Panaji: ಹೊರ ರಾಜ್ಯದವರ ಬಗ್ಗೆ ಗೋವಾ ಮುಖ್ಯಮಂತ್ರಿಯಿಂದ ವಿವಾದಾತ್ಮಕ ಹೇಳಿಕೆ: ಆಕ್ಷೇಪ

Team Udayavani, Oct 16, 2024, 2:41 PM IST

5-panaji

ಪಣಜಿ: ಗೋವಾ ರಾಜ್ಯದ ಪ್ರತಿಯೊಂದೂ ಕ್ಷೇತ್ರದ ಉದ್ಯೋಗದಲ್ಲಿ ಹೊರ ರಾಜ್ಯದವರು ನುಸುಳಿಕೊಳ್ಳುತ್ತಿದ್ದಾರೆ. ಗೋವಾದ ಭವಿಷ್ಯದ ದೃಷ್ಠಿಯಿಂದ ಇದು ಘಾತಕವಾಗಿದೆ. ಇದೇ ರೀತಿ ಮುಂದುವರೆದರೆ ಮೂಲತಃ ಗೋವನ್ನರು ಮುಂಬರುವ ದಿನಗಳಲ್ಲಿ ಯಾವುದೇ ಉದ್ಯೋಗ ನಡೆಸಲು ಸಾಧ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೊರ ರಾಜ್ಯದ ಜನತೆಯ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದರು.

ಉತ್ತರ ಗೋವಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಗೋವಾ ಮುಖ್ಯಮಂತ್ರಿ ಮಾತನಾಡಿದರು.

ಗೋವಾ ರಾಜ್ಯದಲ್ಲಿರುವ ಪರಪ್ರಾಂತೀಯ ಅಂದರೆ ಹೊರ ರಾಜ್ಯದ ಜನರ ಬಗ್ಗೆ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಇದೀಗ ಆಕ್ಷೇಪಕ್ಕೆ ಕಾರಣವಾಗಿದೆ. ಗೋವಾ ರಾಜ್ಯದ ಪ್ರತಿಯೊಂದೂ ಕ್ಷೇತ್ರದ ಉದ್ಯೋಗದಲ್ಲಿ ಹೊರ ರಾಜ್ಯದ ಜನರು ನುಸುಳುತ್ತಿದ್ದಾರೆ ಎಂದು ಪ್ರಮೋದ ಸಾವಂತ್ ನೀಡಿರುವ ವಿವಾದಾತ್ಮಕ ಹೇಳಿಕೆ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.

ಕಾರ್ಮಿಕ ಇಲಾಖೆಯ ಬಳಿ ಗೋವಾದಲ್ಲಿ ಎಷ್ಟು ಹೊರ ರಾಜ್ಯದ ಕಾರ್ಮಿಕರಿದ್ದಾರೆ ಎಂಬ ನೋಂದಾವಣಿಯಿಲ್ಲ. ಈ ವಿಭಾಗದಲ್ಲಿ ಹೊರ ರಾಜ್ಯದ ಕಾರ್ಮಿಕರ ವಿರುದ್ಧ ಯಾವುದೇ ದೂರು ಅಥವಾ ಪ್ರಕರಣಗಳಿಲ್ಲ ಎಂದು ಕಾರ್ಮಿಕ ಸಚಿವ ಬಾಬುಶ್ ಮೋನ್ಸೆರಾತ್ ಈ ಹಿಂದೆ ಹೇಳಿಕೆ ನೀಡಿದ್ದರು.

ಗೋವಾದಲ್ಲಿ ಹೊರ ರಾಜ್ಯದ ಜನರ ಪಾತ್ರ

ಗೋವಾ ರಾಜ್ಯಕ್ಕೆ ಪ್ರತಿದಿನ ಹೂವು, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ನೆರೆಯ ರಾಜ್ಯ ಕರ್ನಾಟಕದಿಂದಲೇ ಆಗುತ್ತದೆ. ಇಷ್ಟೇ ಅಲ್ಲದೆ ಗೋವಾ ಸರ್ಕಾರದ ಉನ್ನತ ಹುದ್ದೆಗಳಿಂದ ಹಿಡಿದು ಕೂಲಿ ಕಾರ್ಮಿಕರವರೆಗೂ ಕೂಡ ಕರ್ನಾಟಕದ ಜನರೇ ಹೆಚ್ಚಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಗೋವಾದ ಅಭಿವೃದ್ಧಿಯಲ್ಲಿ ಕನ್ನಡಿಗರ ಪಾತ್ರ ಬಹು ದೊಡ್ಡದಿದೆ. ಇಷ್ಟು ಮಾತ್ರವಲ್ಲದೇ  ಬಿಹಾರ, ಝಾರ್ಖಂಡ್ ಸೇರಿದಂತೆ ವಿವಿಧ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಗೋವಾದಲ್ಲಿ ಕಾರ್ಮಿಕರಿದ್ದಾರೆ. ಹೀಗಿರುವಾಗ ಗೋವಾ ಮುಖ್ಯಮಂತ್ರಿಗಳ ಈ ವಿವಾದಾತ್ಮಕ ಹೇಳಿಕೆ ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ.

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.