![sullia](https://www.udayavani.com/wp-content/uploads/2024/12/sullia-1-415x237.jpg)
BBK11: ಬಿಗ್‌ಬಾಸ್‌ಗೆ ಕಿಚ್ಚ ವಿದಾಯ.. ಟ್ವೀಟ್ ಮಾಡಿ ಎಲ್ಲ ಗೊಂದಲಕ್ಕೆ ತೆರೆ ಎಳೆದ ಸುದೀಪ್
Team Udayavani, Oct 15, 2024, 1:04 PM IST
![11](https://www.udayavani.com/wp-content/uploads/2024/10/11-19-620x372.jpg)
ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada) ಕಾರ್ಯಕ್ರಮ ನಿರೂಪಣೆ ಬಗ್ಗೆ ಕಿಚ್ಚ ಸುದೀಪ್ (Kiccha Sudeep) ಮಾಡಿದ ಆ ಒಂದು ಅನೇಕ ಚರ್ಚೆಗಳನ್ನು ಹುಟ್ಟು ಹಾಕಿದೆ.
ಕಳೆದ 10 ಸೀಸನ್ ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಸುದೀಪ್ 11ನೇ ಸೀಸನ್ ಆರಂಭದಲ್ಲೇ ಇದು ನನ್ನ ಕೊನೆಯ ಸೀಸನ್ ಎಂದು ಹೇಳಿರುವುದರ ಹಿಂದಿನ ಕಾರಣವೇನು ಎಂದು ಅನೇಕರು ಯೋಚನೆ ಮಾಡುವಂತಾಗಿದೆ.
ಇದನ್ನೂ ಓದಿ: BBK11: ಬಿಗ್ ಬಾಸ್‌ಗೆ ಸುದೀಪ್ ವಿದಾಯ; ಕಿಚ್ಚನ ನಿರ್ಧಾರಕ್ಕೆ ಅಸಲಿ ಕಾರಣ ಇದೇನಾ?
ಬಿಗ್ ಬಾಸ್ ನಲ್ಲಿ ಕನ್ನಡ ಹೆಚ್ಚಾಗಿ ಬಳಕೆ ಆಗುತ್ತಿಲ್ಲ. ಕಾರ್ಯಕ್ರಮದ ನಿರ್ದೇಶಕರು ಬದಲಾಗಿದ್ದು, ಅವರು ತಮಿಳಿನವರಾಗಿದ್ದಾರೆ. ಶೋ ಆಯೋಜಕಿ ಮರಾಠಿಯವರಾಗಿದ್ದಾರೆ. ಹಾಗಾಗಿ ಅಲ್ಲಿ ಕನ್ನಡ ಹೆಚ್ಚು ಬಳಕೆ ಆಗುತ್ತಿಲ್ಲ. ಸ್ವರ್ಗ – ನರಕದ ಕಾನ್ಸೆಪ್ಟ್ ಬಗೆಗಿನ ಅಸಮಾಧಾನ ಹೀಗೆ ಈ ಎಲ್ಲಾ ಕಾರಣದಿಂದ ಕಿಚ್ಚ ಅವರು ಆಯೋಜಕರಿಂದ ಬೇಸರಗೊಂಡಿದ್ದಾರೆ. ಅದೇ ಕಾರಣದಿಂದ ಅವರು ಏಕಾಏಕಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದೆ.
ಇದರ ಬೆನ್ನಲ್ಲೇ ಕಿಚ್ಚ ಸುದೀಪ್ ಅವರು ಎಲ್ಲಾ ಗೊಂದಲಕ್ಕೂ ತೆರೆ ಎಳೆಯುವ ನಿಟ್ಟಿನಲ್ಲಿ ಟ್ವೀಟ್ ಮಾಡಿದ್ದಾರೆ.
