Jagadish Shettar: ಕಾಂಗ್ರೆಸ್‌ನವರಿಂದಲೇ ಸಿಎಂ ಕೆಳಗಿಳಿಸಲು ಯತ್ನ
Team Udayavani, Oct 20, 2024, 6:33 PM IST
ಲಕ್ಷ್ಮೇಶ್ವರ: ಹಗರಣಗಳ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಂಡಿದ್ದರೆ ಅವರನ್ನು ಕೆಳಗಿಳಿಸಲು ಅವರ ಪಕ್ಷದವರೇ ಸನ್ನದ್ಧರಾಗಿದ್ದಾರೆ. ಯಾವುದೇ ಸಮಯದಲ್ಲಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುತ್ತಾರೆ ಎಂದು ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಕೊರತೆಯಿಂದ ದೇಶದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಡೋಲಾಯಮಾನವಾಗಿದೆ. ಕರ್ನಾಟಕದಲ್ಲಿ ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣಗಳ ಬಗ್ಗೆ ಲೋಕಾಯುಕ್ತ, ಇಡಿ ತನಿಖೆ ನಡೆಯುತ್ತಿದೆ. ಆದರೆ ಲೋಕಾಯುಕ್ತ ಸರ್ಕಾರದ ಅ ಧೀನದಲ್ಲಿರುವುದರಿಂದ, ಸಿಎಂ ಅ ಧಿಕಾರದಲ್ಲಿ ಇರುವುದರಿಂದ ಸರಿಯಾದ ತನಿಖೆ ಆಗಲ್ಲ. ಅದಕ್ಕಾಗಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಿ ನಿರಪರಾಧಿ ಎಂದು ಸಾಬೀತಾದ ಬಳಿಕ ಮತ್ತೆ ಮುಖ್ಯಮಂತ್ರಿಯಾಗಲಿ ಎಂದರು.
ಹಗರಣಗಳ ಸರಮಾಲೆ ಹೊರಬೀಳುತ್ತಲೇ ಬಿಜೆಪಿಯಿಂದ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದೇವೆ. ಆದರೆ ಕಾಂಗ್ರೆಸ್‌ನವರು ಸಿಎಂಗೆ ಬೆಂಬಲ ಸೂಚಿಸುವುದಾಗಿ ಹೇಳಿಕೆ ನೀಡುತ್ತ ಒಳಗೊಳಗೆ ಸಿಎಂ ಆಗಲು ಕನಸು ಕಾಣುತ್ತಿದ್ದಾರೆ ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕುಟುಂಬದ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಈಗಾಗಲೇ ಅವರು ಸ್ಪಷ್ಟನೆ ನೀಡಿದ್ದಾರೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬೀಳಲಿದೆ ಎಂದರು.
ಮಾಜಿ ಶಾಸಕ ರಾಮಣ್ಣ ಲಮಾಣಿ ಮತ್ತೆ ಬಿಜೆಪಿ ಸೇರ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಮಣ್ಣ ನನ್ನೊಂದಿಗೆ ಅನೇಕ ವರ್ಷಗಳಿಂದ ಉತ್ತಮ ಬಾಂಧವ್ಯ ಹೊಂದಿದ್ದಾರೆ. ನಾನು ಬಂದಿರುವ ವಿಷಯ ತಿಳಿದು ಸ್ವಾಗತಿಸಿದ್ದಾರೆ. ಪಕ್ಷ ಸೇರ್ಪಡೆ ವಿಚಾರ ಅವರಿಗೆ ಬಿಟ್ಟಿದ್ದು. ಈ ಬಗ್ಗೆ ನಾವು ಅವರನ್ನು ಕರೆದಿಲ್ಲ, ಅವರೂ ಈ ಬಗ್ಗೆ ಚರ್ಚೆಯನ್ನೂ ನಡೆಸಿಲ್ಲ. ಮುಂದಿನ ದಿನಗಳಲ್ಲಿ ನೋಡೋಣ ಎಂದರು.
ಶಾಸಕ ಡಾ| ಚಂದ್ರು ಲಮಾಣಿ, ಮುಖಂಡರಾದ ಎಂ.ಎಸ್. ದೊಡ್ಡಗೌಡ್ರ, ಸುನೀಲ ಮಹಾಂತಶೆಟ್ಟರ, ನಿಂಬಣ್ಣ ಮಡಿವಾಳರ, ನವೀನ ಬೆಳ್ಳಟ್ಟಿ, ದುಂಡೇಶ ಕೊಟಗಿ, ಗಂಗಾಧರ ಮೆಣಸಿನಕಾಯಿ, ವಿಜಯ ಕುಂಬಾರ, ಪ್ರವೀಣ ಬೋಮಲೆ ಇತರರಿದ್ದರು.
“ಕೈ’ ಬಿಡಲ್ಲ: ರಾಮಣ್ಣ
ಈ ನಡುವೆ ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಜಗದೀಶ ಶೆಟ್ಟರ ಅವರನ್ನು ಸ್ವಾಗತಿಸಿದ ಫೋಟೋ ಮಾತ್ರ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.