Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
Team Udayavani, Oct 16, 2024, 7:59 PM IST
ದಾವಣಗೆರೆ: ನಗರದಲ್ಲಿ ಇತ್ತೀಚೆಗೆ ಗಣೇಶೋತ್ಸವ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 48 ಮಂದಿಗೆ ನ್ಯಾಯಾಲಯ ಜಾಮೀನು ನೀಡಿದೆ. ಸೆ.19ರಂದು ದಾವಣಗೆರೆಯ ಅರಳಿಮರ ಸರ್ಕಲ್ ಬಳಿ ಗಣೇಶಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು.
ಅಂದು ನಗರದ ಅರಳಿ ಮರ ಸರ್ಕಲ್ ನಲ್ಲಿ ಮೆರವಣಿಗೆ ಸಾಗಿದ ನಂತರ ಅಜಾದ್ ನಗರ ಮುಖ್ಯ ರಸ್ತೆಯಿಂದ ಮೊದಲು ಕಲ್ಲು ತೂರಿದ್ದು ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಪ್ರಕರಣ ದಾಖಲಾಗಿ, ಹಿಂದು -ಮುಸ್ಲಿಂ ಸೇರಿದಂತೆ ಒಟ್ಟು 48 ಮಂದಿಯ ಬಂಧನ ಮಾಡಲಾಗಿತ್ತು. ಪ್ರಚೋದನಾಕಾರಿ ಹೇಳಿಕೆ ಆರೋಪದ ಮೇಲೆ ಬಂಧಿತರಾಗಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿ ಜಾಮೀನಿನ ಮೇಲೆ ಹೊರ ಬಂದಾಗ ಕಾರ್ಯಕರ್ತರು ಜೈಕಾರ ಹಾಕಿ, ತಿಲಕವಿಟ್ಟು ಸ್ವಾಗತಿಸಿದರು.
ಸೆ.19ರಂದು ನಗರದ ಅರಳಿ ಮರ ಸರ್ಕಲ್ ನಲ್ಲಿ ಮೆರವಣಿಗೆ ಸಾಗಿದ ನಂತರ ಅಜಾದ್ ನಗರ ಮುಖ್ಯ ರಸ್ತೆಯಿಂದ ಮೊದಲು ಕಲ್ಲು ತೂರಿದ್ದು ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಕೂಡಲೇ ಮುಸ್ಲಿಂ ಮುಖಂಡರು ಪರಿಸ್ಥಿತಿಯ ನಿಯಂತ್ರಿಸಿದ್ದಾರೆ. ಗಣೇಶ ಮೆರವಣಿಗೆ ಸಾಗಿದ ಮೂರು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಕೂಡಲೇ ಪೊಲೀಸರು ಇಡೀ ನಗರದಲ್ಲಿ ಸಂಚಾರ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣ ದಾಖಲಾಗಿದ್ದು, ಹಿಂದೂ -ಮುಸ್ಲಿಂ ಸೇರಿದಂತೆ ಒಟ್ಟು 48 ಮಂದಿಯ ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.