Siddaramaiah ವಾಲ್ಮೀಕಿ ಆದರ್ಶ ಪಾಲಿಸಿ ರಾಜೀನಾಮೆ ನೀಡಲಿ: ಕ್ಯಾ| ಚೌಟ
Team Udayavani, Oct 18, 2024, 1:35 AM IST
ಮಂಗಳೂರು: ವಾಲ್ಮೀಕಿ ನಿಗಮ ಹಗರಣದ ಆರೋಪಿ ಮಾಜಿ ಸಚಿವ ನಾಗೇಂದ್ರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ವಿಜಯೋತ್ಸವದ ರೀತಿಯಲ್ಲಿ ಅವರಿಗೆ ಶಾಲು ಹಾಕಿರುವುದನ್ನು ನೋಡಿದಾಗ ಹಗರಣದಲ್ಲಿ ಸಿಎಂ ಪ್ರೇರಣೆ ಇರುವಂತೆ ಭಾಸವಾಗುತ್ತಿದೆ. ಹೀಗಾಗಿ ವಾಲ್ಮೀಕಿ ದಿನಾಚರಣೆ ಪ್ರಯುಕ್ತ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ತಮ್ಮ ಮೇಲಿನ ಆರೋಪಗಳ ಪಾರದರ್ಶಕ ತನಿಖೆಗೆ ಪೂರಕವಾಗಿ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ.
ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಣವನ್ನು ತೆಲಂಗಾಣ ಸಹಿತ ವಿವಿಧ ಕ್ಷೇತ್ರದ ಚುನಾವಣೆಗೆ ಬಳಸಿದ ಬಗ್ಗೆ ಗೊತ್ತಾಗಿದೆ. ಸದ್ಯ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕವೇ ಎಟಿಎಂ ಆಗಿದ್ದು, ಈಗ ಮಹಾರಾಷ್ಟ್ರ ಚುನಾವಣೆ ನಡೆಯುವ ಕಾರಣದಿಂದ ಯಾವ ನಿಗಮದ ಕಡೆಗೆ ಸಿಎಂ ದೃಷ್ಟಿ ಇದೆಯೋ ಗೊತ್ತಿಲ್ಲ. ಮುಖ್ಯಮಂತ್ರಿಗಳು ವಾಲ್ಮೀಕಿ ಹಗರಣದ ಎ1 ಆರೋಪಿ ನಾಗೇಂದ್ರ ಅವರಿಂದ ಸಲಹೆ ಸೂಚನೆ ಪಡೆದಿರುವ ಸಾಧ್ಯತೆಗಳೂ ಇವೆ ಎಂದು ಆರೋಪಿಸಿದರು.
ವಾಲ್ಮೀಕಿ ಅವರ ಆದರ್ಶಗಳು, ತಮ್ಮ ಬದುಕಿನಲ್ಲಿ ಮಾಡಿದ ಸಾಧನೆಗಳು ಆದರ್ಶ ಆಗಬೇಕಾಗಿತ್ತು. ಆದರೆ ಕಾಂಗ್ರೆಸ್ ಪಕ್ಷ ಪರಿಶಿಷ್ಟ ಪಂಗಡದ ಅಭ್ಯುದಯಕ್ಕಾಗಿ ಮೀಸಲಿಟ್ಟ ಹಣವನ್ನು ಚುನಾವಣೆಗೆ ಬಳಸಿಕೊಂಡಿರುವುದು ರಾಷ್ಟ್ರದಲ್ಲೇ ಮೊದಲ ಬಾರಿಗೆ ನಡೆದಿರುವಾಗ ವಾಲ್ಮೀಕಿ ದಿನಾಚರಣೆಯನ್ನು ಬೇಸರದಿಂದ ಆಚರಿಸಬೇಕಾಗಿ ಬಂದಿದೆ ಎಂದರು.
ಮೇಯರ್ ಮನೋಜ್ ಕುಮಾರ್, ಪ್ರಮುಖರಾದ ಕ್ಯಾ|ಗಣೇಶ್ ಕಾರ್ಣಿಕ್, ಪ್ರೇಮಾನಂದ ಶೆಟ್ಟಿ, ಕದ್ರಿ ಮನೋಹರ್ ಶೆಟ್ಟಿ, ಯತೀಶ್ ಆರ್ವರ್, ಸಂಜಯ್ ಪ್ರಭು ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ವಾಡಿ ಬಂದ್ ನಡೆಸಿ ಪ್ರತಿಭಟನೆ
Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.