I appreciate all the love and support coming my way regarding my tweet; it truly makes me feel cherished. However, I kindly ask those creating comments and videos to refrain from making assumptions about any conflicts between the channel and myself. We have shared a long and…
— Kichcha Sudeepa (@KicchaSudeep) October 15, 2024
ಕಿಚ್ಚ ಸುದೀಪ್ ಟ್ವೀಟ್ ನಲ್ಲಿ ಏನಿದೆ?:
“ನಾನು ಇತ್ತೀಚೆಗೆ ಮಾಡಿದ ಟ್ವೀಟ್ ಬಗ್ಗೆ ನೀವೆಲ್ಲ ತೋರಿಸಿದ ಬೆಂಬಲ ಹಾಗೂ ಪ್ರೀತಿಯನ್ನು ಪ್ರಶಂಸಿಸುತ್ತೇನೆ. ಆದರೆ ಚಾನೆಲ್ ಮತ್ತು ನನ್ನ ನಡುವೆ ಯಾವುದೇ ರೀತಿಯ ಗೊಂದಲ ಇರುವಂತೆ ಊಹಿಸಿ ಮಾತನಾಡುವುದನ್ನು, ವಿಡಿಯೋ ಮಾಡಿ ಮಾತನಾಡುವುದನ್ನು ದಯವಿಟ್ಟು ನಿಲ್ಲಿಸಿ. ನನ್ನ ಹಾಗೂ ಚಾನೆಲ್ ನಡುವೆ ಒಂದು ಸುದೀರ್ಘ ಪಾಸಿಟಿವ್ ಜರ್ನಿಯಿದೆ. ಈ ಪಯಣಕ್ಕೆ ʼಅಗೌರವʼವನ್ನು ಸೇರಿಸಿ ಮಾತನಾಡಬೇಡಿ. ನೀವೆಲ್ಲ ಊಹಿಸುತ್ತಿರುವ ವಿಚಾರ ಆಧಾರರಹಿತವಾಗಿದೆ. ನಾನು ಮಾಡಿರುವ ಟ್ವೀಟ್ ನೇರ ಮತ್ತು ಪ್ರಾಮಾಣಿಕವಾಗಿದೆ. ನನ್ನ ಹಾಗೂ ಕಲರ್ಸ್ ನಡುವಿನ ಬಾಂಧವ್ಯ ಅದ್ಭುತವಾಗಿದೆ. ನನ್ನನ್ನು ಅವರು ಯಾವಾಗಲೂ ಗೌರವದಿಂದಲೇ ನಡೆಸಿಕೊಂಡಿದ್ದಾರೆ. ಕಾರ್ಯಕ್ರಮ ನಿರ್ದೇಶಕರಾಗಿರುವ ಪ್ರಕಾಶ್ ಅವರು ಒಬ್ಬ ಪ್ರತಿಭಾವಂತ ವ್ಯಕ್ತಿ. ನಾನು ಅವರ ತುಂಬಾ ಗೌರವವನ್ನು ಹೊಂದಿದ್ದೇನೆ. ನಾನು ಕೆಲಸ ಮಾಡುತ್ತಿರುವ ತಂಡವು ಅನಗತ್ಯ ಆರೋಪಗಳನ್ನು ಎದುರಿಸುತ್ತಿರುವಾಗ ಸುಮ್ಮನೆ ಕುಳಿತು ಆನಂದಿಸು ವ್ಯಕ್ತಿ ನನ್ನಲ್ಲ” ಸುದೀಪ್ ಬರೆದುಕೊಂಡಿದ್ದಾರೆ.
ಆ ಮೂಲಕ ಹರಿದಾಡಿದ ಎಲ್ಲ ಗೊಂದಲಕ್ಕೂ ಕಿಚ್ಚ ಅವರು ತೆರೆ ಎಳೆದಿದ್ದಾರೆ.
ಟಾಪ್ ನ್ಯೂಸ್
![sullia](https://www.udayavani.com/wp-content/uploads/2024/12/sullia-1-415x237.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್](https://www.udayavani.com/wp-content/uploads/2024/12/1-42-150x90.jpg)
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
![BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?](https://www.udayavani.com/wp-content/uploads/2024/12/BBK-11-150x86.jpg)
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
![BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ](https://www.udayavani.com/wp-content/uploads/2024/12/19-3-150x90.jpg)
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
![BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ](https://www.udayavani.com/wp-content/uploads/2024/12/bi-1-150x85.jpg)
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.