Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್, ರಾಣೆ ಸೇರಿ ಹಲವರಿಗೆ ಟಿಕೆಟ್
Team Udayavani, Oct 20, 2024, 4:03 PM IST
ಮುಂಬೈ: ಈಗಾಗಲೇ ಘೋಷಣೆಯಾಗಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ (Maharashtra Assembly Election) ಭಾರತೀಯ ಜನತಾ ಪಕ್ಷವು (BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ರವಿವಾರ (ಅ.20) ಮಧ್ಯಾಹ್ನ ಪ್ರಕಟಿಸಲಾದ ಪಟ್ಟಿಯಲ್ಲಿ 99 ಹೆಸರುಗಳಿವೆ. ಮಹಾರಾಷ್ಟ್ರ ವಿಧಾನಸಭೆ 288 ಸ್ಥಾನಗಳನ್ನು ಹೊಂದಿದ್ದು, ಬಿಜೆಪಿ 151 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.
ಮೊದಲ ಪಟ್ಟಿಯಲ್ಲಿ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಫಡ್ನವೀಸ್ ಅವರಿಗೆ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಟಿಕೆಟ್ ದೊರೆತರೆ, ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾನ್ಕುಲೆ ಅವರು ಕಮ್ತಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಘಾಟ್‌ಕೋಪರ್ ಪಶ್ಚಿಮದಿಂದ ರಾಮ್ ಕದಮ್, ಚಿಕ್ಲಿಯಿಂದ ಶ್ವೇತಾ ಮಹಾಲೆ ಪಾಟೀಲ್, ಭೋಕರ್ ನಿಂದ ಶ್ರೀಜಯ ಅಶೋಕ್ ಚವಾಣ್ ಮತ್ತು ಕಂಕಾವ್ಲಿಯಿಂದ ನಿತೀಶ್ ರಾಣೆ ಪಟ್ಟಿಯಲ್ಲಿ ಹೆಸರಿಸಲಾದ ಇತರ ಪ್ರಮುಖ ನಾಯಕರು. ಶ್ರೀಜಯಾ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಪುತ್ರಿಯಾಗಿದ್ದು, ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.
BJP releases first list of 99 candidates for Maharashtra assembly polls, fields Deputy Chief Minister Devendra Fadnavis from Nagpur South West. (n/1)#MaharashtraAssemblyElections2024 pic.twitter.com/PrMMrw5ir7
— Press Trust of India (@PTI_News) October 20, 2024
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.
ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ.
2019 ರ ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯಲ್ಲಿ, ಬಿಜೆಪಿ ಮತ್ತು ಶಿವಸೇನೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಡಿಯಲ್ಲಿ ಮಿತ್ರಪಕ್ಷಗಳಾಗಿ ಸ್ಪರ್ಧಿಸಿದರೆ, ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಭಾಗವಾಗಿ ಸ್ಪರ್ಧಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.