Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ದೊಣ್ಣೆಯಿಂದ ಹೊಡೆದು ಹತ್ಯೆ ; ನಿರ್ಮಾಣ ಹಂತದ ಕಟ್ಟಡದಲ್ಲಿ ವಾಸವಾಗಿದ್ದ ಪತಿ, ಪತ್ನಿ, ಪ್ರಿಯಕರ ;ಮಲಗಿದ್ದಾಗ ಕೊಲೆಗೈದು ನಾದಿನಿಗೆ ಕರೆ ಮಾಡಿದ್ದ ಹಂತಕ

Team Udayavani, Oct 18, 2024, 11:35 AM IST

4-bng-crime

ಬೆಂಗಳೂರು: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ದೊಣ್ಣೆಯಿಂದ ಹೊಡೆದು ಕೊಲೆಗೈದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರ್‌ಬಿಐ ಲೇಔಟ್‌ ನಿವಾಸಿಗಳಾದ ಕೋಲುಸು ಲಕ್ಷ್ಮೀ (33) ಹಾಗೂ ಗಣೇಶ್‌ ಕುಮಾರ್‌ (20) ಕೊಲೆಯಾದವರು. ಕೃತ್ಯ ಎಸಗಿದ ಬಳಿಕ ಲಕ್ಷ್ಮೀಯ ಪತಿ ಕೋಲುಸು ಗೊಲ್ಲಾ(41) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆಂಧ್ರಪ್ರದೇಶದ ಶ್ರೀಕಾಕುಳಂ ಮೂಲದ ಮೂವರು, ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದು, ನಾಲ್ಕೈದು ವರ್ಷಗಳಿಂದ ನಗರದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡಿಕೊಂಡಿದ್ದರು.

ಕೋಣನಕುಂಟೆಯ ಆರ್‌ಬಿಐನ ಸೋಮೇಶ್ವರ ಲೇಔಟ್‌ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಮೂವರು, ಅದೇ ಕಟ್ಟಡದ ನೆಲಮಹಡಿಯ ಒಂದೇ ಕೋಣೆಯಲ್ಲಿ ಮೂವರು ವಾಸವಾಗಿದ್ದರು. ಈ ಮಧ್ಯೆ ಕೋಲುಸು ಲಕ್ಷ್ಮೀ, ಸಹೋದ್ಯೋಗಿ ಗಣೇಶ್‌ ಕುಮಾರ್‌ ಜತೆ ಆತ್ಮೀಯವಾಗಿದ್ದಳು. ಅದರಿಂದ ಪತಿ ಕೋಲುಸು ಗೊಲ್ಲಾ ಪತ್ನಿಯ ನಡವಳಿಕೆ ಬಗ್ಗೆ ಅನುಮಾನ ಬಂದಿದ್ದು, ಇದೇ ವಿಚಾರಕ್ಕೆ ದಂಪತಿ ನಡುವೆ ಪದೇ ಪದೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದರು.

ಕೊಂದು ನಾದಿನಿಗೆ ಕರೆ ಮಾಡಿದ್ದ ಹಂತಕ: ಈ ನಡುವೆ ಪತ್ನಿಯ ನಡವಳಿಕೆ ಬಗ್ಗೆ ಇಸ್ರೋ ಲೇಔಟ್‌ ನಲ್ಲಿ ಕಟ್ಟಡ ಕಾರ್ಮಿಕರಾಗಿರುವ ನಾದಿನಿಗೆ ಕರೆ ಮಾಡಿದ ಕೋಲುಸು ಗೊಲ್ಲಾ, “ನಿನ್ನ ಸಹೋದರಿ ಬೇರೊಬ್ಬನ ಜತೆ ಆತ್ಮೀಯವಾಗಿದ್ದಾಳೆ.

ಇದು ಹೀಗೆ ಮುಂದುವರಿದರೆ, ಆಕೆಯನ್ನು ಕೊಂದು, ನಾನು ಸಾಯುತ್ತೇನೆ’ ಎಂದು ಹೇಳುತ್ತಿದ್ದ. ಆದರೆ, ಆಕೆ ಆತನ ಬೆದರಿಕೆ ಮಾತನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬುಧವಾರ ರಾತ್ರಿ ಕೂಡ ನಾದಿನಿಗೆ ಕರೆ ಮಾಡಿ, ಪತ್ನಿ ಲಕ್ಷ್ಮೀ ಹಾಗೂ ಆಕೆಯ ಪ್ರಿಯಕರ ಗಣೇಶ್‌ ಕುಮಾರ್‌ನನ್ನು ಕೊಂದು, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದಾನೆ.

