Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

ಧಾರ್ಮಿಕ ಕೇಂದ್ರ, ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕೇಂದ್ರಕ್ಕೆ ಪ್ರಸ್ತಾವನೆ

Team Udayavani, Oct 21, 2024, 7:50 AM IST

Paduvari-Someshwara-beach

ಬೆಂಗಳೂರು: ಕೊಲ್ಲೂರಿನ ಪಡುವರಿ ಸೋಮೇಶ್ವರ, ಗೋಕರ್ಣ, ಸವದತ್ತಿ ಯಲ್ಲಮ್ಮ ದೇಗುಲ, ರೋರಿಚ್‌ ಎಸ್ಟೇಟ್‌ ಸೇರಿದಂತೆ ರಾಜ್ಯದ 7 ಧಾರ್ಮಿಕ ಸ್ಥಳ ಹಾಗೂ ಪ್ರವಾಸಿ ತಾಣಗಳನ್ನು ಜಾಗತಿಕ ಮಟ್ಟಕ್ಕೆ ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಮುಂದಾಗಿದ್ದು ಈ ಸಂಬಂಧ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ದೇಶದಲ್ಲಿನ ಸಾಂಪ್ರದಾಯಿಕ ಮತ್ತು ಪಾರಂಪರಿಕ ಧಾರ್ಮಿಕ ಸ್ಥಳ ಹಾಗೂ ಪ್ರವಾಸಿಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಅವುಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿಯ ರಾಜ್ಯಗಳಿಗೆ ಬಂಡವಾಳ ಹೂಡಿಕೆಗೆ ವಿಶೇಷ ನೆರವು (ಎಸ್‌ಎಎಸ್‌ಸಿಐ) ಯೋಜನೆಯಡಿ ರಾಜ್ಯದಲ್ಲಿ ಆಯ್ದ ಧಾರ್ಮಿಕ ಸ್ಥಳಗಳು ಹಾಗೂ ಪ್ರವಾಸಿ ಯಾತ್ರಾ ತಾಣಗಳು ಸೇರಿ ಒಟ್ಟು ಏಳು ಸ್ಥಳಗಳನ್ನು ಆಯ್ಕೆ ಮಾಡಿ ಒಟ್ಟು 664 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಕಳೆದ ವಾರ ಕೇಂದ್ರ ಪ್ರವಾಸೋದ್ಯಮ ಸಚಿವಾಲಯಕ್ಕೆ ಕಳುಹಿಸಿಕೊಟ್ಟಿದೆ.

ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಮಾರ್ಗಸೂಚಿಯಂತೆ ಸಂಬಂಧಪಟ್ಟ ಧಾರ್ಮಿಕ ಸ್ಥಳ ಹಾಗೂ ಪ್ರವಾಸಿ ತಾಣಗಳ ಬಗ್ಗೆ ಆಯಾ ಜಿಲ್ಲಾಡಳಿತದಿಂದ ಸಮಗ್ರ ಯೋಜನಾ ವರದಿ ತರಿಸಿಕೊಂಡು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಕೇಂದ್ರ ಸರಕಾರದ ಹಂತದಲ್ಲಿನ ಎಲ್ಲ ಪ್ರಕ್ರಿಯೆ ಮುಗಿದು ರಾಜ್ಯ ಸರಕಾರದ ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕರೆ ಮುಂದಿನ ಪ್ರಕ್ರಿಯೆಗಳು ಆರಂಭವಾಗಲಿದೆ. ಒಂದೊಂದು ಸ್ಥಳದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಕಾಲಮಿತಿ ಸಹ ಹಾಕಿಕೊಳ್ಳಲಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಭಿವೃದ್ಧಿಗೆ ಬೇಕಾದ ಮೊತ್ತ
ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಬೆಂಗಳೂರಿನ ತಾತಾಗುಣಿಯ ರೋರಿಚ್‌ ಆ್ಯಂಡ್‌ ದೇವಿಕಾರಾಣಿ ಎಸ್ಟೇಟ್‌ನಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಕಲ್ಚರಲ್‌ ಹಬ್‌ ಸ್ಥಾಪನೆಗೆ 99.88 ಕೋಟಿ ರೂ., ಸವದತ್ತಿ ಯಲ್ಲಮ್ಮ ಗುಡ್ಡದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ 100 ಕೋಟಿ ರೂ., ಕೊಲ್ಲೂರಿನ ಪಡುವರಿ ಸೋಮೇಶ್ವರದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮ ಅಭಿವೃದ್ಧಿಗೆ 99.95 ಕೋಟಿ ರೂ., ಲಕ್ಕುಂಡಿ ತಾಣದ ಅಭಿವೃದ್ಧಿಗೆ 57.16 ಕೋಟಿ ರೂ., ಐಹೊಳೆಯನ್ನು ಜಾಗತಿಕ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು 109 ಕೋಟಿ ರೂ., ಕರಕುಶಲ ಅಭಿವೃದ್ಧಿ ನಿಗಮದಿಂದ ಬೆಂಗಳೂರಿನಲ್ಲಿ ಅಮೃತ್‌ ಭಾರತ್‌ ಮೆಗಾ ಆರ್ಟ್‌ ಆ್ಯಂಡ್‌ ಹೆರಿಟೇಜ್‌ ಪಾರ್ಕ್‌ ನಿರ್ಮಾಣಕ್ಕೆ 100 ಕೋಟಿ ರೂ., ಗೋಕರ್ಣದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮ ಅಭಿವೃದ್ಧಿಗೆ 99.29 ಕೋಟಿ ರೂ, ವೆಚ್ಚಗಳ ಪ್ರಸ್ತಾವನೆಗಳನ್ನು ಕೇಂದ್ರದ ಎಸ್‌ಎಎಸ್‌ಸಿಐ ಯೋಜನೆಯಡಿ ಕಳಹಿಸಿಕೊಡಲಾಗಿದೆ.

