BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
Team Udayavani, Oct 18, 2024, 12:10 PM IST
ಹುಬ್ಬಳ್ಳಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಸಂಸದ ಬಸವರಾಜ ಬೊಮ್ಮಾಯಿಯವರ ಪುತ್ರ ಭರತ ಬೊಮ್ಮಾಯಿಗೆ ಟಿಕೆಟ್ ನೀಡಬೇಕೆಂಬುದು ಅಲ್ಲಿನ ಜನತೆ ಅನಿಸಿಕೆಯಾಗಿದ್ದು, ಪಕ್ಷದ ಹೈಕಮಂಡ್ ತೀರ್ಮಾನವೇ ಅಂತಿಮ. ಚನ್ನಪಟ್ಟಣಕ್ಕೆ ಸಿ.ಪಿ.ಯೋಗೀಶ್ವರ ಅವರು ಎನ್ ಡಿಎ ಅಭ್ಯರ್ಥಿಯಾದರೆ ಗೆಲುವು ಸಾಧ್ಯ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ( Arvind Bellad) ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದು, ಅವರ ಕುಟುಂಬದವರು ಸ್ಪರ್ಧೆ ಮಾಡಿದರೆ ಸೂಕ್ತ ಎಂಬುದು ಅಲ್ಲಿನ ಮತದಾರರ ಅನಿಸಿಕೆಯಾಗಿದೆ. ಬಸವರಾಜ ಬೊಮ್ಮಯಿ ಅವರಿಗೆ ಪುತ್ರನಿಗೆ ಟಿಕೆಟ್ ದೊರಕಿಸಲು ಅಸಕ್ತಿ ಇಲ್ಲ ಆದರೆ ಜನರ ಅಭಿಪ್ರಾಯವಾಗಿದೆ ಎಂದರು.
ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೀಶ್ವರ್ ಅವರು ಎನ್ ಡಿಎ ಅಭ್ಯರ್ಥಿಯಾದರೆ ಗೆಲುವು ಸಾಧ್ಯವಾಗಲಿದೆ ಎಂಬ ಅನಿಸಿಕೆ ನಮ್ಮದಾಗಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇದಕ್ಕೆ ಒಪ್ಪಬೇಕಿದೆ. ಯೋಗೀಶ್ವರ ಅಭ್ಯರ್ಥಿಯಾಗದಿದ್ದರೆ ಅಲ್ಲಿನ ಗೆಲುವು ಸಮಸ್ಯೆಯಾಗಲಿದೆ ಎಂದರು.
ಕಾಂಗ್ರೆಸ್ ಸರ್ಕಾರ ಕರ್ನಾಟವನ್ನು ಬಿಹಾರ, ಪಂಜಾಬ್ ಮಾಡಲು ಹೊರಟಿದೆ. ಮತ ಬ್ಯಾಂಕ್ ರಾಜಕಾರಕ್ಕೆ ರಾಜ್ಯದ ಹಿತ ಬಲಿಕೊಡುತ್ತಿದೆ ಎಂದ ಬೆಲ್ಲದ್, ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆಯುವ ನಿರ್ಧಾರ ಖಂಡಿಸಿ ಅ.25 ರಂದು ಪಕ್ಷದಿಂದ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಮಂಡಲ ಉಭಯ ಸದನಗಳ ವಿಪಕ್ಷ ನಾಯಕರಾದ ಆರ್.ಅಶೋಕ, ಚಲವಾದಿ ನಾರಾಯಣಸ್ವಾಮಿ , ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇನ್ನಿತರ ನಾಯಕರು ಪಾಲ್ಗೊಳ್ಳಲಿದ್ದು, ಸುಮಾರು 20-25 ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ. ಮುಡಾ, ವಾಲ್ಮೀಕಿ ನಿಗಮ ಹಗರಣದ ಹೋರಾಟ ಮುಂದುವರೆಯಲಿದೆ ಎಂದರು.
ತಪ್ಪಾಗಿದ್ದರೆ ಕ್ರಮ
ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ದೊರಕಿಸಲು ಹಣ ನೀಡಿದ ಬಗ್ಗೆ ಕೇಂದ್ರ ಸಚಿವ ಜೋಶಿ ಸಹೋದರನ ವಿರುದ್ದ ದೂರು ದಾಖಲು ಆಗಿದೆ. ಪಕ್ಷಕ್ಕೆ ಇದು ಸಂಬಂಧವಿಲ್ಲ. ಜೋಶಿಯವರಿಗೂ ಅವರ ಸಹೋದರನಿಗೆ ರಾಜಕೀಯವಾಗಿ ಯಾವುದೇ ಸಂಪರ್ಕ ಇಲ್ಲವಾಗಿದೆ. ತಪ್ಪಾಗಿದ್ದರೆ, ಜೋಶಿ ಅವರ ಸಹೋದರನ ವಿರುದ್ದ ಕ್ರಮ ಕೈಗೊಳ್ಳಲಿ ಎಂದರು.
ಗಲಭೆ ಪ್ರಕರಣ ವಾಪಸ್: ಅ. 25ಕ್ಕೆ ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಅ. 25ರಂದು ಹುಬ್ಬಳ್ಳಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ನಿರ್ಧರಿಸಲಾಗಿದೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹಿತ 25 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.