Delegation appeal; ಒಳಮೀಸಲಾತಿ ಜಾರಿ ತನಕ ನೇಮಕಾತಿ ಬೇಡ
ಸಿದ್ದರಾಮಯ್ಯರಿಗೆ ಪ.ಜಾತಿ ಎಡಗೈ ಸಮುದಾಯದ ನಿಯೋಗ ಮನವಿ
Team Udayavani, Oct 20, 2024, 12:08 AM IST
ಬೆಂಗಳೂರು: ಒಳಮೀಸಲಾತಿ ಜಾರಿ ಮಾಡಲೇ ಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿರುವ ಪರಿಶಿಷ್ಟ ಜಾತಿ ಎಡಗೈ ಸಮುದಾಯದ ಮುಖಂಡರು, ಒಳಮೀಸಲಾತಿ ಜಾರಿ ಮಾಡುವವರೆಗೆ ನೇಮಕಾತಿ ಪ್ರಕ್ರಿಯೆಗಳನ್ನು ಮುಂದೂಡುವಂತೆ ಆಗ್ರಹಿಸಿದ್ದಾರೆ.
ಶನಿವಾರ ಗೃಹಕಚೇರಿ ಕೃಷ್ಣಾದಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ, ಆರ್.ಬಿ. ತಿಮ್ಮಾಪುರ ನೇತೃತ್ವದ ನಿಯೋಗವು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಸುಮಾರು 2 ಗಂಟೆಗಳ ಸುದೀರ್ಘ ಸಮಾಲೋಚನೆ ನಡೆಸಿತು.
ಸಭೆಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ, ಶಿವಣ್ಣ, ರಾಜ್ಯಸಭೆ ಮಾಜಿ ಸದಸ್ಯ ಎಲ್. ಹನುಮಂತಯ್ಯ, ಶಾಸಕ ಬಸಂತಪ್ಪ, ಶ್ರೀನಿವಾಸ್, ಮಾಜಿ ಶಾಸಕ ಧರ್ಮಸೇನ, ಡಾ|ತಿಮ್ಮಯ್ಯ ಅವರೂ ವಿಷಯದ ಬೆಳಕು ಚೆಲ್ಲಿದರಲ್ಲದೆ, ಒಳಮೀಸಲಾತಿ ವಿಚಾರದಲ್ಲಿ ರಾಜಕೀಯ ಬದ್ಧತೆ ಮತ್ತು ಇಚ್ಛಾಶಕ್ತಿ ಪ್ರದರ್ಶಿಸಲು ಇದು ಸಕಾಲ ಎಂದೂ ಗಮನ ಸೆಳೆದಿದ್ದಾರೆ.
ನೀತಿ ಸಂಹಿತೆ ಅಡ್ಡಿ ಆಗಲಾರದು
ಸಚಿವ ಮುನಿಯಪ್ಪ ಹಾಗೂ ತಿಮ್ಮಾಪುರ ಮಾತನಾಡಿ, ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಒಳಮೀಸಲಾತಿ ವಿಚಾರವನ್ನು ಸಂಪುಟ ದಲ್ಲಿ ಮಂಡಿಸಲು ನೀತಿ ಸಂಹಿತೆ ಅಡ್ಡಿಯಾಗಲಾರದು ಎಂದು ಭಾವಿಸಿದ್ದೇವೆ. ಈಗಾಗಲೇ ಸದಾಶಿವ ಆಯೋಗದ ವರದಿ, ಸುಪ್ರೀಂ
ಕೋರ್ಟ್ ಆದೇಶ ನೀಡಿರುವುದರಿಂದ ಇದು ಹಳೆಯ ವಿಚಾರ. ಹೀಗಾಗಿ ಸಂಪುಟದಲ್ಲಿ ಮಂಡಿಸಬಹುದು. ಆದರೂ ಒಮ್ಮೆ ಚುನಾವಣ ಆಯೋಗದೊಂದಿಗೆ ಸಮನ್ವಯ ಸಾಧಿಸುವುದು ಒಳಿತು ಎಂದು ಸಲಹೆ ನೀಡಿದರಲ್ಲದೆ, ತೆಲಂಗಾಣದಲ್ಲೂ ಕಾಂಗ್ರೆಸ್ ಸರಕಾರವೇ ಅಧಿಕಾರ ದಲ್ಲಿದ್ದು, ಅಲ್ಲಿನ ಸರಕಾರ ಎಲ್ಲ ನೇಮಕಾತಿಗಳನ್ನೂ ನಿಲ್ಲಿಸಿದೆ. 2 ತಿಂಗಳಲ್ಲಿ ಒಳಮೀಸಲಾತಿ ಜಾರಿ ಗೊಳಿಸುವುದಾಗಿ ಭರವಸೆ ನೀಡಿದೆಯಲ್ಲದೆ, ಅನಂತರವಷ್ಟೇ ನೇಮಕಾತಿ ಪ್ರಕ್ರಿಯೆ ಮುಂದುವರಿಸುವುದಾಗಿ ಹೇಳಿದೆ. ಹರಿಯಾಣದಲ್ಲಿ ಒಳಮೀಸಲಾತಿ ಜಾರಿಯಾಗಿದೆ. ಹೀಗಾಗಿ ಕರ್ನಾಟಕದಲ್ಲೂ ಒಳಮೀಸಲಾತಿ ಜಾರಿಗೊಳಿಸಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸಭೆಯಲ್ಲಿದ್ದ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.