Udupi; ಶ್ರೀಕೃಷ್ಣ ಮಠಕ್ಕೆ ಬಂದು ಮೋಸ ಮಾಡಿದ ವ್ಯಕ್ತಿಗೆ ಜಾಮೀನು
ವಿಶೇಷ ದರ್ಶನಕ್ಕೆಂದು ಅಧಿಕಾರಿಯ ಸೋಗು
Team Udayavani, Oct 21, 2024, 6:55 AM IST
ಉಡುಪಿ: ಪ್ರಧಾನ ಮಂತ್ರಿ ಸಂಸದೀಯ ಅಧೀನ ಕಾರ್ಯದರ್ಶಿ ಎಂದು ನಂಬಿಸಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಆತಿಥ್ಯ ಸ್ವೀಕರಿಸಿದ್ದ ಆರೋಪಿಗೆ ಉಡುಪಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಗೊಳಿಸಿದೆ.
ಆರೋಪಿ ಉದಯ್ ಕುಮಾರ್ ತಾನು ಪ್ರಧಾನಮಂತ್ರಿ ಕಾರ್ಯಾಲಯದ ಸಂಸದೀಯ ಅಧೀನ ಕಾರ್ಯದರ್ಶಿ ಎಂದು ಶ್ರೀಕೃಷ್ಣ ಮಠದ ದಿವಾನ್ ನಾಗರಾಜ್ ಅವರಿಗೆ ಕರೆ ಮಾಡಿ, ತಾವು ಕುಟುಂಬ ಸಮೇತರಾಗಿ ಉಡುಪಿ ಶ್ರೀಕೃಷ್ಣಮಠದ ದರ್ಶನಕ್ಕೆ ಆಗಮಿಸುತ್ತಿದ್ದೇವೆ. ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಕೋರಿಕೊಂಡಿದ್ದರು. ಅದರಂತೆ ಅ. 10ರಂದು ಬೆಳಗ್ಗೆ ಇನ್ನೋವಾ ಕ್ರಿಸ್ಟಾ ವಾಹನದ ಮುಂಭಾಗದ ಬೋನೆಟ್ ಮೇಲೆ ಕೆಂಪು ಅಕ್ಷರದಲ್ಲಿ “ಗವರ್ನಮೆಂಟ್ ಆಫ್ ಇಂಡಿಯ’ ಹಾಗೂ ಹಿಂಬದಿಯ ಗಾಜಿನಲ್ಲಿ ಆರ್ಮಿ ಎಂಬುದಾಗಿ ಬರೆದಿದ್ದ ವಾಹನದಲ್ಲಿ ಬಂದ ಅವರಿಗೆ ಕೇಂದ್ರ ಅಧೀನ ಕಾರ್ಯದರ್ಶಿಗಳಿಗೆ ಕಲ್ಪಿಸುವಂತಹ ಎಲ್ಲ ವ್ಯವಸ್ಥೆ ಕಲ್ಪಿಸಿ, ವಿಶೇಷ ದರ್ಶನ ಮಾಡಿಸಿದ್ದರು.
ಅನಂತರದಲ್ಲಿ ಅವರ ಚಲನ ವಲನದ ಮೇಲೆ ಸಂಶಯಗೊಂಡ ದಿವಾನರು ಪ್ರಧಾನಮಂತ್ರಿ ಕಾರ್ಯಾ ಲಯದ ವೆಬ್‌ಸೈಟ್ ಪರಿಶೀಲಿಸಿದಾಗ ಬಂದವರು ಸುಳ್ಳು ಮಾಹಿತಿ ನೀಡಿದ್ದಾಗಿ ತಿಳಿದು, ಸರಕಾರಿ ಅಧಿಕಾರಿ ಎಂಬ ಸೋಗಿನಲ್ಲಿ ಕೃಷ್ಣಮಠಕ್ಕೆ ಬಂದು ನಂಬಿಸಿ ಮೋಸ ಮಾಡಿದ್ದಾರೆ ಎಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಆರೋಪಿ ಉದಯ್ ಕುಮಾರ್ ನ್ಯಾಯಾಲಯಕ್ಕೆ ಶರಣಾಗಿರುವ ಕಾರಣ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಆರೋಪಿ ಪರ ಉಡುಪಿಯ ವಕೀಲ ಚೇರ್ಕಾಡಿ ಅಖಿಲ್ ಬಿ. ಹೆಗ್ಡೆ ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.