BY Election: ಚನ್ನಪಟ್ಟಣದಲ್ಲಿ ಸ್ಪರ್ಧೆಗೆ ಒತ್ತಡ, ವರಿಷ್ಠರ ತೀರ್ಮಾನಕ್ಕೆ ಬದ್ಧ: ಡಿಕೆಸು

ಮೈತ್ರಿ ಧರ್ಮದನ್ವಯ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟು ಕೊಟ್ಟಿರಬಹುದು

Team Udayavani, Oct 20, 2024, 9:40 PM IST

BY Election: ಚನ್ನಪಟ್ಟಣದಲ್ಲಿ ಸ್ಪರ್ಧೆಗೆ ಒತ್ತಡ, ವರಿಷ್ಠರ ತೀರ್ಮಾನಕ್ಕೆ ಬದ್ಧ: ಡಿಕೆಸು

ಬೆಂಗಳೂರು: “ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನಗೆ ಒತ್ತಡ ಹೆಚ್ಚಿದೆ. ಆದರೆ, ಎಐಸಿಸಿ ಅಧ್ಯಕ್ಷರು ಹಾಗೂ ವರಿಷ್ಠರ ತೀರ್ಮಾನಕ್ಕೆ ಬದ್ಧ’ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು.

ಸದಾಶಿವನಗರ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಪಕ್ಷವು ಎರಡೂ¾ರು ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧ. ಚನ್ನಪಟ್ಟಣ ತಾಲೂಕು ಕಾಂಗ್ರೆಸ್‌ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲೂ ಪಕ್ಷದ ತೀರ್ಮಾನಕ್ಕೆ ಬದ್ಧ ಎನ್ನುವ ಮಾತು ಕೇಳಿಬಂದಿದೆ’ ಎಂದರು.

“ಚುನಾವಣೆಗೆ ನಮ್ಮ ಕಾರ್ಯಕರ್ತರಂತೂ ಸಜ್ಜಾಗಿದ್ದಾರೆ. ಶುಕ್ರವಾರ (ಅ.25)ವರೆಗೆ ಸಮಯವಿದೆ. ಬಿಜೆಪಿ-ಜೆಡಿಎಸ್‌ ಅಭ್ಯರ್ಥಿಗಳನ್ನು ಘೋಷಿಸಿದ್ದು, ಚನ್ನಪಟ್ಟಣಕ್ಕೆ ಮಾತ್ರ ಇನ್ನೂ ಘೋಷಿಸಿಲ್ಲ. ಅದರಂತೆ ಬಿಜೆಪಿಯವರು ಒಂದು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ.ಯಾರು ಸ್ಪರ್ಧಿಸುತ್ತಾರೆ ಎನ್ನುವುದು ಆಯಾ ಪಕ್ಷದ ತೀರ್ಮಾನಕ್ಕೆ ಬಿಟ್ಟದ್ದು ಎಂದರು.

ಜೆಡಿಎಸ್‌ ಚಿಹ್ನೆ ಅಡಿ ಯೋಗೇಶ್ವರ್‌ ಸ್ಪರ್ಧಿಸಲು ಒಪ್ಪುತ್ತಿಲ್ಲ ಎಂದು ಗಮನ ಸೆಳೆದಾಗ, “ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಅವರನ್ನೇ ಕೇಳಬೇಕು. ಇದು ಅವರ ಆಂತರಿಕ ವಿಚಾರ. ಮೈತ್ರಿ ಧರ್ಮದ ಪ್ರಕಾರ ಚನ್ನಪಟ್ಟಣವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿರಬಹುದು ಎನ್ನುವುದು ನನ್ನ ಅನಿಸಿಕೆ. ಅಂತಿಮ ತೀರ್ಮಾನ ಅವರಿಗೆ ಸಂಬಂಧಪಟ್ಟಿದ್ದೇ ಹೊರತು ನಮಗಲ್ಲ’ ಎಂದರು.

ಕಾಂಗ್ರೆಸ್‌ ಹೈಕಮಾಂಡ್‌ ನಿಮ್ಮನ್ನು ಅಭ್ಯರ್ಥಿ ಎಂದು ಸೂಚಿಸಿದರೆ ಎಂದು ಕೇಳಿದಾಗ, “ನಾನು ಪಕ್ಷದ ಶಿಸ್ತಿನ ಸಿಪಾಯಿ. ನನ್ನ ಆಚಾರ-ವಿಚಾರಗಳನ್ನು ಪಕ್ಷದ ಮುಖಂಡರ ಗಮನಕ್ಕೆ ತರುತ್ತೇನೆ. ನಾನು ಅಧಿಕಾರಕ್ಕೋಸ್ಕರ ಚುನಾವಣೆಗೆ ನಿಲ್ಲಬೇಕು ಎನ್ನುವ ಉದ್ದೇಶ ಹೊಂದಿರುವವನಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅಥವಾ ಎಐಸಿಸಿ ಅಧ್ಯಕ್ಷರು ಸಿಕ್ಕರೆ ಭೇಟಿ ಮಾಡಿ ಚರ್ಚಿಸುತ್ತೇನೆ’ ಎಂದು ಹೇಳಿದರು.

ಮನರಂಜನೆ ಮಾತುಗಳು:
ನಿಖಿಲ್‌ ಅವರನ್ನು ಕಣಕ್ಕಿಳಿಸಲು ಕುಮಾರಸ್ವಾಮಿ ಹಿಂದೇಟು ಹಾಕಿದ್ದಾರೆಯೇ ಎಂದಾಗ, “ಅವರ ಪಕ್ಷದ ತೀರ್ಮಾನವನ್ನು ಅವರಿಗೆ ಕೇಳಬೇಕು. ಕುಮಾರಸ್ವಾಮಿಯವರು ಬೆಳಗ್ಗೆ ಒಂದು, ಸಂಜೆ ಒಂದು ಮಾತನಾಡುತ್ತಿರುತ್ತಾರೆ. ಇವರ ಮಾತುಗಳನ್ನು ಜನರು ಮನರಂಜನೆ ಅಂತ ತಿಳಿದುಕೊಂಡಿದ್ದಾರೆ. ಕುಮಾರಸ್ವಾಮಿ ಮಾತುಗಳು ಎಂದೂ ಗಂಭೀರವಲ್ಲ. ಡಿ.ಕೆ.ಶಿವಕುಮಾರ್‌ ಅವರನ್ನು ಬೈಯ್ಯುವಾಗ ಮಾತ್ರ ಗಂಭೀರವಾಗಿರುತ್ತಾರೆ’ ಎಂದು ತೀಕ್ಷ್ಣವಾಗಿ ಹೇಳಿದರು.

ಟಾಪ್ ನ್ಯೂಸ್

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

5(1

ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

4

Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.