Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Team Udayavani, Oct 17, 2024, 7:04 PM IST
ಹುಬ್ಬಳ್ಳಿ:ಹುಬ್ಬಳ್ಳಿಯಿಂದ ಅಹ್ಮದಾಬಾದ್‌ಗೆ ವಿಮಾನಯಾನ ಸೌಲಭ್ಯ ಆರಂಭ ಹಾಗೂ ಹುಬ್ಬಳ್ಳಿ-ಚೆನ್ನೈ ನಡುವಿನ ವಿಮಾನಯಾನ ಸ್ಥಗಿತಗೊಳಿಸದಿರುವ ಕುರಿತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ ನಾಯ್ಡು ಜತೆ ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚರ್ಚಿಸಿದ್ದಾರೆ.
ಹುಬ್ಬಳ್ಳಿಯ ಉದ್ಯಮಿಗಳು, ವ್ಯಾಪಾರಸ್ಥರು ಇನ್ನಿತರರು ಅಹ್ಮದಾಬಾದ್ ಹಾಗೂ ಚೆನ್ನೈನೊಂದಿಗೆ ಹೆಚ್ಚಿನ ಸಂಪರ್ಕ ಹೊಂದಿದ್ದಾರೆ.
ಅಹ್ಮದಾಬಾದ್‌ಗೆ ಹುಬ್ಬಳ್ಳಿಯಿಂದ ವಿಮಾನಯಾನ ಆರಂಭಿಸಿದರೆ ಉದ್ಯಮ-ವ್ಯಾಪಾರ ದೃಷ್ಟಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಹುಬ್ಬಳ್ಳಿ-ಚೆನ್ನೈ ನಡುವಿನ ವಿಮಾನಯಾನ ಸ್ಥಗಿತಗೊಳಿಸಲಾಗುತ್ತಿದೆ ಎನ್ನಲಾಗಿದ್ದು, ಇದನ್ನು ಸ್ಥಗಿತಗೊಳಿಸದೆ ಮುಂದುವರಿಸಬೇಕು. ಹುಬ್ಬಳ್ಳಿ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಸಾಕಷ್ಟು ಬೆಳವಣಿಗೆ ಹೊಂದುತ್ತಿದೆ. ಈ ಹಿನ್ನೆಲೆಯಲ್ಲಿ ತ್ವರಿತ ಸಂಚಾರಕ್ಕೆ ವಿಮಾನಯಾನ ಪ್ರಮುಖವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ನಾಗರಿಕ ವಿಮಾನಯಾನ ಸಚಿವರಾದ ಶ್ರೀ @RamMNK ಅವರನ್ನು ಭೇಟಿ ಮಾಡಿ ಹುಬ್ಬಳ್ಳಿಯಿಂದ ಅಹಮದಾಬಾದ್ ನಡುವೆ ವಿಮಾನ ಸಂಪರ್ಕವನ್ನು ಕಲ್ಪಿಸಲು ಮತ್ತು ಹುಬ್ಬಳ್ಳಿಯಿಂದ ಚೆನ್ನೈಗೆ ಸಂಪರ್ಕಿಸುವ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸಲಾಗುತಿದ್ದು, ವಿಮಾನ ಸಂಪರ್ಕವನ್ನು ಮುಂದುವರಿಸಲು ಮನವಿಯನ್ನು ಸಲ್ಲಿಸಿದೆನು. ಈ ಸಂದರ್ಭದಲ್ಲಿ ಶಾಸಕರಾದ… pic.twitter.com/4qTBuSIzMs
— Pralhad Joshi (@JoshiPralhad) October 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.