HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್.ಡಿ. ಕುಮಾರಸ್ವಾಮಿ
Team Udayavani, Oct 18, 2024, 12:50 AM IST
ಬೆಂಗಳೂರು: ಹಿಂದೂಸ್ಥಾನ್ ಮಶಿನ್ ಆ್ಯಂಡ್ ಟೂಲ್ಸ್ (ಎಚ್ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (ಕೆಐಒಸಿಎಲ್) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ ಸಮೇತ ರಾಜ್ಯ ಸರಕಾರದ ಜತೆ ಚರ್ಚೆಗೆ ತಯಾರಿದ್ದೇನೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದರು.
ಗುರುವಾರ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅರಣ್ಯ ಸಚಿವರು ಈ ಎರಡೂ ಸಂಸ್ಥೆಗಳ ಬಗ್ಗೆ ಸತ್ಯಕ್ಕೆ ದೂರವಾದ ವಿಷಯಗಳನ್ನು ದಿನನಿತ್ಯವೂ ಮಾಧ್ಯಮಗಳಿಗೆ ಹೇಳುತ್ತ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅರಣ್ಯ ಸಚಿವರು ಅವರ ಬಳಿ ಇರುವ ದಾಖಲೆಗಳನ್ನು ತೆಗೆದುಕೊಂಡು ಬರಲಿ. ನಾನು ಕುಳಿತುಕೊಳ್ಳುತ್ತೇನೆ. ಸಭೆಯಲ್ಲಿ ಎಲ್ಲ ಚರ್ಚೆಯಾಗಲಿ. ಸಭೆ ಯಾಕೆ ಕರೆಯಲಾಗುತ್ತಿಲ್ಲ. ಎಲ್ಲ ದಾಖಲೆ ಸಮೇತ ಚರ್ಚೆ ಮಾಡೋಣ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.