು ಸ್ಪರ್ಧಿಗಳ ವ್ಯಕ್ತಿತ್ವಗಳನ್ನು ತಿದ್ದಿದ ಕಮಲ್‌ ಹಾಸನ್‌ ಬಿಗ್‌ ಬಾಸ್‌ ನಿಂದ ಬ್ರೇಕ್‌ ಪಡೆದುಕೊಂಡ ಬಳಿಕ ಮತ್ತೊಮ್ಮೆ ದೊಡ್ಮನೆ ವೇದಿಕೆ ಹತ್ತಲಿದ್ದಾರೆ ಎಂದು ವರದಿಯಾಗಿದೆ.

ಶಿವಕಾರ್ತಿಕೇಯನ್ (Sivakarthikeyan) ಮತ್ತು ಸಾಯಿ ಪಲ್ಲವಿ (Sai Pallavi) ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ʼಅಮರನ್‌ʼ (Amaran) ಚಿತ್ರದ ಪ್ರಚಾರಕ್ಕಾಗಿ ಕಮಲ್‌ ಹಾಸನ್‌ ಬಿಗ್‌ ಬಾಸ್‌ ವೇದಿಕೆಗೆ ಬರಲಿದ್ದಾರೆ ಎನ್ನಲಾಗಿದೆ.  ಈ ಸಿನಿಮಾವನ್ನು ಕಮಲ್‌ ಹಾಸನ್‌ ಅವರ ಬ್ಯಾನರ್‌ ಅಡಿಯಲ್ಲಿ ನಿರ್ಮಾಣ ಮಾಡಲಾಗಿದೆ.

ಬಿಗ್‌ ಬಾಸ್‌ ತಮಿಳು ವೇದಿಕೆಗೆ ಚಿತ್ರತಂಡ ಪ್ರಚಾರಕ್ಕೆ ಹೋಗಲಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

ಬಹು ನಿರೀಕ್ಷಿತ ʼಅಮರನ್‌ʼ ಇದೇ ಅಕ್ಟೋಬರ್‌ 31 ರಂದು ರಿಲೀಸ್‌ ಆಗಲಿದೆ. ಇದು ಮೇಜರ್ ಮುಕುಂದ್ ವರದರಾಜನ್ ಅವರ ಸಾಹಸಗಾಥೆಯನ್ನು ಒಳಗೊಂಡ ಸಿನಿಮಾವಾಗಿರಲಿದೆ.

ʼಇಂಡಿಯನ್‌ -2ʼ ಬಳಿಕ ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಬಿಗ್‌ ಬಾಸ್‌ನಿಂದ ಬ್ರೇಕ್:‌ ಕಮಲ್‌ ಹೇಳಿದ್ದೇನು?  

ಕಳೆದ 7 ವರ್ಷಗಳಿಂದ  ನಿಮ್ಮ ಮನೆಗಳಲ್ಲಿ ನಿಮ್ಮನ್ನು ತಲುಪುವ ಸೌಭಾಗ್ಯ ನನಗೆ ಸಿಕ್ಕಿದೆ. ನಿಮ್ಮ ಪ್ರೀತಿ ಪ್ರೋತ್ಸಾಹಕ್ಕೆ ನಾನು ಕೃತಜ್ಞನಾಗಿದ್ದೇನೆ. ನಿಮ್ಮೆಲ್ಲರ ಬೆಂಬಲವು ಬಿಗ್ ಬಾಸ್ ತಮಿಳನ್ನು ಭಾರತದ ಅತ್ಯುತ್ತಮ ರಿಯಾಲಿಟಿ ಶೋಗಳಲ್ಲಿ ಒಂದನ್ನಾಗಿ ಮಾಡಿದೆ ಎಂದು ಅವರು ಹೇಳಿದ್ದರು.

ಕಾರ್ಯಕ್ರಮ ನಿರೂಪಣೆಯ ಹಾದಿಯಲ್ಲಿ ನಾನು ಹತ್ತಾರು ಪಾಠಗಳನ್ನುನ ಕಲಿತಿದ್ದೇನೆ. ಕಾರ್ಯಕ್ರಮದಲ್ಲಿ ಇದುವರೆಗೆ ಕಾಣಿಸಿಕೊಂಡ ಎಲ್ಲಾ ಸ್ಪರ್ಧಿಗಳಿಗೆ ನಾನು ಧನ್ಯವಾದವನ್ನು ಹೇಳುತ್ತೇನೆ. ಹಾಗೂ ಈ ಅವಕಾಶವನ್ನು ಕೊಟ್ಟ ವಿಜಯ್‌ ಟಿವಿ, ಸಿಬ್ಬಂದಿಗಳಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ. ಈ ಸೀಸನ್  ದೊಡ್ಡ ಯಶಸ್ಸಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಅವರು ಹೇಳಿದ್ದರು.

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.