Rain: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿವಿಧೆಡೆ ದಿನವಿಡೀ ಉತ್ತಮ ಮಳೆ

ಕರಾವಳಿಗೆ ಬುಧವಾರ ಆರೆಂಜ್‌ ಅಲರ್ಟ್‌ ಘೋಷಣೆ, ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ

Team Udayavani, Oct 16, 2024, 2:15 AM IST

Rain1

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ದಿನವಿಡೀ ಮಳೆಯ ವಾತಾವರಣವಿತ್ತು. ಹಗಲು ವೇಳೆಯಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯಾಗಿದ್ದು, ಸಂಜೆ, ರಾತ್ರಿ ವೇಳೆಯಲ್ಲಿ ಹಲವೆಡೆ ಉತ್ತಮ ಮಳೆಯಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಆಕಾಶದಲ್ಲಿ ಮೋಡದ ಚಲನೆ ಹೆಚ್ಚಾಗಿದ್ದು, ಬುಹುತೇಕ ಕಡೆಗಳಲ್ಲಿ ಮಳೆಯಾಗಿದೆ. ಸುಳ್ಯ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಭಾಗದಲ್ಲೂ ಬೆಳಗ್ಗಿನಿಂದಲೇ ಉತ್ತಮ ಮಳೆಯಾಗಿದೆ. ದೇಶಾದ್ಯಂತ ಹಿಂಗಾರು ಮಾರುತಗಳು ಬಿರುಸಾಗುತ್ತಿವೆ. ಕರಾವಳಿಯಲ್ಲೂ ಹಿಂಗಾರು ಮಳೆಯ ಲಕ್ಷಣಗಳು ಈಗಾಗಲೇ ಗೋಚರಿಸಲು ಆರಂಭವಾಗಿದ್ದು, ವಿವಿಧೆಡೆ ಗುಡುಗು ಸಹಿತ ಮಳೆ ಸುರಿಯಲು ಈಗಾಗಲೇ ಆರಂಭವಾಗಿದೆ.

ಕರಾವಳಿಗೆ ಬುಧವಾರ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಸದ್ಯ ಗುರುವಾರ ಮತ್ತು ಶುಕ್ರವಾರ ಎಲ್ಲೋ ಅಲರ್ಟ್‌ ಇದೆ. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 27.6 ಡಿ.ಸೆ. ದಾಖಲಾಗಿದ್ದು, ಮಳೆ ವಾತಾವರಣದಿಂದಾಗಿ ಸಾಮಾನ್ಯಕ್ಕಿಂತ 3.4 ಡಿ.ಸೆ. ಇಳಿಕೆಯಾಗಿದೆ. ಕನಿಷ್ಠ ತಾಪಮಾನ 23.6 ಡಿ.ಸೆ. ದಾಖಲಾಗಿದೆ.

ಉಡುಪಿಯಲ್ಲೂ ಮಳೆ
ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆಯಿಂದ ಸಂಜೆವರೆಗೂ ಬಿಟ್ಟುಬಿಟ್ಟು ಸಾಧಾರಣ ಮಳೆಯಾಗಿದೆ. ಬಿಸಿಲು, ಮೋಡ ಕವಿದ ವಾತಾವರಣದ ನಡುವೆ ಉಡುಪಿ, ಕುಂದಾಪುರ, ಕಾರ್ಕಳ ಸುತ್ತಮುತ್ತ ಸಣ್ಣದಾಗಿ ನಿರಂತರ ಮಳೆಯಾಗಿದೆ. ಉಡುಪಿ, ಮಣಿಪಾಲ, ಮಲ್ಪೆ ಭಾಗದಲ್ಲಿ ಇಡೀ ದಿನ ಮಳೆ ಸುರಿದಿದೆ.
ಸೋಮವಾರ ತಡರಾತ್ರಿಯೂ ಹಲವೆಡೆ ಕೆಲಕಾಲ ಮಳೆಯಾಗಿದ್ದು, ಮಂಗಳವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ 3.9 ಮಿ. ಮೀ. ಸರಾಸರಿ ಮಳೆಯಾಗಿದೆ.

ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ
ಭಾರೀ ಮಳೆ ಮತ್ತು ಸಮುದ್ರದಲ್ಲಿ ಅಲೆಗಳ ಅಬ್ಬರಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಮೀನು ಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರರು ಕೂಡಲೇ ದಡ ಸೇರಬೇಕು. ಪ್ರವಾಸಿಗರು, ಸಾರ್ವಜನಿಕರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ತುರ್ತುಸೇವೆಗೆ ಶುಲ್ಕರಹಿತ 1077 ಹಾಗೂ 0820-2574802 ಅನ್ನು ಸಂಪರ್ಕಿಸಲು ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಳೆಯಿಂದ ಭತ್ತ ಕಟಾವಿಗೆ ಹಿನ್ನಡೆ
ಕರಾವಳಿಯಲ್ಲಿ ಈಗ ಪ್ರತಿ ದಿನವೂ ಮಳೆ ಸುರಿಯುತ್ತಿದೆ. ದ.ಕ. ಮತ್ತು ಉಡುಪಿಯ ವಿವಿಧ ಪ್ರದೇಶಗಳಲ್ಲಿ ಭತ್ತದ ಬೆಳೆ ಬೆಳೆಯಲಾಗುತ್ತಿದೆ. ಇಲ್ಲಿ ಈಗ ಬಹುತೇಕ ಗದ್ದೆಗಳಲ್ಲಿ ಪೈರು ಬೆಳೆದು ನಿಂತಿದ್ದು ಕಟಾವಿಗೆ ಸಿದ್ಧವಾಗುತ್ತಿವೆ. ಈ ರೀತಿಯ ಮಳೆ ಭತ್ತದ ಬೆಳೆಗೆ ಅಪಾಯಕಾರಿಯಾಗಿದೆ. ಆದರೆ ಮಳೆಯಿಂದಾಗಿ ಕಟಾವು ಮಾಡಲು ಸಾಧ್ಯವಾಗುತ್ತಿಲ್ಲ.

ಈಗ ಕಟಾವು ಯಂತ್ರದ ಮೂಲಕವೇ ನಡೆಯುತ್ತದೆಯಾದರೂ ಯಂತ್ರಗಳನ್ನು ಗದ್ದೆಗೆ ಇಳಿಸುವ ಸ್ಥಿತಿ ಇಲ್ಲ. ಹೆಚ್ಚಿನ ಕಡೆ ದಿನದ ಒಂದೆರಡು ಹೊತ್ತು ಖಾಯಂ ಮಳೆ ಸುರಿಯುವುದರಿಂದ ಬೈಲು ಗದ್ದೆಗಳಲ್ಲಿ ನೀರು ನಿಂತಿದೆ. ಹೀಗಾಗಿ ಯಂತ್ರಗಳನ್ನು ಇಳಿಸಲು ಸಾಧ್ಯವಾಗಿಲ್ಲ. ಭತ್ತದ ಬೆಳೆಗೆ ಹಾನಿಯಾದರೆ ಮೇವಿನ ಹುಲ್ಲು ಕೊಳೆಯವುದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಟಾಪ್ ನ್ಯೂಸ್

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

Explainer: ರಾಜ್ಯದ ಜಾತಿ ಜನ ಗಣತಿಗೆ ಯಾಕೆ ಇಷ್ಟೊಂದು ಚರ್ಚೆ ?

Explainer: ರಾಜ್ಯದ ಜಾತಿ ಜನ ಗಣತಿ ಕುರಿತು ಯಾಕೆ ಇಷ್ಟೊಂದು ಚರ್ಚೆ ?

4-ptr

Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು

1-amudaa

MUDA; Chairman ಕೆ.ಮರಿಗೌಡ ರಾಜೀನಾಮೆ: ಆಡಳಿತಾಧಿಕಾರಿ ನೇಮಕ ಸಾಧ್ಯತೆ

1-jj-bg-aa

J&K; ಸಿಎಂ ಆಗಿ ಒಮರ್ ಅಬ್ದುಲ್ಲಾ, ಡಿಸಿಎಂ ಆಗಿ ಸುರೀಂದರ್ ಚೌಧರಿ ಪ್ರಮಾಣ ವಚನ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Dubai-N1

Dubai Miracle Garden: ಮರು ಭೂಮಿಯಲ್ಲಿ ಮೂಡಿ ಬಂದ ಪುಷ್ಪ ಸಿರಿ ವೈಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Areca-Chde

Karkala: ಅಡಿಕೆಯಲ್ಲಿ ಚೆಂಡೆಕೊಳೆ ರೋಗ ಪತ್ತೆ; ರೈತರಿಗೆ ದೊಡ್ಡ ಪ್ರಮಾಣದ ನಷ್ಟ

boil-rice

Ration: ಕರಾವಳಿಗೆ ಹೊರರಾಜ್ಯದ ಕುಚಲಕ್ಕಿಯೇ ಅನಿವಾರ್ಯ; ಭತ್ತವೂ ಇಲ್ಲ, ಅಕ್ಕಿಯೂ ಇಲ್ಲ,

Eshwar-Malpe1

Udupi: ಮುಳುಗುತಜ್ಞ ಈಶ್ವರ ಮಲ್ಪೆ ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ

SP-Arun

immigrants: ಅಕ್ರಮ ಬಾಂಗ್ಲಾ ಪ್ರಜೆಗಳು 7 ಮಂದಿಯೂ ಕಟ್ಟಡ ಕಾರ್ಮಿಕರಲ್ಲ: ಎಸ್‌.ಪಿ.ಅರುಣ್‌

udupi-BJP

Council By Poll: ಕಾಂಗ್ರೆಸ್‌ ಸರಕಾರದಿಂದ ಕರಾವಳಿ ಜಿಲ್ಲೆಗಳ ಅವಗಣನೆ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

3

Punjalkatte:ಕೊಳಕ್ಕೆಬೈಲ್‌-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

2

Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.