Maharashtra; ಚುನಾವಣೆ ಸೀಟು ಹಂಚಿಕೆ: ರಾಷ್ಟ್ರೀಯ ಪಕ್ಷಗಳಿಗೆ ಹೆಚ್ಚು ಸ್ಥಾನ?
Team Udayavani, Oct 23, 2024, 6:17 AM IST
ಮುಂಬಯಿ: ಚುನಾವಣೆ ಹೊಸ್ತಿಲಿನಲ್ಲಿರುವ ಮಹಾರಾಷ್ಟ್ರ ದಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮತ್ತು ವಿಪಕ್ಷ ಮಹಾವಿಕಾಸ ಅಘಾಡಿಯಲ್ಲಿ ಸ್ಥಾನಗಳ ಹೊಂದಾಣಿಕೆ ಅಂತಿಮ ಗೊಂಡಿದೆ ಎನ್ನಲಾಗಿದೆ. 2 ಮೈತ್ರಿಕೂಟಗಳಲ್ಲಿ ರಾಷ್ಟ್ರೀಯ ಪಕ್ಷಗಳಾಗಿರುವ ಬಿಜೆಪಿ, ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳನ್ನು ಪಡೆದುಕೊಂಡಿವೆ ಎಂದು ತಿಳಿದು ಬಂದಿದೆ.
ಆಡಳಿತಾರೂಢ ಮಹಾಯುತಿ (ಎನ್‌ಡಿಎ) 288 ಕ್ಷೇತ್ರಗಳ ಪೈಕಿ ಬಿಜೆಪಿಗೆ 152-155, ಸಿಎಂ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ 78-80, ಅಜಿತ್ ಪವಾರ್ ಬಣದ ಎನ್‌ಸಿಪಿಗೆ 52-54 ಕ್ಷೇತ್ರಗಳು ಹಂಚಿಕೆಯಾಗಿದೆ ಎನ್ನಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜತೆಗೆ ನಡೆಸಿದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಬಿಜೆಪಿ ಈಗಾಗಲೇ 99 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಮಹಾ ವಿಕಾಸ ಅಘಾಡಿಯಲ್ಲಿ ಕಾಂಗ್ರೆಸ್ 105 ರಿಂದ 110 ಸ್ಥಾನ ಪಡೆಯುವ ಸಾಧ್ಯತೆ ಇದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 90- 95, ಶರದ್ ಪವಾರ್ ನೇತೃತ್ವದ ಎನ್‌ಸಿಪಿ 75 ರಿಂದ 80 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ ಎನ್ನಲಾಗಿದೆ. ಆದರೆ ಅಘಾಡಿಯ ಮೂಲಗಳು ಪ್ರಕಾರ ಸೀಟು ಹಂಚಿಕೆ ಮಾತುಕತೆ ಪೂರ್ಣವಾಗಿಲ್ಲ. ನ.20ರಂದು ಚುನಾವಣೆ ನಡೆಯಲಿದ್ದು, ನ.23ರಂದು ಫಲಿತಾಂಶ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.