Bengaluru: ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ

ನಗರದ ಬಿಎಂಎಸ್‌, ಬಿಐಟಿ ಕಾಲೇಜುಗಳಿಗೆ ಇ-ಮೇಲ್‌ ಕಳುಹಿಸಿದ್ದ ಆರೋಪಿ

Team Udayavani, Oct 19, 2024, 3:31 PM IST

17-bng

ಬೆಂಗಳೂರು: ಕಾಲೇಜಿನ ಆವರಣದಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್‌ ಕಳುಹಿಸಿದ್ದ ಆರೋಪಿಯನ್ನು ವಿ.ವಿ.ಪುರ ಠಾಣಾ ಪೊಲೀಸರು ಪಶ್ಚಿಮ ಬಂಗಾಳದದಲ್ಲಿ ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ಜಿಲ್ಲೆಯ ನಿವಾಸಿ ದೀಪಾಂಜನ್‌ ಮಿತ್ರಾ (48) ಬಂಧಿತ. ಆರೋಪಿ. ಈತನಿಂದ 1 ಲ್ಯಾಪ್‌ಟಾಪ್‌, 1 ಮೊಬೈಲ್‌ ಜಪ್ತಿ ಮಾಡಲಾಗಿದೆ.

ಆರೋಪಿ ಮಿತ್ರಾ ಕಾಲೇಜಿನ ಆವರಣದಲ್ಲಿ ಹೈಡ್ರೋ ಜನ್‌ ಆಧಾರಿತ ಸುಧಾರಿತ ಐಇಡಿ ಇಟ್ಟಿರುವುದಾಗಿ ಅ.4ರಂದು ಬೆಂಗಳೂರು ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಬಿಐಟಿ) ಹಾಗೂ ಹನುಮಂತನಗರ ಠಾಣಾ ವ್ಯಾಪ್ತಿಯಲ್ಲಿರುವ ಬಿಎಂಎಸ್‌ ಕಾಲೇಜುಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ ಕಳಿಸಿದ್ದ. ಆಯಾ ಕಾಲೇಜಿನ ಪ್ರಾಂಶುಪಾಲರು ಈ ಬಗ್ಗೆ ಹನುಮಂತನಗರ ಹಾಗೂ ವಿ.ವಿ.ಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತಾಂತ್ರಿಕ ಕಾರ್ಯಾಚರಣೆ ಮೂಲಕ ಇ-ಮೇಲ್‌ ಸಂದೇಶ ಕಳುಹಿಸಿದ ಸ್ಥಳ ಹಾಗೂ ವ್ಯಕ್ತಿಗಳ ವಿವರ ಕಲೆ ಹಾಕಿ ದ್ದರು. ಆ ವೇಳೆ ಆರೋಪಿಯು ಪಶ್ಚಿಮ ಬಂಗಾಳದಲ್ಲಿರುವುದು ಪತ್ತೆಯಾಗಿತ್ತು. ಅ.17ರಂದು ಡಾರ್ಜಿಲಿಂಗ್‌ ಜಿಲ್ಲೆಯ ಸಾಲ್ಬರಿ ಟೌನ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಗೆ ಜಾಮೀನು ನೀಡಿದ ಕೋರ್ಟ್‌: ಇನ್ನು ಆರೋಪಿಯನ್ನು ಪಶ್ಚಿಮ ಬಂಗಾಳದ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಟ್ರಾನ್ಸಿಟ್‌ ವಾರೆಂಟ್‌ ಗೆ ಕೋರಿದ್ದು, ನ್ಯಾಯಾಲಯವು ಆರೋಪಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಹೀಗಾಗಿ ಬಂಧಿತನನ್ನು ಬೆಂಗಳೂರಿಗೆ ಕರೆತರಲು ಅಲ್ಲಿನ ಸ್ಥಳೀಯ ನ್ಯಾಯಾಲಯದಿಂದ ಟ್ರಾನ್ಸಿಟ್‌ ವಾರೆಂಟ್‌ ಸಿಗದ ಕಾರಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.

ಆರೋಪಿ ವಿರುದ್ದ 10 ಬಾಂಬ್‌ ಬೆದರಿಕೆ ಕೇಸ್‌ ಪೊಲೀಸರು ಪ್ರಾಥಮಿಕ ವಿಚಾರಣೆಗೊಳಪಡಿಸಿ ದಾಗ ಆರೋಪಿ ದೀಪಾಂಜನ್‌ ಮಿತ್ರಾ ಇದೇ ಮಾದರಿಯ 10 ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಬೆಂಗಳೂರು ನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ಬಾಂಬ್‌ ಗಳನ್ನು ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್‌ ಕಳುಹಿಸಿರುವ ಸಂಬಂಧ ಬೇರೆ ಬೇರೆ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿಯೂ ಈ ಆರೋಪಿಯ ಪಾತ್ರದ ಬಗ್ಗೆ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿ.ಕಾಂ. ವ್ಯಾಸಂಗ ಮಾಡಿರುವ ಈತನ ವಿರುದ್ಧ ಪ.ಬಂಗಾಳದ ವಿವಿಧೆಡೆ ಇದೇ ರೀತಿಯ 10 ಪ್ರಕರಣಗಳು ದಾಖಲಾಗಿವೆ

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.