ಸಾಲ ರೂಪದ ನೆರವು
ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ಯಾತ್ರಾ ತಾಣಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಅವುಗಳನ್ನು ಜಾಗತಿಕ ಮಟ್ಟಕ್ಕೆ ಮಾರ್ಕೆಟಿಂಗ್‌ ಹಾಗೂ ಬ್ರಾಂಡಿಂಗ್‌ ಮಾಡಲು 50 ವರ್ಷಗಳ ದೀರ್ಘಾವಧಿಗೆ ಬಡ್ಡಿ ರಹಿತ ಸಾಲದ ರೂಪದಲ್ಲಿ ಕೇಂದ್ರ ಸರಕಾರ ರಾಜ್ಯಗಳಿಗೆ ಆರ್ಥಿಕ ನೆರವು ನೀಡುತ್ತದೆ. ಪ್ರವಾಸೋದ್ಯಮ ಯೋಜನೆಗಳನ್ನು ಸುಸ್ಥಿರವಾಗಿ ಅಭಿವೃದ್ಧಿಪಡಿಸಿ ಅದರ ಮೂಲಕ ಸ್ಥಳೀಯ ಆರ್ಥಿಕತೆಯ ಬೆಳವಣಿಗೆ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಮೊದಲು ಬಂದವರಿಗೆ ಆದ್ಯತೆ
“ಫ‌ಸ್ಟ್‌ ಕಮ್‌ ಫ‌ಸ್ಟ್‌ ಸರ್ವ್‌’ ಸೂತ್ರದಂತೆ ಮೊದಲು ಬಂದವರಿಗೆ ಮೊದಲ ಆದ್ಯತೆಯನ್ನು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ನೀಡಲಿದೆ. ಒಂದು ರಾಜ್ಯ ಗರಿಷ್ಠ 3 ಯೋಜನೆಗಳನ್ನು ಸಲ್ಲಿಸಬಹುದು. 2024-25ರಲ್ಲಿ ಕೇಂದ್ರ ಸರಕಾರ ಈ ಯೋಜನೆಗೆ 2 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಒಂದು ರಾಜ್ಯ ಒಂದು ಯೋಜನೆಗೆ ಗರಿಷ್ಠ 100 ಕೋಟಿ ರೂ. ಅನುದಾನ ಪಡೆದುಕೊಳ್ಳಬಹುದು. ಒಂದು ರಾಜ್ಯ ಗರಿಷ್ಠ 250 ಕೋಟಿ ರೂ. ಅನುದಾನ ಪಡೆದುಕೊಳ್ಳುವ ಅರ್ಹತೆ ಹೊಂದಿರುತ್ತದೆ. ಈ ಯೋಜನೆಯನ್ನು ಕೇಂದ್ರ ಸರಕಾರ 2022-23ರಲ್ಲಿ ಜಾರಿಗೆ ತಂದಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಯಾವ್ಯಾವ ತಾಣ ಅಭಿವೃದ್ಧಿ?
ಬೆಂಗಳೂರಿನ ರೋರಿಚ್‌ ಆ್ಯಂಡ್‌ ದೇವಿಕಾರಾಣಿ ಎಸ್ಟೇಟ್‌, ಸವದತ್ತಿ ಯಲ್ಲಮ್ಮ ಗುಡ್ಡ, ಕೊಲ್ಲೂರಿನ ಪಡುವರಿ ಸೋಮೇಶ್ವರ, ಲಕ್ಕುಂಡಿ ತಾಣ, ಐಹೊಳೆ, ಬೆಂಗಳೂರಿನ ಅಮೃತ್‌ ಭಾರತ್‌ ಮೆಗಾ ಆರ್ಟ್‌ ಆ್ಯಂಡ್‌ ಹೆರಿಟೇಜ್‌ ಪಾರ್ಕ್‌, ಗೋಕರ್ಣ.

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ

Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

By Election; ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಒಲವು ಬಿಜೆಪಿ ಕಡೆಗೆ: ಶಾಸಕ ಭರತ್‌ ಶೆಟ್ಟಿ

By Election; ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಒಲವು ಬಿಜೆಪಿ ಕಡೆಗೆ: ಶಾಸಕ ಭರತ್‌ ಶೆಟ್ಟಿ

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.