Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು
Team Udayavani, Oct 22, 2024, 5:40 PM IST
ಹುಣಸಗಿ: ತಾಲೂಕಿನ ಬೆಂಚಿಗಡ್ಡಿ ಬಳಿ ಕೃಷ್ಣಾನದಿಯಲ್ಲಿ(ಹೈಡ್ರೋ ವಿದ್ಯುತ್ ಉತ್ಪಾದನಾ ಕೇಂದ್ರ) ಕಾಲುಜಾರಿ ಇಬ್ಬರು ಯುವಕರು ಮೃತಪಟ್ಟ ಘಟನೆ ಅ.22ರ ಮಂಗಳವಾರ ನಡೆದಿದೆ.
ನಾಗಲ್ಯಾಂಡ್ ಮೂಲದ ಆಲಮ್ (23), ವಿಜಯಪುರ ಮೂಲದ ಮಾರುತಿ ಮುತ್ತಗಿ(24) ಮೃತ ದುರ್ದೈವಿಗಳು.
ಅ.21ರ ಸೋಮವಾರ ಕೃಷ್ಣಾನದಿಯಲ್ಲಿ ಸ್ನಾನಕ್ಕಾಗಿ ತೆರಳಿದಾಗ ನಾಗಲ್ಯಾಂಡ್ ಮೂಲದ ಆಲಮ್ ಎಂಬ ಯುವಕ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ. ಪಕ್ಕದಲ್ಲಿಯೇ ಇದ್ದ ವಿಜಯಪುರ ಜಿಲ್ಲೆಯ ಮುತ್ತಗಿ ಗ್ರಾಮದ ಮಾರುತಿ ಎಂಬಾತನು ರಕ್ಷಣೆಗೆ ನೀರಿಗೆ ಇಳಿದಾಗ ಇಬ್ಬರು ನೀರು ಪಾಲಾಗಿದ್ದಾರೆ ಎನ್ನಲಾಗಿದೆ.
ಅ.22ರ ಮಂಗಳವಾರ ಅಗ್ನಿಶ್ಯಾಮಕ ಸಿಬ್ಬಂದಿ ಶೋಧ ಕಾರ್ಯಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಇಬ್ಬರು ಹೈಡ್ರೋ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಸೆಕ್ಯೂರಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.