Rain Alert: ರಾಜ್ಯದ 13 ಜಿಲ್ಲೆಗಳಲ್ಲಿ ಅ.21ರವರೆಗೆ ಭಾರೀ ಮಳೆ?
ಇನ್ನೆರಡು ದಿನ ಹಳದಿ ಅಲರ್ಟ್ ಘೋಷಣೆ, ಬೆಂಗಳೂರಿನಲ್ಲಿ 3 ದಿನ ವರುಣನ ಅಬ್ಬರ ಸಾಧ್ಯತೆ
Team Udayavani, Oct 19, 2024, 10:59 PM IST
ಬೆಂಗಳೂರು: ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು ಭಾನುವಾರ ಉಡುಪಿ, ಉತ್ತರ ಕನ್ನಡ ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಸಿಯರ್‌ಝೋನ್ ಇದೆ. ಇದರ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನಲ್ಲಿ ಅ.22ರ ವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಅ.22ರ ವರೆಗೆ ಮಳೆಯಾಗಲಿದೆ.
ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಲಕ್ಷಣ ಗೋಚರಿಸಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಅ.21ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಅ.21ರ ವರೆಗೆ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಇನ್ನು ಕರ್ನಾಟಕದ ಕರಾವಳಿಯಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 55 ಕಿ.ಮೀ ಇರಲಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಇಂದು ಬೆಂಗಳೂರಿನಲ್ಲಿ ಮಳೆ:
ರವಿವಾರ (ಅ.20) ಬೆಂಗಳೂರಿನಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
#ಮಳೆ #ಮುನ್ಸೂಚನೆ: ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು, ಮಲೆನಾಡು & ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಭಾರಿ & ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. @Karnatakavarthe #KSNDMC pic.twitter.com/cP53c6udbR
— Karnataka State Natural Disaster Monitoring Centre (@KarnatakaSNDMC) October 19, 2024
ಏನಿದು ಸಿಯರ್‌ಝೋನ್ ?
ಸಿಯರ್‌ಝೋನ್ ಎಂದರೆ ತೇವಾಂಶ ಆಗಸದತ್ತ ತೆಗೆದುಕೊಂಡು ಹೋಗುವ ಪ್ರಕ್ರಿಯೆಯಾಗಿದೆ. ತೇವಾಂಶಗಳಿಂದ ಮೋಡಗಳು ಸೃಷ್ಟಿಯಾಗಿ ಮೋಡಗಳಿಂದ ಮಳೆ ಸುರಿಯುತ್ತವೆ. ಇದು ಹವಾಮಾನದಲ್ಲಿ ನಡೆಯುವ ಒಂದು ಮಾದರಿಯ ಸಾಮಾನ್ಯ ಪ್ರಕ್ರಿಯೆಯಾಗಿದೆ. ಇದನ್ನು ಮೇಲ್ಮೆ ಸುಳಿಗಾಳಿ ಎಂದೂ ಕರೆಯಲಾಗುತ್ತದೆ. ಈ ಪ್ರಕ್ರಿಯೆ ಎಲ್ಲ ಪ್ರದೇಶಗಳಲ್ಲೂ ಸಾಮಾನ್ಯವಾಗಿ ನಡೆಯುತ್ತದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.