Kundapura: ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಮರಣ ಹೊಂದಿದ ಚಾಲಕ
Team Udayavani, Oct 17, 2024, 7:10 AM IST
ಕುಂದಾಪುರ: ಆಂಧ್ರ ಪ್ರದೇಶ ನೋಂದಣಿಯ ಲಾರಿಯೊಂದರಲ್ಲಿ ಚಾಲಕನ ಶವ ಮಲಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆ ಆಗಿದೆ.
ತ್ರಾಸಿ ಮರವಂತೆ ಬೀಚ್ ಬದಿಯ ವರಾಹ ಸ್ವಾಮಿ ದೇವಸ್ಥಾನದ ಎದುರಿನ ಹೆದ್ದಾರಿಯಲ್ಲಿ ತಾಂತ್ರಿಕ ದೋಷದ ಕಾರಣ 6 ದಿನಗಳಿಂದ ನಿಂತಿದ್ದ ಲಾರಿಯಲ್ಲಿ ಈ ಘಟನೆ ನಡೆದಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಕುಂದಾಪುರ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದ ಲಾರಿ ಚಾಲಕ ಬುಧವಾರ ಬೆಳಗ್ಗೆ ಮೃತಪಟ್ಟಿರುವ ಶಂಕೆ ಇದೆ. ಸ್ಥಳಕ್ಕೆ ಗಂಗೊಳ್ಳಿ ಠಾಣಾ ಧಿಕಾರಿ ಬಸವ ಕನಶೆಟ್ಟಿ, ಸಹಾಯಕ ಠಾಣಾಧಿಕಾರಿ ಅಮೃತೇಶ್, ಸಿಬ್ಬಂದಿಗಳಾದ ನಾಗರಾಜ್ ಶೇರಿರ್ಗಾ, ರಿತೇಶ್ ಮುನಿಯಾಲ್,ರಾಘವೇಂದ್ರ ಪೂಜಾರಿ, ಮುಖ್ಯ ಪೇದೆ ನಾಗರಾಜ್ ನಾಯಕವಾಡಿ, ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಮಿದಲಾದವರು ಭೇಟಿ ನೀಡಿ ಶವ ಸಾಗಾಟಕ್ಕೆ ಸಹಕರಿಸಿದರು. ಸದ್ಯ ಶವವನ್ನು ಮಣಿಪಾಲ ಆಸ್ಪತ್ರೆಯ ಶವ ಶೀತಲೀಕರಣ ಘಟಕದಲ್ಲಿ ಇರಿಸಲಾಗಿದೆ. ಮೃತ ಚಾಲಕನ ಹೆಸರು ಆಂಧ್ರಪ್ರದೇಶ ಮೂಲದ ಬಾಬು ರಾಯ್ ಎಂದು ಜತೆಯಲ್ಲಿದ್ದ ಕ್ಲೀನರ್ ಶ್ರಿವಾಸ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.