ಆದರೆ, ನಾದಿನಿ, ಭಾವ ಮದ್ಯದ ಅಮಲಿನಲ್ಲಿ ಮಾತಾಡಬೇಡ. ಬೆಳಗ್ಗೆ ಮಾತಾಡೋಣ ಎಂದು ಕರೆ ಸ್ಥಗಿತಗೊಳಿಸಿದ್ದಾಳೆ. ಆದರೆ, ಮುಂಜಾನೆ 2 ಗಂಟೆಯಿಂದ 4 ಗಂಟೆ ಅವಧಿಯಲ್ಲಿ ದೊಣ್ಣೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನ ತಲೆಗೆ ಹತ್ತಾರು ಬಾರಿ ಹೊಡೆದು ಕೊಂದ ಆರೋಪಿ, ನಸುಕಿನ 5 ಗಂಟೆ ಸುಮಾರಿಗೆ ನಾದಿನಿಗೆ ಕರೆ ಮಾಡಿ, ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕೊಂದಿದ್ದೇನೆ ಎಂದು ಹೇಳಿದ್ದಾನೆ.

ಆಗಲೂ ಆಕೆ ಕರೆ ಸ್ಥಗಿತಗೊಳಿಸಿದ್ದಾಳೆ. ಬಳಿಕ ಅದೇ ಕಟ್ಟಡದ 3ನೇ ಮಹಡಿಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಗಾರೆ ಕೆಲಸದ ಮೇಸ್ತ್ರಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಪತಿಯೇ ಪತ್ನಿ ಮತ್ತು ಆಕೆಯ ಸ್ನೇಹಿತನನ್ನು ದೊಣ್ಣೆಯಿಂದ ಹೊಡೆದು ಕೊಲೆಗೈದು, ಬಳಿಕ ಆತನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆಯ ಆರ್‌ಬಿಐ ಲೇಔಟ್‌ ಸಮೀಪ ದಲ್ಲಿ ನಡೆದಿದೆ. ಈ ಸಂಬಂಧ ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ. ●ಲೋಕೇಶ್‌ ಬಿ.ಜಗಲಸಾರ, ಡಿಸಿಪಿ, ದಕ್ಷಿಣ ವಿಭಾಗ

ಏನಿದು ಘಟನೆ?

 ನಿರ್ಮಾಣ ಹಂತದ ಕಟ್ಟಡದಲ್ಲಿ ಪತಿ, ಪತ್ನಿ, ಪ್ರಿಯಕರ ವಾಸ

 ಪ್ರಿಯಕರನೊಂದಿಗೆ ಪತ್ನಿಯ ಅನೈತಿಕ ಸಂಬಂಧದಿಂದ ಜಗಳ

 ಈ ಬಗ್ಗೆ ಪತ್ನಿಯ ಸಹೋದರಿಗೆ ಎಚ್ಚರಿಕೆ ನೀಡಿದ್ದ ಪತಿ

 ಆದರೂ ನಿರ್ಲಕ್ಷಿಸಿದ್ದಕ್ಕೆ ಕೊಲೆ ಮಾಡಲು ಪತಿ ಸಂಚು

 ನಸುಕಿನಲ್ಲಿ ಮಲಗಿದ್ದಾಗ ಪತ್ನಿ, ಪ್ರಿಯಕರನ ಹತ್ಯೆ

 ಬಳಿಕ ಅದೇ ಕಟ್ಟಡದಲ್ಲಿ ಪತಿ ನೇಣಿಗೆ ಶರಣು

 ಆರ್‌ಬಿಐ ಲೇಔಟ್‌ ನಲ್ಲಿ ಘಟನೆ

 ಮೇಸ್ತ್ರೀ ಸ್ಥಳಕ್ಕೆ ಬಂದಾಗ ಕೃತ್ಯ ಬಯಲು

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.