Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ
ಮೈಸೂರಿನಲ್ಲಿ ಸಿದ್ದರಾಮಯ್ಯ ಭಾವನಾತ್ಮಕ ಮಾತು
Team Udayavani, Oct 22, 2024, 11:54 PM IST
ಮೈಸೂರು: ನನ್ನ ಜೀವನ ತೆರೆದ ಪುಸ್ತಕ, ಯಾರು ಬೇಕಾದರೂ ಓದಬಹುದು, 40 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ನನಗೆ ಸ್ವಂತ ಮನೆಯೇ ಇರಲಿಲ್ಲ. ಸ್ವಂತ ಮನೆ ಇಲ್ಲದ ಸಿಎಂ ಯಾರಾದರೂ ಇದ್ದರೆ ಅದು ನಾನೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳವಾರ ನಾನಾ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದ ಅವರು, ಈಗ ಮೈಸೂರಿನಲ್ಲಿ ಮನೆ ಕಟ್ಟುತ್ತಿದ್ದೇನೆ. ನಾನು ವಾಸ ಮಾಡುತ್ತಿರುವ ಮನೆ ಸ್ನೇಹಿತ ಮರಿಸ್ವಾಮಿ ಅವರದ್ದು, ಸಿಎಂ ಆಗಿದ್ದವರು ಬೇರೆಯವರ ಮನೆಯಲ್ಲಿ ಇರಬೇಕಾ? ಎಂದು ನೀವೇ ಹೇಳಿ ಎಂದು ಪ್ರಶ್ನಿಸಿದರು.
ಮುಡಾ ಹಗರಣ ವಿಚಾರದಲ್ಲಿ ತಮಗಾದ ಬೇಸರವನ್ನು ವ್ಯಕ್ತಪಡಿಸಿದ್ದಲ್ಲದೇ, ತಮ್ಮ ಭಾಷಣದುದ್ದಕ್ಕೂ ಭಾವನಾತ್ಮಕವಾಗಿ ಮಾತನಾಡುತ್ತಾ ತಮ್ಮ ವಿರುದ್ಧ ವಿಪಕ್ಷಗಳು ಮಾಡುತ್ತಿರುವ ಆರೋಪಕ್ಕೆ ಜನತೆಯೇ ಉತ್ತರ ನೀಡಬೇಕು ಎಂದು ಪರೋಕ್ಷವಾಗಿ ಹೇಳಿದರು.
ನೀವೇ ನನ್ನ ಮಾಲಕರು
ನಾಲ್ಕು ದಶಕದಿಂದ ರಾಜಕೀಯದಲ್ಲಿದ್ದೀನಿ, ನಿಮ್ಮಿಂದ ಒಂದು ರೂಪಾಯಿ ಲಂಚ ಪಡೆದಿದ್ದೇನಾ?, ಯಾರಿಗಾದರೂ ಅನ್ಯಾಯ ಮಾಡಿದ್ದೇನಾ?, ನನ್ನ ವರ್ಚಸ್ ತಗ್ಗಿಸಲು ಬಿಜೆಪಿ, ಜೆಡಿಎಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ. ನೀವೇ ನನ್ನ ಮಾಲಕರು, ನನ್ನ ಮೇಲೆ ಮಾಡುತ್ತಿರುವ ಆರೋಪ ಸಹಿಸಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.