Fraud: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್
Team Udayavani, Oct 21, 2024, 12:58 PM IST
ಬೆಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಂದ 9 ಲಕ್ಷ ರೂ. ಪಡೆದು ವಂಚಿಸಿದ ಆರೋಪದಡಿ ಐವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಾಣವಾರದ ಗಾಣಿಗರಹಳ್ಳಿ ಗಣಪತಿನಗರ ನಿವಾಸಿ ಶ್ರೀಪಾದ ಭಟ್(34) ವಂಚನೆಗೊಳಗಾದವರು. ಅವರು ನೀಡಿದ ದೂರಿನ ಮೇರೆಗೆ ಕೊಪ್ಪಳ ಮೂಲದ ಅಪ್ರಮೆಯ, ಸುಳ್ಯ ಮೂಲದ ಪ್ರವೀಣ್, ಪ್ರೀತಮ್ ಶೆಟ್ಟಿ, ಕುಂದಾಪುರ ಮೂಲದ ಮಮತಾ ಶೆಟ್ಟಿ ಹಾಗೂ ಬೆಂಗಳೂರಿನ ಪ್ರಸನ್ನ ಎಂಬುವರ ವಿರುದ್ಧ ವಂಚನೆ ಆರೋಪದಡಿ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.
ಏನಿದು ಪ್ರಕರಣ?: ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಶ್ರೀಪಾದ್ ಭಟ್‌ಗೆ ಕಳೆದ ವರ್ಷ ಅಜಯ್ ಎಂಬ ಸ್ನೇಹಿತನ ಮೂಲಕ ಅಪ್ರಮೆಯನ ಪರಿಚಯವಾಗಿದೆ. ಈ ಅಪ್ರಮೆಯ ದೂರವಾಣಿ ಕರೆ ಮಾಡಿ ಪ್ರವೀಣ್ ಎಂಬುವರನ್ನು ಶ್ರೀಪಾದ ಭಟ್‌ಗೆ ಪರಿಚಯಿಸಿದ್ದಾನೆ. ಈ ವೇಳೆ ಪ್ರವೀಣ್, ನಾನು ಬೆಹ್ರೇನ್ ದೇಶದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾನೆ. ಬಳಿಕ ನಿಮಗೂ ಬೆಹ್ರೇನ್ ದೇಶದಲ್ಲಿ ಕೆಲಸ ಕೊಡಿಸುತ್ತೇನೆಂದು ದೂರುದಾರರಿಗೆ ನಂಬಿಸಿ, ವಿವಿಧ ಹಂತಗಳಲ್ಲಿ ಅಪ್ರಮೆಯ, ಪ್ರವೀಣ್, ಪ್ರೀತಮ್ ಶೆಟ್ಟಿ, ಮಮತಾ ಶೆಟ್ಟಿ ಹಾಗೂ ಪ್ರಸನ್ನ ಎಂಬುವರು 9.08 ಲಕ್ಷ ರೂ. ಪಡೆದುಕೊಂಡಿದ್ದಾರೆ.
ಹಣ ನೀಡಿದ ಬಳಿಕ ಕೆಲಸದ ಬಗ್ಗೆ ಪ್ರಶ್ನಿಸಿದಾಗ ಆರೋಪಿಗಳು, ಸದ್ಯದಲ್ಲೇ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸುತ್ತಿದ್ದರು. ಆದರೆ, ಕಳೆದ ನಾಲ್ಕೈದು ತಿಂಗಳಿಂದ ದೂರುದಾರರ ಸಂಪರ್ಕಕ್ಕೆ ಸಿಕ್ಕಿಲ್ಲ. ಹಣವನ್ನೂ ವಾಪಾಸ್ ನೀಡಿಲ್ಲ. ಹೀಗಾಗಿ ಶ್ರೀಪಾದ್ ಭಟ್ ಈ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.